ನವದೆಹಲಿ.
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ಯ ರಾಜ್ಯ ಕಾರ್ಯಕಾರಿಣಿ ಸದಸ್ಯನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ಬಂಧಿಸಿದೆ. ಮೊಹಮ್ಮದ್ ಶೆರೀಫ್ ಬಂಧಿತ ವ್ಯಕ್ತಿಯಾಗಿದ್ದು, ಅವರ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಲಾಗಿತ್ತು. ಬಹ್ರೇನ್ನಿಂದ ನವದೆಹಲಿಯ ಇಂದಿರಾಗಾAಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ವೇಳೆ ಬಂಧಿಸಲಾಗಿದೆ.
ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ 2022 ಜುಲೈ 26 ರಂದು ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಪಿಎಫ್ಐ ಕಾರ್ಯಕರ್ತರು ಮತ್ತು ಸದಸ್ಯರು ಹತ್ಯೆ ಮಾಡಿದ್ದರು ಎಂಬ ಆರೋಪವಿತ್ತು. 2022 ಆ.4ರಂದು ತನಿಖೆ ಕೈಗೆತ್ತಿಕೊಂಡ ಎನ್ಐಎ ಇದುವರೆಗೆ 20 ವ್ಯಕ್ತಿಗಳನ್ನು ಬಂಧಿಸಿದೆ.
ಪ್ರಕರಣದಲ್ಲಿ ಮೂವರು ತಲೆಮರೆಸಿಕೊಂಡಿದ್ದು, 23 ಆರೋಪಿಗಳನ್ನು ಚಾರ್ಜ್ಶೀಟ್ ಮಾಡಿದೆ.ಎನ್ಐಎ ತನಿಖೆಯ ಪ್ರಕಾರ, ಕೊಡಾಜೆ ಮೊಹಮ್ಮದ್ ಶೆರೀಫ್ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯ ಮತ್ತು ಸಂಘಟನೆಯ ಸೇವಾ ತಂಡದ ಮುಖ್ಯಸ್ಥರಾಗಿದ್ದರು. ಕೊಡಾಜೆ ಸಹ ಆರೋಪಿಗಳೊಂದಿಗೆ ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ನಲ್ಲಿ ಸೇವಾ ತಂಡದ ಸದಸ್ಯರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುವಲ್ಲಿ ತೊಡಗಿಸಿಕೊಂಡಿದ್ದರು.
ಪಿಎಫ್ಐನ ರಾಜ್ಯ ಕಾರ್ಯಕಾರಿ ಸಮಿತಿಯಲ್ಲಿ ಚರ್ಚೆಯ ನಂತರ ಉದ್ದೇಶಿತ ಹತ್ಯೆಯ ಸೂಚನೆಗಳನ್ನು ತಿಳಿಸುವ ಜವಾಬ್ದಾರಿಯನ್ನು ಕೊಡಾಜೆ ವಹಿಸಿದ್ದರು. ಈ ಸೂಚನೆ ಮೇರೆಗೆ ಆರೋಪಿ ಮುಸ್ತಫಾ ಪೈಚಾರ್ ಮತ್ತು ಆತನ ತಂಡ ಪ್ರವೀಣ್ ನೆಟ್ಟಾರನ್ನು ಬರ್ಬರವಾಗಿ ಹತ್ಯೆ ಮಾಡಿತ್ತು.ಸಮಾಜದಲ್ಲಿ ಭಯೋತ್ಪಾದನೆ ಮತ್ತು ಕೋಮು ದ್ವೇಷ ಮತ್ತು ಅಶಾಂತಿಯನ್ನು ಹರಡುವ ಉದ್ದೇಶದಿಂದ ಸಂಚು ರೂಪಿಸಲಾಗಿತ್ತು ಎಂದು ಎನ್ಐಎ ತನಿಖೆಗಳು ಮತ್ತಷ್ಟು ಬಹಿರಂಗಪಡಿಸಿವೆ. ತಲೆಮರೆಸಿಕೊಂಡವರ ಬಂಧನ ಮತ್ತು ಪರಾರಿ ಮುಂದುವರಿದಿದೆ