ದಾವಣಗೆರೆ : ಕರ್ನಾಟಕದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿದ್ದು. ಪರಿಣಾಮ ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಲಿದೆ ಎಂದು ಹಿರಿಯ ಸಹಕಾರಿ ಧುರೀಣ, ಸಹಕಾರಿ ರತ್ನ ‌ಪ್ರಶಸ್ತಿ ಪುರಸ್ಕೃತ ಡಾ.ಜೆ.ಆರ್.ಷಣ್ಮುಖಪ್ಪ ಹೇಳಿದರು.

ಪಂಚರಾಜ್ಯಗಳ ವಿಧಾನಸಭಾ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಕುರಿತು ಪಬ್ಲಿಕ್ ಇಂಪ್ಯಾಕ್ಟ್ ನೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕದ ಎಲ್ಲ ವರ್ಗದ ಜನರ ಬದುಕು ಸುಧಾರಿಸಿದೆ.ಇದೇ ಮಾದರಿಯ ಗ್ಯಾರಂಟಿ ಯೋಜನೆಗಳನ್ನು ತೆಲಂಗಾಣ, ಮಧ್ಯ ಪ್ರದೇಶ,ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಸಂಪೂರ್ಣ ಅಧಿಕಾರ‌ ಹಿಡಿಯಲಿದ್ದು,
ರಾಜಸ್ಥಾನ ಮತ್ತು ಮಿಜೋರಾಂನಲ್ಲೂ ತೀವ್ರ ಪೈಪೋಟಿಯ ನಡುವೆಯೂ ಕೂಡ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದರು.

ಈ 5 ರಾಜ್ಯಗಳಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಸೃಷ್ಟಿಯಾಗಲು ಪ್ರಮುಖ ಕಾರಣವೇ ಕರ್ನಾಟಕದ ಗ್ಯಾರಂಟಿ ಯೋಜನೆ ಗಳು.ಇವುಗಳು ದೇಶಾದ್ಯಂತ ಪ್ರಚಾರ ಪಡೆದು ಜನಸಾಮಾನ್ಯರ ಮನಸು ಗೆದ್ದಿವೆ. ಇದರ ಪರಿಣಾಮದಿಂದ ಎಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಉತ್ತಮವಾದ ವಾತಾವರಣ ನಿರ್ಮಾಣಕ್ಕೆ ಸಹಾಯವಾಗಿದೆ ಎಂದರು.

ರಾಜ್ಯದಲ್ಲಿ ತಲೆದೋರಿರುವ ಬರ ಸ್ಥಿತಿಗೆ ಕೇಂದ್ರ ಸರ್ಕಾರ ಅಗತ್ಯ ನೆರವು ನೀಡದಿದ್ದರೂ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಈಗಾಗಲೇ ಪ್ರತಿ ಹೆಕ್ಟೇರ್‌ಗೆ 2 ಸಾವಿರ ರೂ ಪರಿಹಾರ ಘೋಷಿಸಿದ್ದಾರೆ.

ಭವಿಷ್ಯದಲ್ಲಿ ದೇಶದಲ್ಲಿ ಇತಿಹಾಸ ಮರುಕಳಿಸಲಿದೆ. ಕಳೆದ ದಶಕದಲ್ಲಿ ಇಡೀ ದೇಶದ ತುಂಬೆಲ್ಲಾ‌ ಕಾಂಗ್ರೆಸ್ ಆಡಳಿತದಲ್ಲಿ ಇತ್ತು. ಈ‌ ಇತಿಹಾಸ ಮತ್ತೆ ಮರುಕಳಿಸಲಿದೆ ಎಂದು ಜೆ.ಆರ್.ಷಣ್ಮುಖಪ್ಪ ವಿಶ್ಲೇಷಿಸಿದರು.

ಕರ್ನಾಟಕದ ಮಹಿಳೆಯರು, ವಿದ್ಯಾರ್ಥಿಗಳು, ಗೃಹಿಣಿಯರು, ಹಿರಿಯ ಚೇತನಗಳು ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಆರ್ಥಿಕ ತಜ್ಞರಾಗಿ ಹತ್ತಾರು ಬಾರಿ ಬಜೆಟ್ ಮಂಡನೆ ಮಾಡಿದ ಅನುಭವವುಳ್ಳವರು, ಅವರಿಗೆ ರಾಜ್ಯದ ಆರ್ಥಿಕ ಸ್ಥಿತಿಯನ್ನು ನಿಭಾಯಿಸುವ ಶಕ್ತಿ ಇದೆ ಎಂದು ತಿಳಿಸಿದರು

Share.
Leave A Reply

Exit mobile version