
ಭದ್ರಾವತಿ : ಸತತ ನಾಲ್ಕನೇ ಬಾರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯನಾಗಿ ಎರಡು ಲಕ್ಷಗಳ ಅಧಿಕ ಮತಗಳ ಅಂತರದಿAದ ಚುನಾಯಿತನಾಗಲು ಪಕ್ಷದ ಎಲ್ಲಾ ಕಾರ್ಯಕರ್ತರ ತಳ ಹಂತದ ಪರಿಶ್ರಮ ಬೆಲೆ ಕಟ್ಟಲಾಗದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಪಟ್ಟಣದ ಶ್ರೀ ಮಂಜುನಾಥ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಭದ್ರಾವತಿ ಬಿಜೆಪಿ ನಗರ ಮಂಡಲ ಸಂಸದ ರಾಘವೇಂದ್ರರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಲೋಕಸಭಾ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ತಮ್ಮ ಖಾಸಗಿ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಕಾರ್ಯಕರ್ತರು ಸತತ ಐವತ್ತು ದಿನಕ್ಕೂ ಹೆಚ್ಚು ಕೆಲಸ ಮಾಡಿದ್ದಾರೆ. ಸತತ ಐವತ್ತು ದಿನಕ್ಕೂ ಅಧಿಕ ಸಮಯ ಮೀಸಲಿಟ್ಟು ಹಗಲಿರುಳು ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ಹಾಗೂ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಹಿತೈಷಿಗಳಿಗೆ ಹೃದಯ ಪೂರ್ವಕವಾಗಿ ಕೃತಜ್ಞತೆ ತಿಳಿಸುತ್ತೇನೆ.
ನನ್ನ ಮೇಲೆ ನೀವು ಇಟ್ಟಿರುವ ಅಚಲ ವಿಶ್ವಾಸಕ್ಕೆ ನಾನು ಸದಾ ಚಿರಋಣಿಯಾಗಿದ್ದೇನೆ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಕ್ಷೇತ್ರದಲ್ಲಿ ಮತ್ತಷ್ಟು ಹುಮ್ಮಸ್ಸಿನಿಂದ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೆ ತರುವ ಮೂಲಕ ಕಾರ್ಯನಿರ್ವಹಿಸುತ್ತೇನೆ. ಜೊತೆಗೆ ನಿಮ್ಮ ಆಶೋತ್ತರಗಳನ್ನು ನೆರೆವೇರಿಸುವ ಸಂಕಲ್ಪ ತೊಡುತ್ತೇನೆ ಎಂದರು.


ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಅನುಷ್ಠಾನಕ್ಕೆ ತಂದಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡು ಹಾಗೂ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಂತ್ಯೋದ್ಯಯ ಪರಿಕಲ್ಪನೆಯಡಿ ಜನರ ಜೀವನ ಮಟ್ಟ ಸುಧಾರಿಸಲು ಶ್ರಮಿಸುತ್ತೇನೆ. ಇನ್ನು ಜಾರಿಗೆ ತಂದ ಐತಿಹಾಸಿಕ ಜನಪರ ಯೋಜನೆಗಳ ಮೇಲೆ ನಂಬಿಕೆ ಇಟ್ಟು ಮತನೀಡಿದ ಕ್ಷೇತ್ರದ ಮತದಾರ ಬಾಂಧವರಿಗೆ ಈ ವೇದಿಕೆಯ ಮೂಲಕ ಕೃತಜ್ಞತೆ ಸಲ್ಲಿಸಲು ನಾನು ಉತ್ಸುಕನಾಗಿದ್ದೇನೆ. ಭವಿಷ್ಯದಲ್ಲಿ ನನ್ನ ಲೋಕಸಭಾ ಕ್ಷೇತ್ರವನ್ನು ಎಲ್ಲಾ ರಂಗದಲ್ಲಿಯೂ ಅಭಿವೃದ್ಧಿ ಪಥದ ಹಾದಿಯಲ್ಲಿ ತರುವ ಮೂಲಕ ಕಾರ್ಯಯೋಜನೆ ಕೈಗೊಳ್ಳುವ ಭರವಸೆ ನೀಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್, ವಿಧಾನಪರಿಷತ್ ಶಾಸಕ ಡಾ.ಧನಂಜಯ ಸರ್ಜಿ, ಬಿಜೆಪಿ ಭದ್ರಾವತಿ ಅಧ್ಯಕ್ಷ ಧರ್ಮ ಪ್ರಸಾದ್ ಪ್ರಮುಖರಾದ ಭಾನುಪ್ರಕಾಶ್, ರುದ್ರೇಶ್, ಹಾಲೇಶಪ್ಪ , ಶ್ರೀ ಮಂಜುನಾಥ್, ಕದಿರೇಶ್, ಆನಂದ್ ಅವರು,ಕರುಣಾಮೂರ್ತಿ ಅವರು, ಶಾರದಾ ಅಪ್ಪಾಜಿ ಅವರು,ಚಂದ್ರಶೇಖರ್ ಅವರು ಸೇರಿದಂತೆ ಮಂಡಲದ ಎಲ್ಲಾ ಪ್ರಮುಖ ಕಾರ್ಯಕರ್ತರು, ಮುಖಂಡರು, ಗಣ್ಯರು ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
——-