ದಾವಣಗೆರೆ: ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರ ಕ್ರೌರ್ಯವನ್ನು ಖಂಡಿಸಿರುವ ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರ ಕ್ರೌರ್ಯವನ್ನು ಸಹಿಸಲಾಗದು ಎಂದು ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಆಲೂರು ನಿಂಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇಶ ಸಂದಿಗ್ಧ ಸ್ಥಿತಿಯಲ್ಲಿ ಇರುವಾಗ ಪ್ರತಿಯೊಬ್ಬ ಭಾರತೀಯನೂ ಒಗ್ಗಟ್ಟಿನಿಂದ ಇರಬೇಕು. ಆ ಮೂಲಕ ವಿಶ್ವಕ್ಕೆ ಸ್ಪಷ್ಟ ಸಂದೇಶ ಕಳುಹಿಸಬೇಕು. ಭಯೋತ್ಪಾದನೆ ಎಂಬುದು ಭಾರತಕ್ಕೆ ಮಾತ್ರ ಸೀಮಿತವಲ್ಲ. ಇದು ಜಾಗತಿಕ ಸಮಸ್ಯೆ. ಭಯೋತ್ಪಾದನೆಯನ್ನು ಬುಡಸಮೇತ ಕಿತ್ತು ಹಾಕಲು ಪ್ರಧಾನಿ ಮೋದಿ ಶ್ರಮಿಸುತ್ತಿದ್ದು, ಅದಕ್ಕೆ ಎಲ್ಲರೂ ಕೈಜೋಡಿಸಬೇಕು
ಭಯೋತ್ಪಾದಕರ ದಾಳಿಯ ವಿಚಾರದಲ್ಲಿ. ಕಾಂಗ್ರೆಸ್ ಹೊಣೆಗಾರಿಕೆ ಅರಿತು ಮಾತನಾಡಿ, ದಾವಣಗೆರೆ ಜಿಲ್ಲೆಯಲ್ಲಿ ಮತಾಂಧರು ಪ್ರಚೋದನಕಾರಿ ಭಾಷಣದ ವಿಡಿಯೋ ತುಣುಕುಗಳು ನೋಡಿಯು ಕೂಡ ನೀವು ಸಮರ್ಥನೆ ಮಾಡಿಕೊಂಡಿದ್ದೀರಾ. ನಿಮಗೆ ದೇಶಾಭಿಮಾನ ಎಲ್ಲಿ ಬರಬೇಕು
2019 ರಲ್ಲಿ ಪುಲ್ವಾಮಾ ದಾಳಿಯ ನಂತರದ ಅತ್ಯಂತ ಭೀಕರ ದಾಳಿ ಇದಾಗಿದೆ. ಕೇಂದ್ರದ ಗುಪ್ತಚರ ವೈಫಲ್ಯದ ಬಗ್ಗೆ ಮಾತನಾಡುತ್ತಾರೆ. ಈ ದೇಶವನ್ನು 60 ವರ್ಷ ಕಾಂಗ್ರೆಸ್ ಆಡಳಿತ ನಡೆಸಿತ್ತು. ಆಗಲೂ ಹಲವು ಬಾರಿ ಭಯೋತ್ಪಾದಕ ದಾಳಿಗಳು ನಡೆದಿರಲಿಲ್ಲವೇ
ಅವರ ಅವಧಿಯಲ್ಲಿ ಭಯೋತ್ಪಾದನೆ ನಿರ್ಮೂಲನೆ ಮಾಡಲು ಏಕೆ ಸಾಧ್ಯವಾಗಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮೈ ಸೂರು ಕಾಂಗ್ರೆಸ್ ನಾಯಕ ವಕ್ತಾರ ಎಂ ಲಕ್ಷ್ಮಣ್ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯಿಸಿ,ಕಣ್ಣೆದುರಿಗೇ ಪಾಯಿಂಟ್ ಬ್ಲ್ಯಾಂಕ್ ನಲ್ಲಿ ತಲೆಗೆ ಗುಂಡಿಕ್ಕಿ ತಮ್ಮ ಪತಿಯನ್ನು, ತಂದೆಯನ್ನು ಕೊಂದ ಕಣ್ಣೀರಿನ ಕಥೆ ಹೇಳುತ್ತಿರುವ ಸಂತ್ರಸ್ತ ಮಹಿಳೆಯರು, ಮಕ್ಕಳ ಆಕ್ರಂದನ ನಿಮಗೆ ಕೇಳುತ್ತಿಲ್ಲವೇ ಎಂ.ಲಕ್ಷಣ್ ಅವರೇ ಎಂದು. ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಆಲೂರು ನಿಂಗರಾಜ್ ಪ್ರಶ್ನಿಸಿದ್ದಾರೆ.