ಚಿತ್ರದುರ್ಗ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪನವರ ಹುಟ್ಟು ಹಬ್ಬದ ಪ್ರಯುಕ್ತ ನಗರದ ಸಿದ್ದಾರ್ಥ ಬಡಾವಣೆಯ ಉದ್ಯಾನವನದಲ್ಲಿ ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ, ಋಷಿ ಸಂಸ್ಕೃತಿ ಗುರುಕುಲ ಮಹಾ ಸಂಸ್ಥಾನ ಅವರ ಸಹಯೋಗದೊಂದಿಗೆ ಬಿಜೆಪಿ ಮುಖಂಡ ಜಿಎಸ್ ಅನಿತ್ ಕುಮಾರ್ ಅವರ ನೇತೃತ್ವದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ನಂತರ ಮಾತನಾಡಿದ ಅನಿತ್, ಇಂದು ಇಡೀ ರಾಜ್ಯಾದ್ಯಂತ
ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪನವರ ಅವರ ಹುಟ್ಟು ಹಬ್ಬದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ನಮ್ಮ ದೇಶ ಹಾಗೂ ವಿಶ್ವದಲ್ಲಿಯೇ ಪರಿಸರ ಕಲುಶಿತವಾಗಿದೆ. ಮನುಷ್ಯ ತನ್ನ ಸ್ವಾರ್ಥಕ್ಕೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ. ಆದ್ದರಿಂದ ಪ್ರತಿ ಮನೆಯಲ್ಲೂ ಒಂದು ಗಿಡ ನೆಡುವುದರ ಮೂಲಕ ಪರಿಸರವನ್ನು ಉಳಿಸಬೇಕು. ಇಂತಹ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಪರಿಸರ ಮತ್ತು ವನ್ಯಜೀವಿ ರಕ್ಷಣಾ ವೇದಿಕೆ ಯವರು ಸಾಮಾಜಿಕ ಕಳಕಳಿ ಇರುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಸಂತಸ ತಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನೀವು ಮಾಡುವ ಉತ್ತಮ ಕಾರ್ಯಕ್ರಮಗಳಿಗೆ ನನ್ನ ಸಹಕಾರ ಇರುತ್ತದೆ ಎಂದು ಇದೇ ವೇಳೆ ಬೆಂಬಲ ಸೂಚಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ನವೀನ್ ಕುಮಾರ್, ಕಾರ್ಯದರ್ಶಿ ತಿಪ್ಪೇಸ್ವಾಮಿ, ರಾಜ್ಯ ಸಂಚಾಲಕರಾದ ರುದ್ರಮನಿ, ರಾಜ್ಯ ಸಂಘಟನಾ ಕಾರ್ಯದರ್ಶಿ ವೇದಮೂರ್ತಿ ಭೀಮಸಮುದ್ರ, ಅಜಯ್ ಕುಮಾರ್, ಬಸವರಾಜ್, ಫಕೀರಪ್ಪ, ಅಶೋಕ್, ಪ್ರಸನ್ನ, ದುರ್ಗೇಶ್, ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿಯ ಅಧ್ಯಕ್ಷರಾದ ಲಿಂಗರಾಜು ಸೇರಿದಂತೆ ಇತರರು ಇದ್ದರು. ಇದೇ ವೇಳೆ ಜಿ.ಎಸ್. ಕುಮಾರ್ ಅವರನ್ನು ಪರಿಸರ ಮತ್ತು ವನ್ಯಜೀವಿ ಸುರಕ್ಷಣಾ ವೇದಿಕೆಯಿಂದ ಸನ್ಮಾನಿಸಲಾಯಿತು.