ದಾವಣಗೆರೆ : ನಮ್ಮ ಮಾವ ಮಲ್ಲಿಕಾರ್ಜುನಪ್ಪ ಒಬ್ಬ ಎಂ.ಪಿ. ಹೇಗೆ ಜನರ ಕೈಗೆ ಸಿಗುತ್ತಾರೆ ಅನ್ನೊದನ್ನ ತೊರಿಸಿಕೊಟ್ಟಿದ್ದು, ಈ ಬಾರಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಶಾಮನೂರು ಕುಟುಂಬಕ್ಕೆ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಟಾಂಗ್ ನೀಡಿದ್ರು.

ದಾವಣಗೆರೆ ನಗರ ದೇವತೆ ದುರ್ಗಾಂಬಿಕಾ ದೇವಿ ದರ್ಶನ ಪಡೆದ ಬಳಿಕ ಕಾಂಗ್ರೆಸ್ ನಿಂದ ಪ್ರಭಾ ಮಲ್ಲಿಕಾರ್ಜುನ್ ಸ್ಪರ್ಧೆ ಎಂಬ ಪತ್ರಕರ್ತರ ಪ್ರಶ್ನೆಗೆ ಗಾಯತ್ರಿ ಸಿದ್ದೇಶ್ವರ್ ಪ್ರತಿಕ್ರಿಯೆ ನೀಡಿ, ಹೌದು ನಾವು ಅವರು ಬೀಗರು ಆಗ್ತಿವಿ, ನಾನು ತಾಯಿ ಸ್ಥಾನದಲ್ಲಿದ್ದೇನೆ, ಅವರು ಮಗಳು ಎಂದ ಗಾಯತ್ರಿ ಸಿದ್ದೇಶ್ವರ್, ಮೋದಿ ಜೀ ವಿಶ್ವನಾಯಕ, ಅವರನ್ನು ಮತ್ತೆ ಪ್ರಧಾನಿ ಮಾಡಬೇಕು ಅನ್ನೋದು ಕಾರ್ಯಕರ್ತರ, ಮತದಾರರ ಆಶಯ. ದಾವಣಗೆರೆಯಲ್ಲಿ ಸಿದ್ದೇಶ್ವರ್ ಅವರು 20 ವರ್ಷಗಳ ಕಾಲ ಮಾಡಿರೋ ಅಭಿವೃದ್ಧಿ ಕೆಲಸಗಳ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಿದ್ದೇವೆ. ನಮ್ಮ ಮಾವ ಮಲ್ಲಿಕಾರ್ಜುನಪ್ಪ ಅವರು ಒಬ್ಬ ಎಂ.ಪಿ. ಹೇಗೆ ಜನರ ಕೈಗೆ ಸಿಗುತ್ತಾರೆ ಅನ್ನೊದನ್ನ ತೊರಿಸಿಕೊಟ್ಟಿದ್ದರು‌. ನಾನೂ ಕಾರ್ಯಕರ್ತರಿಗೆ ಸ್ಪಂದಿಸಿದ್ದೇನೆ, ಹೋದ ಎಲ್ಲ ಕಡೆ ಒಳ್ಳೆಯ ರೆಸ್ಪಾನ್ಸ್ ಇದೆ.ಎಲ್ಲರೂ ಖುಷಿಯಿಂದ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಹೇಳಿದರು.

ರೇಣುಕಾಚಾರ್ಯ ಅಂಡ್ ಟೀಂ ವಿರೋಧದ ಬಗ್ಗೆ ಪ್ರತಿಕ್ರಿಯೆ ನೀಡಿದ ಗಾಯತ್ರಿ ಸಿದ್ದೇಶ್ವರ್  ,ಎಲ್ಲಿಯೂ ವಿರೋಧ ಇಲ್ಲ, ಅವರು ಟಿಕೆಟ್ ಕೇಳಿದ್ರು, ಸಿಕ್ಕಿಲ್ಲ ಸಹಜವಾಗಿಯೇ ಅವರಿಗೆ ಬೇಜಾರ್ ಆಗಿದೆ ಎಂದು ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಹೇಳಿದರು. ಅವರೆಲ್ಲರನ್ನೂ ನಾನು ಅಣ್ಣ ಎಂದೇ ಮಾತಾಡಿಸುತ್ತಿದ್ದೆ, ಎಲ್ಲರನ್ನೂ ಭೇಟಿಯಾಗಿ ಮಾತಾಡಿದ್ದೇನೆ. ಎಲ್ಲರೂ ಖುಷಿಯಾಗಿಯೇ ಇದ್ದಾರೆ, ನನ್ನನ್ನು ಒಪ್ಪಿಕೊಳ್ಳುತ್ತಾರೆ ಎಂಬ ವಿಶ್ವಾಸ ಇದೆ, ಎಲ್ಲವೂ ಸರಿ ಆಗುತ್ತದೆ ಎಂದು ಗಾಯತ್ರಿ ಸಿದ್ದೇಶ್ವರ್ ಹೇಳಿದರು. ಇದೇ ಮೊದಲ ಬಾರಿಗೆ ದಾವಣಗೆರೆಯಲ್ಲಿ ಮಹಿಳೆಯರಿಗೆ ಅವಕಾಶ ಸಿಕ್ಕಿದೆ, 33 % ಮೀಸಲಾತಿ ಸಿಕ್ಕಿರೋದು ಖುಷಿ ತಂದಿದೆ.‌ಮೋದಿ ಜೀ ಅವರ ಆಶೀರ್ವಾದ ಸಿಕ್ಕಿದೆ, ಕೇಂದ್ರದ, ರಾಜ್ಯದ ನಾಯಕರು ನನ್ನನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಈ ಅವಕಾಶ ಸದುಪಯೋಗ ಪಡಿಸಿಕೊಳ್ಳುತ್ತೇನೆ, ಎಲ್ಲರಿಗೂ ನ್ಯಾಯಯುತವಾಗಿ ಸೇವೆ ಸಲ್ಲಿಸುತ್ತೇನೆ.ಅದರಲ್ಲೂ ವಿಶೇಷವಾಗಿ ಹೆಣ್ಣುಮಕ್ಕಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇನೆ. ಕಾರ್ಯಕರ್ತರು ಈ ಬಾರಿ ನನ್ನ ಕೈ ಹಿಡಿಯುತ್ತಾರೆ, ಕಮಲ ತೆಗೆದುಕೊಂಡು ಹೋಗಿ ಮೋದಿ ಜೀಗೆ ಅರ್ಪಿಸುತ್ತೇನೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

 

Share.
Leave A Reply

Exit mobile version