ಬೆಂಗಳೂರು : ಪೋಕ್ಸೋ ಪ್ರಕರಣ ಸಂಬAಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್ ಜಾರಿ ಮಾಡಿದೆ. ಆದರೆ ಯಡಿಯೂರಪ್ಪ ದೆಹಲಿ ಇರುವ ಕಾರಣ ಇಂದು ವಿಚಾರಣೆಗೆ ಹಾಜರಾಗಿಲ್ಲ.
ಬೆಂಗಳೂರಿನಲ್ಲಿರುವ ಡಾಲರ್ಸ್ ಕಾಲೊನಿಯಲ್ಲಿರುವ ಯಡಿಯೂರಪ್ಪರ ಮನೆಗೆ ಮಹಿಳೆಯೊಬ್ಬಳು ಸಹಾಯಕ್ಕಾಗಿ ಹೋದಾಗ ತಮ್ಮ ಪುತ್ರಿಯ ಜೊತೆಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದರೆಂದು ಮಾರ್ಚ್ 14ರಂದು ದೂರು ದಾಖಲಿಸಿದ್ದರು. ಈ ಬಗ್ಗೆ ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಅದರ ಮರುದಿನ, ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ, ಸಿಐಡಿಗೆ ವರ್ಗಾಯಿಸಿತ್ತು. ಸಿಐಡಿ ತಂಡದ ವತಿಯಿಂದ ತನಿಖೆಗೊಳಪಟ್ಟಿರುವ ಈ ಪ್ರಕರಣದಲ್ಲಿ ಅಧಿಕಾರಿಗಳು ಸಂತ್ರಸ್ತೆ ಹೇಳಿಕೆಗಳನ್ನು ಈಗಾಗಲೇ ದಾಖಲಿಸಿಕೊಂಡಿದ್ದಾರೆ.