ದಾವಣಗೆರೆ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಬಿಡುಗಡೆ ಹಿಂದೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಯವರ ಕೈವಾಡ ಇದ್ಯಾ..? ಇಂಥ ಅನುಮಾನ ಹುಟ್ಟಿಕೊಂಡಿರೋದ್ಯಾಕೆ..? ತೆನೆ ಹೊತ್ತ ಮಹಿಳೆ ಪೆನ್ಡ್ರೈವ್ ಹೊರಬೇಕಾಗುತ್ತಾ? ಕಾಂಗ್ರೆಸ್ ವಾಗ್ಬಾಣಗಳಿಗೆ ಕಮಲ-ದಳ ಶಾಕ್ ಆಗ್ತಿರೋದ್ಯಾಕೆ.?
ಸಿಕ್ಕ ಪ್ರತಿ ಅವಕಾಶವನ್ನ ಕಾಂಗ್ರೆಸ್ ನಾಯಕರು ಅತ್ಯಂತ ಜಾಣ್ಮೆಯಿಂದ, ಜಾಗರೂಕತೆಯಿಂದ ಬಳಸಿಕೊಳ್ತಾಯಿದ್ದಾರೆ. ಅದರಲ್ಲೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ಪೆನ್ಡ್ರೈವ್ ವಿವಾದ ಕಾಂಗ್ರೆಸ್ಗೆ ಬ್ರಹ್ಮಾಸ್ತ್ರವಾಗಿ ಮಾರ್ಪಟ್ಟಿದೆ. ಆ ಪೆನ್ಡ್ರೈವ್ ಬಿಡುಗಡೆಯ ಹಿಂದೆ ಡಿಸಿಎಂ ಡಿಕೆಶಿ ಕೈವಾಡ ಇದೆ. ಆ ಮಹಾ ನಾಯಕ ಡಿಕೆಶಿ ಅಂತೇಳಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಆರೋಪಿಸಿದ್ರು. ಅದಕ್ಕೀಗ ಸಂಸದ ಡಿಕೆ ಸುರೇಶ್ ತಿರುಗೇಟನ್ನ ಕೊಟ್ಟಿದ್ದಾರೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆ ಹಿಂದೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಕೈವಾಡ ಇದೆ ಎಂದು ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ. ವಿಡಿಯೋ ಬಿಡುಗಡೆ ಹಿಂದೆ ಮೈತ್ರಿ ನಾಯಕರು ಹಾಗೂ ಹೆಚ್ಡಿ ಕುಮಾರಸ್ವಾಮಿ ಕೈವಾಡ ಇದೆ. ಹೆಣ್ಣು ಮಕ್ಕಳಿಗೆ ಅನ್ಯಾಯ ಆಗಿರುವ ಬಗ್ಗೆ ಗಮನ ಹರಿಸಬೇಕಿದೆ. ಈ ಕೇಸ್ ಬಗ್ಗೆ ಹಾಸನ ಜಿಲ್ಲೆಯಲ್ಲಿ ಮೊದಲೇ ಗುಸುಗುಸು ಇತ್ತು. ಹಾಗೆಂದು ವೀಡಿಯೋ ನೋಡಿದವರು ಯಾರೂ ಇರಲಿಲ್ಲ. ನ್ಯಾಯಾಲಯದ ತಡೆಯಾಜ್ಞೆ ತಂದಾಗ ಅದು ಖಚಿತ ಆಗಿದೆ. ಪೆನ್ಡ್ರೈವ್ ಬಿಡುಗಡೆಯಾದಾಗ ಬಹಿರಂಗವಾಗಿ ಚರ್ಚೆ ಆಗಿದೆ. ಈ ವಿಡಿಯೋ ಹಿಂದೆ ಹಾಸನ ಜಿಲ್ಲಾ ನಾಯಕರ ಕೈವಾಡ ಇದೆ ಅಂತೇಳಿ ಡಿಕೆ ಸುರೇಶ್ ಹೇಳಿದ್ದಾರೆ. ಸದ್ಯ ಹೆಣ್ಣು ಮಕ್ಕಳಿಗೆ ಅನ್ಯಾಯ ಆಗಿರುವ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಿದೆ. ಡಿಸಿಎಂ ಡಿಕೆಶಿವಕುಮಾರ್ ಹೆಸರು ಹೇಳದಿದ್ದರೆ ಕುಮಾರಸ್ವಾಮಿ ಕುಟುಂಬಕ್ಕೆ ಊಟ ಸೇರುವುದಿಲ್ಲ. ಬಹಳ ದೊಡ್ಡ ಕುಟುಂಬ ಅಲ್ವಾ ಅವರದ್ದು. ಅವರವರ ಉಳಿವಿಗಾಗಿ ಡಿಕೆಶಿಯವರನ್ನು ಬಳಸಿಕೊಳ್ಳುತ್ತಿದ್ದಾರೆ. ಡಿಕೆಶಿಯನ್ನು ಅನಗತ್ಯವಾಗಿ ಎಳೆದು ತರುತ್ತಿದ್ದಾರೆ. ವೀಡಿಯೋ ಬಿಡುಗಡೆ ಹಿಂದೆ ಅವರ ಮೈತ್ರಿ ನಾಯಕರು ಹಾಗೂ ಕುಮಾರಸ್ವಾಮಿ ಕೈವಾಡ ಇದೆ ಅಂತೇಳಿ ಡಿಕೆ ಸುರೇಶ್ ಹೇಳಿದ್ದಾರೆ. ಡಿಕೆ ಶಿವಕುಮಾರ್ ಬಳಿ ವಿಡಿಯೋ ಇದ್ದಿದ್ದರೆ ಮುಂಚೆಯೇ ಬಿಡುಗಡೆ ಮಾಡುತ್ತಿದ್ದರು. ಇದರ ಹಿಂದೆ ಹಾಸನ ನಾಯಕರ ಕೈವಾಡ ಇದೆ. ಕುಮಾರಸ್ವಾಮಿ ಕೈವಾಡ ಕೂಡ ಇದೆ ಅಂತೇಳಿ ಡಿಕೆ ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ.
ಅಷ್ಟೇ ಅಲ್ಲ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಂಸದ ಡಿಕೆ ಸುರೇಶ್ ಸಹೋದರರದ್ದು ‘420 ಕುಟುಂಬ’ ಎಂಬ HDK ಹೇಳಿಕೆಗೆ ಡಿಕೆ ಸುರೇಶ್ ತೀಕ್ಷ್ಣ ತಿರುಗೇಟು ನೀಡಿದ್ದಾರೆ. ನಾನು ಅವರ ಕುಟುಂಬವನ್ನು 420 ಎಂದು ಕರೆಯುವುದಿಲ್ಲ. ಏಕೆಂದರೆ ಅದು ಮಾಜಿ ಪ್ರಧಾನಿಗಳ ಕುಟುಂಬ. ಅವರ ಕುಟುಂಬ, ಅಭಿಮಾನಿಗಳಿಗೆ ಬೇಸರ ಆಗಬಹುದು. ದೇವೇಗೌಡರ ಕುಟುಂಬದ ಆಸ್ತಿ ಪೆನ್ಡ್ರೈವ್ ಆಗಿದೆ. ಇನ್ನು ತೆನೆ ಹೊತ್ತ ಮಹಿಳೆ ಪೆನ್ಡ್ರೈವ್ ಹೊರಬೇಕಾಗುತ್ತೆ ಅಂತೇಳಿ ವ್ಯಂಗ್ಯವಾಡಿದ್ದಾರೆ. ಇನ್ನ ಇದೇ ವಿಚಾರವಾಗಿ ಸಚಿವ ಆರ್ಬಿ ತಿಮ್ಮಾಪುರ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಪ್ರಜ್ವಲ್ರನ್ನು ಭಗವಾನ್ ಶ್ರೀಕೃಷ್ಣನ ಜತೆ ಹೋಲಿಕೆ ಮಾಡಿ ತಿಮ್ಮಾಪುರ ಹೇಳಿಕೆ ನೀಡಿದ್ದಾರೆ. ಶ್ರೀಕೃಷ್ಣನ ದಾಖಲೆಯನ್ನು ಕೂಡ ಮುರಿಯಬೇಕು ಎಂದು ಪ್ರಜ್ವಲ್ ಅಂದುಕೊಂಡಿರಬೇಕು. ಆದರೆ, ಇದು ಗಿನ್ನಿಸ್ ದಾಖಲೆಯಾಗಬಹುದೇನೋ ಎಂದು ಅವರು ಹೇಳಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಈಗ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.
