
ದಾವಣಗೆರೆ : ಭಾರತ ದೇಶದಲ್ಲಿ ಗೋವುಗಳಿಗೆ ಪೂಜ್ಯನೀಯ ಸ್ಥಾನ ಇದೆ. ಗೋವುಗಳಲ್ಲಿ ಮುಕ್ಕೋಟಿ ದೇವರುಗಳು ನೆಲೆಸಿದ್ದಾರೆ ಎಂದು ಹಿಂದೂಗಳ ನಂಬಿಕೆ. ಗೋವಿನ ಪೂಜೆ ಮಾಡಿ, ಕಿಚ್ಚು ಹಾಯಿಸಿ ಸಂಭ್ರಮಿಸುವ ಸಂಕ್ರಾಂತಿ ಹಬ್ಬದ ಎರಡು ದಿನ ಮುನ್ನವೇ ಕಿಡಿಗೇಡಿಗಳು ಮೂರು ರಾಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದಾರೆ.
ರಾಜ್ಯದ ರಾಜಧಾನಿ ಬೆಂಗಳೂರಿನ ಹೃದಯ ಭಾಗ ಎನ್ನಿಸಿಕೊಂಡಿರುವ ಚಾಮರಾಜಪೇಟೆಯ ಕೆ.ಆರ್ ಮಾರ್ಕೆಟ್ ಸನ್ನಿಹದಲ್ಲಿರುವ ವಿನಾಯಕ ಚಿತ್ರಮಂದಿರದ ಹಿಂಭಾಗದ ಓಲ್ಡ್ ಪೆನ್ಷನ್ ಮೊಹಲ್ಲಾ ರಸ್ತೆಯಲ್ಲಿ ಕರ್ಣ ಎಂಬುವರು ಸಾಕಿದ 🐄 ಹಸುಗಳ 🐮 ಕೆಚ್ಚಲನ್ನು ದುಷ್ಕರ್ಮಿಗಳು ಕೊಯ್ದು ಪೈಶಾಚಿಕ ಕೃತ್ಯ ಎಸಗಿದ್ದಾರೆ.
ಭಾರತ ದೇಶದ ರೈತರು ಗೋವುಗಳ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಹಸುವಿನ ಹಾಲು, ಹಾಲಿನಿಂದ ಮೊಸರು, ಮಜ್ಜಿಗೆ, ಬೆಣ್ಣೆ, ಬೆಣ್ಣೆಯಿಂದ ತುಪ್ಪ ಉತ್ಪಾದನೆ ಈಗ ದೊಡ್ಡ ಉದ್ಯಮವಾಗಿ ಬೆಳೆದಿದೆ. ಈ ಹೈನುಗಾರಿಕೆಯಿಂದ ಲಕ್ಷಾಂತರ ಜನರು ಬದುಕು ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಹೀಗಾಗಿಯೇ ರೈತರು ಗೋಮಾತೆಯನ್ನು ದೇವರೆಂದು ಪೂಜಿಸುತ್ತಾರೆ. ಕಸವನ್ನೇ ತಿಂದರೂ ಕೊನೆಗೆ ಹಾಲಿನಂತಹ ಅಮೃತವನ್ನೇ ನೀಡುವೆ ನಮಗೆ ಎಂದು ವರನಟ ಡಾ.ರಾಜಕುಮಾರ್ ಹಾಡುವ ಹಾಡಿಗೆ ತಲೆದೂಗುವ ಜನರು ಅಮೃತ ನೀಡುವ ಕೆಚ್ಚಲನ್ನು ಕೊಯ್ದಿರುವ ಪೈಶಾಚಿಕ ಕೃತ್ಯವನ್ನು ಕ್ಷಮಿಸುವುದಿಲ್ಲ.


ಇಂತಹ ರೈತ ಸ್ನೇಹಿ ಸಾಕು ಪ್ರಾಣಿ ಹಸುವಿನ ಹಾಲು ಕೊಡುವ ಕೆಚ್ಚಲನ್ನು ಕೊಯ್ದಿರುವುದು ಸಹಜವಾಗಿ ಜನರ ಮನಸ್ಸಿಗೆ ಬಹಳ ನೋವಾಗಿದೆ.
ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರ ಅತಿಯಾದ ಮುಸ್ಲಿಂರ ತುಷ್ಟೀಕರಣದಿಂದ ರಾಜ್ಯದಲ್ಲಿ ಇಂತಹ ಅವಮಾನವೀಯ ದುಷ್ಕೃತ್ಯಗಳು ನಡೆಯುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವಾಗಿದೆ. ಸರ್ಕಾರ ಮತ್ತು ಪೊಲೀಸ್ ಇಲಾಖೆಗಳು ಸತ್ತು ಹೋಗಿವೆ. ಈ ಕನ್ನಡ ನಾಡು ಪುಂಡ ಪೋಕರಿಗಳ ನೆಲೆ ನಾಡಗಿದೆ.
ಇಂತಹ ದುಷ್ಕೃತ್ಯಗಳನ್ನು ಎಸಗಿರುವ ಕ್ರೂರಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ನಾಳೆ ಮಂಗಳವಾರ ಮಕರ ಸಂಕ್ರಾಂತಿ ಹಬ್ಬದ ದಿನ ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ನಗರದ ಗುಂಡಿ ಮಹಾದೇವಪ್ಪ ವೃತ್ತದಿಂದ ಜಿಲ್ಲಾ ಬಿಜೆಪಿ ರೈತ ಮೋರ್ಚಾದಿಂದ ಗೋವುಗಳೊಂದಿಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್ ರಾಜಶೇಖರ ನಾಗಪ್ಪ ಸೇರಿದಂತೆ ಜಿಲ್ಲೆಯ ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ಕಳೆದ ಲೋಕಸಭಾ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡ ಅಭ್ಯರ್ಥಿಗಳು, ಪಕ್ಷದ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ಮತ್ತು ರೈತ ಮೋರ್ಚಾ ಮುಖಂಡ ಕೊಳೇನಹಳ್ಳಿ ಬಿ ಎಂ ಸತೀಶ್ ಮನವಿ ಮಾಡಿದ್ದಾರೆ.

