ನ್ಯಾಮತಿ.; ಗ್ರಾಮ ಪಂಚಾಯಿತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರ, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳ (ಎಂಬಿಕೆ ಮತ್ತು ಎಲ್‌ಸಿಆರ್‌ಪಿಗಳ ಮಹಾ ಒಕ್ಕೂಟದ) ನ್ಯಾಮತಿ ತಾಲೂಕು ಘಟಕದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶಾಸಕ ಡಿ.ಜಿ.ಶಾಂತನಗೌಡರಿಗೆ ನ್ಯಾಮತಿ ಒಕ್ಕೂಟದ ವತಿಯಿಂದ ಮನವಿ ಪತ್ರ ನೀಡಲಾಯಿತು.
ಪಂಚಾಯಿತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರ ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ಯಿಗಳ ಖಾಯಂಗೊಳಿಸಿ ಎಂಬಿಕೆಗಳಿಗೆ ಕನಿಷ್ಟ 20ಸಾವಿರ, ಎಲ್‌ಸಿಆರ್‌ಪಿಗಳಿ ಕನಿಷ್ಟ 15ಸಾವಿರ ವೇತನ ನೀಡುವಂತೆ ಚಳಿಗಾಲ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಒತ್ತಾಯಿಸಿ ಹಾಗೂ ಅನಿರ್ಧಿಷ್ಟಾವದಿ ಮುಷ್ಕರಕ್ಕೆ ಅನುಮತಿ ನೀಡುವಂತೆ ಕೋರಿದ್ದಾರೆ.
ಕೆಲಸ ಸ್ಥಗಿತಗೊಳಿಸಿ ಮುಷ್ಕರ
ತಾಲೂಕಿನ 17ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎನ್‌ಆರ್‌ಎಲ್‌ಎಂ ಸಂಜೀವಿನಿ ಎಂಬಿಕೆ ಮತ್ತು ಎಲ್‌ಸಿಆರ್‌ಪಿಗಳು ಯೂನಿಯನ್ ನಿರ್ಣಯದಂತೆ ಡಿ 1 ಶುಕ್ರವಾರದಿಂದ ತಮ್ಮ ಕೆಲಸಗಳನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿದ್ದಾರೆ.
ವಿವಿಧ ಬೇಡಿಕೆಗಳಿಗೆ ಒತ್ತಾಯ
ಗೌರವ ಧನ ಹೆಚ್ಚಳ, ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತು ಜೀವನೋಪಾಯ ಇಲಾಖೆಯ ಸಚಿವರ ಅಧ್ಯಕ್ಷತೆಯಲ್ಲಿ ವಿವಿಧ ಬೇಡಿಕೆಗಳ ಕುರಿತು ಸಭೆ ನಡೆಸಲು ಸೂಚಿಸುವುದು, ಇಎಸ್‌ಐ ಮತ್ತು ಪಿಎಫ್ ಸೌಲಭ್ಯಗಳನ್ನು ಒದಗಿಸುವುದು, ಒಕ್ಕೂಟದ ಕಚೇರಿಗಳಿಗೆ ಕಂಪ್ಯೂಟರ್ , ಪ್ರಿಂಟರ್ ಸೇರಿದಂತೆ ಇತರೆ ಸೌಲಭ್ಯ , ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಸಿಬ್ಬಂದಿಗಳಿಗೆ ಸಮವಸ್ತ್ರ , ಗುರುತಿನ ಚೀಟಿ ಸೇರಿದಂತೆ ವಿವಿಧ ಬೇಡಿಕೆಗಾಗಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರ , ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳ ಎಂಬಿಕೆ ಮತ್ತು ಎಲ್‌ಸಿಆರ್‌ಪಿಗಳ ಮಹಾ ಒಕ್ಕೂಟದ ನ್ಯಾಮತಿ ತಾಲೂಕು ಘಟಕದ ಅಧ್ಯಕ್ಷೆ ಪ್ರಿಯಾಂಕ, ಉಪಾಧ್ಯಕ್ಷೆ ಶೀಲಾ, ಕಾರ್ಯದರ್ಶಿ ಸವಿತಾ , ಖಜಾಂಚಿ ಆಶಾ ಸೇರಿದಂತೆ ಇತರರು ಇದ್ದರು.