ಬೆಂಗಳೂರು.
ರಾಜ್ಯದಲ್ಲಿ ವಕ್ಫ್ ಆಸ್ತಿ ಒತ್ತುವರಿ ಕುರಿತಂತೆ ರೈತರಿಗೆ ನೀಡಿದ್ದ ನೋಟಿಸ್ಗಳನ್ನು ಹಿಂಪಡೆದಿರುವ ಸರ್ಕಾರದ ಆದೇಶ ಪ್ರಶ್ನಿಸಿ ಮತ್ತು ವಕ್ಫ್ ಆಸ್ತಿ ಒತ್ತುವರಿಗೆ ಸಂಬAಧಿಸಿದAತೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರಿನ ನಿವಾಸಿ ಸೈಯದ್ ಎಜಾಜ್ ಅಹ್ಮದ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ. ವಿ. ಅರವಿಂದ್ ಅವರ ವಿಭಾಗೀಯ ಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿತು.
ಅಲ್ಲದೆ, ಈ ಅರ್ಜಿ ರಾಜಕೀಯ ಪ್ರೇರಿತ ಮತ್ತು ಪ್ರಚಾರಕ್ಕಾಗಿ ಸಲ್ಲಿಸಿದಂತಿದೆ. ಅರ್ಜಿದಾರರ ಪ್ರಾಮಾಣಿಕತೆಯು ಪ್ರಶ್ನಾರ್ಹವಾಗಿದೆ. ಅರ್ಜಿಯಲ್ಲಿನ ಎಲ್ಲ ಮನವಿಗಳ ಬಗ್ಗೆ ಕಾರ್ಯಾಂಗ ಕ್ರಮ ಕೈಗೊಳ್ಳಬೇಕು. ಅರ್ಜಿಯಲ್ಲಿ ವಿಚಾರಣೆಗೆ ಅರ್ಹವಾದ ಯಾವುದೇ ಅಂಶಗಳಿಲ್ಲ ಎಂದು ಪೀಠ ತಿಳಿಸಿತು. ಜೊತೆಗೆ, ಅರ್ಜಿದಾರರಿಗೆ 10 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿತು. ಆದರೆ, ಈ ವೇಳೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದ ಹಿನ್ನೆಲೆಯಲ್ಲಿ ದಂಡ ವಿಧಿಸುವುದನ್ನು ನ್ಯಾಯಾಲಯ ಕೈಬಿಟ್ಟಿತು.