ನ್ಯಾಮತಿ : ಯಾವುದೇ ಪರವಾನಗಿ ಇಲ್ಲದೆ ಸಾರ್ವಜನಿಕ ಸ್ಥಳವಾದ ಪೆಟ್ಟಿಗೆ ಅಂಗಡಿಯೊಂದರಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಶನಿವಾರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನದಲ್ಲಿರಿಸಿದ್ದಾರೆ.
ತಾಲೂಕಿನ ಮಾದಾಪುರ ಗ್ರಾಮದ ವಿಶ್ವ ಯಾನೆ ವಿಶ್ವನಾಥ ಬಂಧಿತ ಆರೋಪಿಯಾಗಿದ್ದು, ಗಸ್ತಿನಲ್ಲಿದ್ದ ಪೊಲೀಸರು ಖಚಿತ ಮಾಹಿತಿ ಆಧಾರದ ಮೇಲೆ ಈ ದಾಳಿ ನಡೆಸಿ 36ಲೀ ಮದ್ಯ ವಶ ಪಡಿಸಿಕೊಂಡಿದ್ದಾರೆ. ಈ ಬಗ್ಗೆ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