ಶಿವಮೊಗ್ಗ:ದೇಶ ಸುತ್ತುವುದರಿಂದ ಹಾಗೂ ಕೋಶ ಓದುವುದರಿಂದ ನಮ್ಮಲ್ಲಿ ಜ್ಞಾನ, ಸಂವಹನ ಕಲೆ ವೃದ್ಧಿಸುವ ಜತೆಯಲ್ಲಿ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಬಸವಕೇಂದ್ರದ ಶ್ರೀ ಮರುಳಸಿದ್ಧ ಸ್ವಾಮೀಜಿ ಹೇಳಿದರು.

ಸರ್ಕಾರಿ ನೌಕರರ ಭವನದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ 2025ನೇ ಸಾಲಿನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿ, ಜೆಸಿಐನಂತಹ ಸಂಸ್ಥೆಗಳು ಯುವಜನರಲ್ಲಿ ಉತ್ತಮ ವ್ಯಕ್ತಿತ್ವ ನಿರ್ಮಿಸಿಕೊಳ್ಳಲು ತರಬೇತಿ ನೀಡುತ್ತಿವೆ. ಜೀವನದ ಮೌಲ್ಯಗಳು ಹಾಗೂ ಸಮಾಜಮುಖಿ ಕಾರ್ಯಗಳ ಜತೆ ನಾಯಕತ್ವ ಗುಣಗಳನ್ನು ಬೆಳೆಸುತ್ತಿವೆ.
ಜೆಸಿಐ ಸಂಸ್ಥೆಯಿಂದ ಯುವಜನರಿಗೆ ಉತ್ತಮ ಸಹಕಾರ ಸಿಗುತ್ತಿದೆ. ಜಿ.ಗಣೇಶ್ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆ ಅಧ್ಯಕ್ಷರಾಗಿ ಅಧಿಕಾರ ವಹಿಸಿದ್ದು, ಪ್ರಸ್ತಕ ಸಾಲಿನಲ್ಲಿ ಹೆಚ್ಚು ಸಮಾಜಮುಖಿ ಕಾರ್ಯಗಳನ್ನು ಅವರ ತಂಡ ಮಾಡುವಂತಾಗಲಿ ಎಂದು ಆಶಿಸಿದರು.

ವಲಯ ಅಧ್ಯಕ್ಷ ಗೌರೀಶ್ ಭಾರ್ಗವ್ ಮಾತನಾಡಿ, ಜೆಸಿಐ ಸಂಸ್ಥೆಯು ನಿರಂತರವಾಗಿ ಸೇವಾ ಚಟುವಟಿಕೆಗಳನ್ನು ಮಾಡುತ್ತಿದ್ದು, ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಲು ತರಬೇತಿಗಳು, ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಮುಖ್ಯವಾಗಿ ಯುವಜನರಲ್ಲಿ ವ್ಯಕ್ತಿತ್ವ ಗುಣಗಳನ್ನು ಬೆಳೆಸಲು ತರಬೇತಿಗಳನ್ನು ಆಯೋಜಿಸಿ ವಿದ್ಯಾರ್ಥಿಗಳಿಗೆ ನಾಯಕತ್ವ ಗುಣಗಳನ್ನು ಬೆಳೆಸಲು ಸಹಕಾರಿಯಾಗುತ್ತಿದೆ ಎಂದರು.
ವಲಯ ಉಪಾಧ್ಯಕ್ಷ ಮಧುಸೂಧನ್ ನವಾಡ ಮಾತನಾಡಿ, ಜೆಸಿಐ ಸಂಸ್ಥೆಯು ಯುವಜನರಿಗೆ ಅನೇಕ ತರಬೇತಿಗಳನ್ನು ಶಾಲಾ-ಕಾಲೇಜುಗಳಲ್ಲಿ ಆಯೋಜಿಸಿ ವಿದ್ಯಾರ್ಥಿ ಜೀವನದೊಂದಿಗೆ ನಾಯಕತ್ವ ಗುಣಗಳನ್ನು ಬೆಳೆಸಲು ಬಹಳ ಸಹಕಾರಿಯಾಗಿರುತ್ತದೆ ಎಂದು ಹೇಳಿದರು.

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಿ.ಗಣೇಶ್ ಮಾತನಾಡಿ, ಈ ವರ್ಷ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಶಾಲಾ ಕಾಲೇಜುಗಳಲ್ಲಿ ಯುವಜನರಿಗೆ ವ್ಯಕ್ತಿತ್ವ ಗುಣಗಳನ್ನು ವೃದ್ಧಿಸಿ ನಾಯಕತ್ವ ಗುಣಗಳನ್ನು ಬೆಳೆಸಲು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಗ್ರಾಮಾಂತರ ಪ್ರದೇಶಗಳಲ್ಲಿ ಅನೇಕ ಸ್ವಚ್ಛತಾ ಕಾರ್ಯಕ್ರಮಗಳು, ಶಾಲೆಗಳ ಅಭಿವೃದ್ಧಿಪಡಿಸುವುದು ಸೇರಿದಂತೆ ಇನ್ನು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಜೆಸಿಐ ಶಿವಮೊಗ್ಗ ಸಹ್ಯಾದ್ರಿ ತಂಡದವರ ಸಹಕಾರ ಮುಖ್ಯ ಎಂದರು.

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಕಾರ್ಯದರ್ಶಿ ಮಂಜುನಾಥ್ ರಾವ್ ಕದಂ, ಸುಷ್ಮಾ ಹಿರೇಮಠ, ಬಿಂದು ವಿಜಯಕುಮಾರ್, ಶೇಷಗಿರಿ ಡಿಕೆ , ರಾಜಪ್ಪ, ಸುರೇಂದ್ರ ಕೋಟ್ಯಾನ್, ಸತೀಶ್ ಚಂದ್ರ, ಕಿಶೋರ್ ಕುಮಾರ್, ಹರೀಶ್, ಈಶ್ವರ್, ಸಿಂಚನ, ಸ್ಪೂರ್ತಿ, ಸ್ವಪ್ನ ಬದ್ರಿನಾಥ್, ಇನ್ನಿತರರು ಉಪಸ್ಥಿತರಿದ್ದರು.

Share.
Leave A Reply

Exit mobile version