ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಮೇಲೆ ದಾಖಲಾಯ್ತು ಪೋಕ್ಸೋ ಕೇಸ್, ಲೋಕಸಭೆ ಚುನಾವಣೆ ಹೊತ್ತಲ್ಲಿ ಇದೆಂಥಾ ಘಟನೆ, ಬಿಎಸ್ ವೈಗೆ ಈಗ ಎದುರಾಯ್ತಾ ಸಂಕಷ್ಟ, ಇನ್ನೇನೂ ಚುನಾವಣೆ ಘೋಷಣೆ ಹೊತ್ತಲ್ಲಿ ಏಕೆ ಹೀಗಾಯ್ತು..ಗೃಹ ಸಚಿವರು ಏನಂದ್ರು…ಬನ್ನಿ ನೋಡೋಣ.
ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ, ಬಿಜೆಪಿ ಬ್ರಾಂಡ್ ಎಂದೇ ಖ್ಯಾತಿ ಪಡೆದಿದ್ದ ಮಾಜಿ ಸಿಎಂ ಬಿಎಸ್ ವೈಗೆ ಈಗ ಪೋಕ್ಸೋ ಕೊರಳು ಸುತ್ತಿಕೊಂಡಿದೆ. ಅವರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋ ಕೇಳಿ ಬಂದಿದೆ. ಈ ಸಂಬಂಧ ಸಂತ್ರಸ್ತೆ ತಾಯಿ ದೂರು ನೀಡಿದ್ದು,
ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಫೋಕ್ಸೋ ಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(a) ಅಡಿ ಈ ಪ್ರಕರಣ ದಾಖಲಾಗಿದೆ.
ಬಿಎಸ್ ಯಡಿಯೂರಪ್ಪನವರ ವಯಸ್ಸು 81.. ಇಂಥ ಏಜಲ್ಲೂ ಬಿಎಸ್ವೈ ಮೇಲೆ ಇಂತಹ ಗುರುತರ ಆರೋಪ ಬಂದಿರೋದು ಬಿಎಸ್ ವೈ ಗೆ ನುಂಗಲಾರದ ತುತ್ತಾಗಿದೆ. ಫೆಬ್ರವರಿ 2ರಂದು ತಮ್ಮ ನಿವಾಸದಲ್ಲಿ ಬಿಎಸ್ ಯಡಿಯೂರಪ್ಪ ಅವರು 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಖಾಕಿ ಪಡೆ ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.
ಸಹಾಯ ಮಾಡಿ ಅಂತ ಹೇಳಿದ್ದೇ ತಪ್ಪಾಯ್ತು?
ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಬಿಎಸ್ವೈ., ಆ ಮಹಿಳೆಗೆ ನಾನು ಸಹಾಯ ಮಾಡಲು ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೆ. ಆದರೆ, ಈಗ ನನ್ನ ಮೇಲೆಯೇ ಪ್ರಕರಣ ದಾಖಲಾಗಿದೆ. ನೋಡೋಣ ಮುಂದೆ ಏನಾಗುತ್ತೆ ಎಂದು ಹೇಳಿದ್ದಾರೆ. ಕೆಲ ದಿನಗಳ ಹಿಂದೆ ನಮ್ಮ ಮನೆಗೆ ಸಹಾಯ ಕೇಳಿಕೊಂಡು ಓರ್ವ ಮಹಿಳೆ ಬಂದಿದ್ದಳು. ಏನೋ ಸಮಸ್ಯೆಯಿದೆ ಎಂದು ಆಕೆ ಅಳುತ್ತಿದ್ದಳು, ಆಗ ಆಕೆಯ ಸಮಸ್ಯೆಯನ್ನು ಆಲಿಸಿ, ಪೊಲೀಸ್ ಆಯುಕ್ತರಿಗೆ ಖುದ್ದು ಕರೆ ಮಾಡಿ ಸಮಸ್ಯೆಯನ್ನು ತಿಳಿಸಿ, ಮಹಿಳೆಗೆ ಸಹಾಯ ಮಾಡುವಂತೆ ಸೂಚಿಸಿದ್ದೆ ಎಂದು ಬಿಎಸ್ ವೈ ವಿವರಿಸಿದ್ದಾರೆ. ಆದರೆ, ಬಳಿಕ ಮಹಿಳೆ ನನ್ನ ವಿರುದ್ಧವೇ ಮಾತನಾಡಲು ಶುರು ಮಾಡಿದಳು.
ಈ ವಿಷಯದ ಬಗ್ಗೆಯೂ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೆ. ಆದರೆ, ಗುರುವಾರ ಪೊಲೀಸರು ನನ್ನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನೋಡೋಣ ಮುಂದೆನಾಗುತ್ತೆ ಅಂತಾ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ ಎಂದು ನಾನು ಈಗಲೇ ಹೇಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.ಇನ್ನ ಈ ಪ್ರಕರಣದ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿ, ಸದ್ಯ ಮಾಜಿ ಸಿಎಂ ಬಿಎಸ್ವೈ ಅವರ ಮೇಲೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಾಗಿರೋದ್ರಿಂದ ಈ ಪ್ರಕರಣನ್ನ ಸರ್ಕಾರ ಮತ್ತು ಪೊಲೀಸ್ ಇಲಾಖೆ ತುಂಬಾ ಗಂಭೀರವಾಗಿ ತೆಗೆದುಕೊಂಡಿದೆ..
