ದಾವಣಗೆರೆ: ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ನ.11ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಛಲವಾದಿ ಮಹಾಸಭಾ ಅಧ್ಯಕ್ಷ ಎನ್‌.ರುದ್ರಮುನಿ ತಿಳಿಸಿದರು.‘2022ರಿಂದ ಒನಕೆ ಓಬವ್ವ ಜಯಂತಿಯನ್ನು ಸರ್ಕಾರದಿಂದ ಆಚರಿಸಲಾಗುತ್ತಿದೆ. ಜಿಲ್ಲಾಡಳಿತದ ಸಹಯೋಗದೊಂದಿಗೆ ಜಯಂತಿ ಆಯೋಜಿಸಲಾಗಿದ್ದು, ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

‘ನಗರದ ವೃತ್ತವೊಂದಕ್ಕೆ ಒನಕೆ ಓಬವ್ವ ಹೆಸರು ನಾಮಕರಣ ಮಾಡಬೇಕು. ಸಮುದಾಯ ಭವನಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ಕವಿ ಸಿದ್ದಲಿಂಗಯ್ಯ ಅವರ ಹೆಸರನ್ನು ರಸ್ತೆಯೊಂದಕ್ಕೆ ಇಡಬೇಕು. ವಿಶ್ವವಿದ್ಯಾಲಯದಲ್ಲಿ ಓಬವ್ವ ಅಧ್ಯಯನ ಕೇಂದ್ರ ತೆರೆಯಬೇಕು ಎಂಬ ಬೇಡಿಕೆಯನ್ನು ಜಿಲ್ಲಾಡಳಿತದ ಎದುರು ಇಡಲಾಗುವುದು’ ಎಂದು ಹೇಳಿದರು. ಮಹಾಸಭಾದ ಮಾಜಿ ಗೌರವಾಧ್ಯಕ್ಷ ಎಸ್‌.ಶೇಖರಪ್ಪ, ಪ್ರಧಾನ ಕಾರ್ಯದರ್ಶಿ ರೇವಣಸಿದ್ದಪ್ಪ, ನಿವೃತ್ತ ವೈದ್ಯಾಧಿಕಾರಿ ಡಾ.ಜಗನ್ನಾಥ್‌, ನಿವೃತ್ತ ಎಂಜಿನಿಯರ್‌ ನಾಗಭೂಷಣ್‌, ಗುತ್ತಿಗೆದಾರ ಎಚ್‌.ಚಂದ್ರಪ್ಪ ಹಾಜರಿದ್ದರು.

Share.
Leave A Reply

Exit mobile version