ಪ್ರಜ್ವಲ್ರನ್ನು ದೇವೇಗೌಡರೇ ವಿದೇಶಕ್ಕೆ ಕಳುಹಿಸಿದ್ದಾರೆ
ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ!?
ಹೌದು ವೀಕ್ಷಕರೇ, ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣರನ್ನು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರೇ ಪ್ಲ್ಯಾನ್ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆ ಅಂತೇಳಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ವೀಸಾ ಕೊಡುವುದು ಯಾರು? ಕೇಂದ್ರದ ಬಿಜೆಪಿಯವರೇ ತಾನೇ ಅಂತೇಳಿ ಪ್ರಶ್ನಿಸಿರೋ ಸಿಎಂ ಸಿದ್ದರಾಮಯ್ಯ ಪ್ರಜ್ವಲ್ ಪ್ರಕರಣಕ್ಕೂ ಡಿಸಿಎಂ ಡಿಕೆ ಶಿವಕುಮಾರ್ಗೂ ಸಂಬಂಧ ಇಲ್ಲ ಅಂತಾನೂ ಸ್ಪಷ್ಟಪಡಿಸಿದ್ದಾರೆ. ಸೂರಜ್ ರೇವಣ್ಣ ಜೊತೆ ಫೋಟೋ ಇದ್ದರೆ ಏನಾಗುತ್ತೆ? ಕುಮಾರಸ್ವಾಮಿ ಜೊತೆಗೂ ಡಿಕೆ ಶಿವಕುಮಾರ್ ಫೋಟೋ ಇದೆ. ನನ್ನ ಜೊತೆಗೆ ಹೆಚ್ಡಿ ರೇವಣ್ಣ ಇರುವ ಫೋಟೋ ಕೂಡ ಇದೆ. ಹಾಗಾದ್ರೆ ಅವರನ್ನು ರಕ್ಷಣೆ ಮಾಡುತ್ತೇನೆ ಎಂದು ಅರ್ಥವಾ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಇನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎಲ್ಲ ವಿಚಾರ ಗೊತ್ತಿದ್ದರೂ ಯಾಕೆ ಪ್ರಜ್ವಲ್ಗೆ ಟಿಕೆಟ್ ಕೊಟ್ಟರು ಅಂತೇಳಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಲಾಗಿದೆ. ಎಸ್ಐಟಿ ಅಧಿಕಾರಿಗಳು ಪಾರದರ್ಶಕವಾಗಿ ತನಿಖೆ ಮಾಡುತ್ತಾರೆ. ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಅಂತೇಳಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಹಾಗಾದ್ರೆ ಡಿಕೆ ಸುರೇಶ್ ಅವರ ಆರೋಪದಂತೆ ಅಶ್ಲೀಲ ವಿಡಿಯೋ ಬಿಡುಗಡೆಯ ಹಿಂದೆ ಕುಮಾರಸ್ವಾಮಿಯವರ ಕೈವಾಡ ಇದ್ಯಾ.? ಇನ್ಮುಂದೆ ತೆನೆ ಹೊತ್ತ ಮಹಿಳೆ ಪೆನ್ಡ್ರೈವ್ ಹೊರಬೇಕಾಗುತ್ತಾ?