ನ್ಯಾಮತಿ.; ಕೆಎಸ್ಆರ್ಟಿಸಿ ಬಸ್ಗಳನ್ನು ತಡೆದು ದಿಢೀರ್ ತಡೆದು ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಗುರುವಾರ ತಾಲೂಕಿನ ಗೋವಿನಕೋವಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ಗ್ರಾಮದ ಮೂಲಕ ಹೊನ್ನಾಳಿ ಮತ್ತು ಶಿವಮೊಗ್ಗ ಮಾರ್ಗದಲ್ಲಿ ಸಾಗುವ ಕೆಎಸ್ಆರ್ಟಿಸಿ ಬಸ್ಸುಗಳನ್ನು ನಿಲುಗಡೆ ಮಾಡದಿರುವುದರಿಂದ ನಿತ್ಯವು ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಕೂಡಲೇ ಬಸ್ಸುಗಳನ್ನು ನಿಲುಗಡೆಗೆ ಮಾಡುವ ಜೊತೆಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಈ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಕೆಎಸ್ಆರ್ಟಿಸಿ ಬಸ್ಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ನಂತರ ಗೋವಿನಕೋವಿ ಗ್ರಾಮಪಂಚಾಯಿತಿ ಅಧ್ಯಕ್ಷರಾದ ದಾನೇಶಪ್ಪ ನೇತೃತ್ವದಲ್ಲಿ ಕೆಎಸ್ ಆರ್ ಟಿ ಸಿ ಶಿವಮೊಗ್ಗ ವಿಭಾಗೀಯ ನಿಯಂತ್ರಣಾಧಿಕಾರಿ ಶಿವಮೊಗ್ಗ ಇವರಿಗೆ ಹೆಚ್ಚಿನ ಬಸ್ಗಳನ್ನು ನಿಲುಗಡೆ ಮಾಡುವಂತೆ ಮನವಿ ನೀಡಲಾಯಿತು.