ಯಡಿಯೂರಪ್ಪ ವಿರುದ್ಧ ದೂರು ನೀಡಿದ ಮಹಿಳೆ ಮಹಿಳೆ ಮಾನಸಿಕ ಅಸ್ವಸ್ಥೆ ಅಂತಾ ಹೇಳುತ್ತಿದ್ದಾರೆ. , ಮಹಿಳೆ ದೂರನ್ನು ಟೈಪ್ ಮಾಡಿ ಕೊಟ್ಟಿದ್ದಾರೆ. ಆದರೆ ಕೈಯಿಂದ ಬರೆದು ದೂರು ಕೊಟ್ಟಿದ್ದಲ್ಲ. ಟೈಪ್ ಕಾಪಿ ಕೊಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಪ್ರಕರಣ ಒಬ್ಬ ಮಾಜಿ ಸಿಎಂ ವಿಷಯಕ್ಕೆ ಸಂಬಂಧಿಸಿದೆ. ಯಾವುದೇ ವಿಷಯ ಆದರೂ ಎಚ್ಚರಿಕೆಯಿಂದ ಹೇಳಬೇಕು ಎಂದರು.
ಇನ್ನು ಈ ಪ್ರಕರಣವನ್ನ ನಿಷ್ಪಕ್ಷಪಾತವಾಗಿ ತನಿಖೆ ಮಾಡಿದ್ಮೇಲೆನೇ ಇದ್ರಲ್ಲಿ ಸತ್ಯಾಸತ್ಯತೆ ಏನು ಅನ್ನೋದು ಗೊತ್ತಾಗಬೇಕಾಗಿದೆ. ಆದ್ರೆ ಕೆಲ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ದೂರಿನ ಅನುಮಾನ
ಯಡಿಯೂರಪ್ಪ ಅವರ ವಿರುದ್ಧ ನೀಡಿರುವ ದೂರಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಅಪ್ರಾಪ್ತೆಯ ಮೇಲೆ ಈ ಹಿಂದೆ ಆಗಿದ್ದ ಅತ್ಯಾಚಾರದ ಬಗ್ಗೆ ಸಹಾಯ ಯಾಚಿಸಲು ತೆರಳಿದ್ದಾಗ 9 ನಿಮಿಷಗಳ ಕಾಲ ಮೊದಲು ಮಾತನಾಡಿದ್ದ ಯಡಿಯೂರಪ್ಪ ಅವರು, ಆನಂತರ ಅಪ್ರಾಪ್ತೆಯನ್ನು ರೂಂ ಒಳಗೆ ಕರೆದು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಅಪ್ರಾಪ್ತೆಯ ಖಾಸಗಿ ಭಾಗ ಮುಟ್ಟಿರುವ ಬಗ್ಗೆ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ರೂಂ ನಿಂದ ಹೊರ ಬಂದು ಯಡಿಯೂರಪ್ಪ ಅವರು ಕ್ಷಮೆಯಾಚಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಈ ವಿಚಾರವನ್ನು ಯಾರಿಗೂ ಹೇಳಬಾರದೆಂದು ಹೆದರಿಸಿ ನಮ್ಮನ್ನ ತಡೆದಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.
ಇನ್ನು ದೂರುದಾರ ಮಹಿಳೆ ಪೊಲೀಸ್ ಅಧಿಕಾರಿಗಳ ವಿರುದ್ದವು ದೂರು ನೀಡಿದ್ದಾರೆ. ರಾಜಕಾರಣಿಗಳ ವಿರುದ್ದ ಕೂಡ ಈ ಹಿಂದೆ ಮಹಿಳೆ ದೂರು ನೀಡಿದ್ದಾರೆ.ಪತಿ ಹಾಗೂ ಮಗನ ವಿರುದ್ದ , ರೌಡಿಶೀಟರ್ ಗಳ ಮೇಲೆ ದೂರು ದಾಖಲಿಸಿದ್ದಾರೆ. 2015 ರಲ್ಲಿ ಮಗಳ ವಿರುದ್ದ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಗಂಡನ ಸಂಬಂಧಿಯೊಬ್ಬನ
ವಿರುದ್ದ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು ಎಂಬ ಮಾಹಿತಿಯನ್ನು ಪತ್ರಿಕೆಯೊಂದು ನೀಡಿದೆ. ಒಟ್ಟಾರೆ 81 ವರ್ಷದ ಮಾಜಿ ಸಿಎಂ ಬಿಎಸ್ವೈ ಅವರ ಮೇಲೆ ಬಾಲಕಿ ಮೇಲೆ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಹೀಗಾಗಿ ಈ ಪ್ರಕರಣ ಸಾಕಷ್ಟು ಕುತೂಹಲ ಕೆರಳಿಸ್ತಾಯಿದೆ.