ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಅವರು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು.ಎಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚೆಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಒಳಪಟ್ಟು ಚೇತರಿಸಿಕೊಳ್ಳುತ್ತಿದ್ದು, ಅವರನ್ನು ಭೇಟಿ ಮಾಡಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು.
ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರು ಮತ್ತು ದೇವೇಗೌಡರು ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯ ಮೆಚ್ಚಿ ಕರ್ನಾಟಕದಲ್ಲಿ ಬಿಜೆಪಿ ಜೊತೆ ಸೀಟು ಹಂಚಿಕೆ ಮಾಡಿಕೊಂಡಿದ್ದಾರೆ ಎಂದರು.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು. ದಾವಣಗೆರೆಯಲ್ಲೂ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರನ್ನು ಗೆಲ್ಲಿಸಲು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಜೊತೆಯಲ್ಲಿದ್ದರು..