ಬೆಂಗಳೂರು : Exit.. ಸಮಸ್ಯೆಯಿದ್ದ ಕಡೆಯಿಂದ Exit.. ರಾಜ್ಯ ಕಾಂಗ್ರೆಸ್ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಾಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ Exit Door ಬ್ರಹ್ಮಾಸ್ತ್ರ ಬಳಸಿದೆ. ಇದಕ್ಕೆ ಕಾರಣ ಆ 1 ವಿಡಿಯೋ ವೈರಲ್ ಆಗ್ತಾಯಿರೋದು.. ಹಾಗಾದ್ರೆ ಇಲ್ಲಿ ಸಂಸದ ತೇಜಸ್ವಿ ಸೂರ್ಯ ಜನರ ಆಕ್ರೋಶದ ಮಧ್ಯೆಯೂ ಹೊರ ನಡೆಯುತ್ತಿರೋದ್ಯಾಕೆ..? ಅಷ್ಟಕ್ಕೂ ಏನಿದು ಘಟನೆ ಅಂದ್ರಾ.?
ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ನಡೆಸುತ್ತಿದ್ದಾರೆ. ಅದರಂತೆ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದ ಸಭೆಯೊಂದರಲ್ಲಿ ಗದ್ದಲವುಂಟಾದ ಪರಿಣಾಮ ಸಿಟ್ಟಿಗೆದ್ದ ಸಂಸದ ತೇಜಸ್ವಿ ಸೂರ್ಯ ಅವರು ಹೊರ ನಡೆದಿರೋದು ತಡವಾಗಿ ಬೆಳಕಿಗೆ ಬಂದಿದೆ. ಲೋಕಸಭಾ ಚುನಾವಣಾ ಹಿನ್ನೆಲೆ ಏಪ್ರಿಲ್ 13ರಂದು ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ಗಳ ಠೇವಣಿದಾರರ ಸಭೆಯನ್ನು ಕರೆದಿದ್ದು, ಈ ವೇಳೆ ಸಂಸದ ತೇಜಸ್ವಿ ಸೂರ್ಯ ಹಾಗೂ ಠೇವಣಿದಾರರ ನಡುವೆ ಗದ್ದಲವುಂಟಾಗಿದೆ ಎನ್ನಲಾಗಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಭೆ ನಡೆಯುತ್ತಿದ್ದ ವೇಳೆ ಠೇವಣಿದಾರರು ಸಂಸದ ತೇಜಸ್ವಿ ಸೂರ್ಯ ಅವರಿಗೆ ಕೆಲವು ಪ್ರಶ್ನೆಗಳನ್ನ ಕೇಳಿದ್ದಾರೆ. ಅದಕ್ಕೆ ಉತ್ತರಿಸದ ತೇಜಸ್ವಿ ಸೂರ್ಯ ಅಲ್ಲಿಂದ ಜಾಗ ಖಾಲಿ ಮಾಡಲು ಯತ್ನಿಸಿದ್ರು. ಈ ವೇಳೆ ತೇಜಸ್ವಿ ಸೂರ್ಯ ವಿರುದ್ಧ ಠೇವಣಿದಾರರು ಆಕ್ರೊಶ ಹೊರಹಾಕಿದ್ದಾರೆ. ತೇಜಸ್ವಿ ಸೂರ್ಯ ವಿರುದ್ಧ ಕೆಲವು ಘೋಷಣೆಗಳೂ ಕೂಡ ಕೇಳಿಬಂದಿವೆ. ಇನ್ನು ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸಪಟ್ಟಿದ್ದಾರೆ.
ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಈ ವಿಡಿಯೋ ತುಣುಕನ್ನ ಟ್ವೀಟ್ ಮಾಡಿ ತೇಜಸ್ವಿ ಸೂರ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದೆ.
ಬಿಜೆಪಿಯ ತೇಜಸ್ವಿ ಸೂರ್ಯ ಮತ್ತೊಮ್ಮೆ “ಎಮರ್ಜೆನ್ಸಿ ಎಕ್ಸಿಟ್ ಡೋರ್” ಮೂಲಕ ಜನರಿಂದ ಎಸ್ಕೇಪ್ ಆಗಿದ್ದಾರೆ! ಬೆಂಗಳೂರು ದಕ್ಷಿಣದ ಸಂಸದ 5 ವರ್ಷದುದ್ದಕ್ಕೂ ದೋಸೆ ತಿಂದುಕೊಂಡು, ಫುಟ್ ಬಾಲ್ ಆಡಿಕೊಂಡು, ಮೋಜು ಮಾಡಿಕೊಂಡು ಕಾಲ ಕಳೆದಿದ್ದರು, ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಹಣ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಯನ್ನು ಒಂದು ದಿನವೂ ಆಲಿಸದ ತೇಜಸ್ವಿ ಸೂರ್ಯ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣೆಯ ಸಮಯದಲ್ಲಿ ಮತದಾರರ ಮೇಲೆಯೇ ಹಲ್ಲೆ, ನಿಂದನೆ ಮಾಡಲು ಮುಂದಾಗುವ ತೇಜಸ್ವಿ ಸೂರ್ಯನ ಪಟಾಲಂನ ದುರಹಂಕಾರ ಮಿತಿ ಮೀರಿದೆ, ಮತದಾರರು ಈ ಅಹಂಗೆ ಪಾಠ ಕಲಿಸುವ ಸಮಯ ಬಂದಿದೆ. ಎಲ್ಲಾ ಕಡೆಯೂ ಮತದಾರರಿಂದ ಬಿಜೆಪಿಯ ಅಭ್ಯರ್ಥಿಗಳು ಗೋಬ್ಯಾಕ್ ಎದುರಿಸುತ್ತಿದ್ದಾರೆ, ಈ ಜನಾಕ್ರೋಶಕ್ಕೆ ಬಿಜೆಪಿ ದೂಳಿಪಟ ಮಾಡುವುದು ನಿಶ್ಚಿತ ಅಂತೇಳಿ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಇನ್ನ ಮತ್ತೊಂದು ಟ್ವೀಟ್ನಲ್ಲಿ ಮತ್ತೊಂದು ವಿಡಿಯೋ ತುಣುಕನ್ನ ಹಂಚಿಕೊಂಡಿರೋ ರಾಜ್ಯ ಕಾಂಗ್ರೆಸ್ ಘಟಕ ಕನ್ನಡಿಗರಿಂದ ತಪರಾಕಿ ಪಡೆದುಕೊಂಡು ಎಕ್ಸಿಟ್ ಡೋರ್ ನಲ್ಲಿ ಹೊರಹೋದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಉತ್ತರ ಪ್ರದೇಶದ ಜನರನ್ನು ಕರೆತಂದು ಪ್ರಚಾರ ಮಾಡುತ್ತಿದ್ದಾರೆಯೇ? ಅಥವಾ ತೇಜಸ್ವಿ ಸೂರ್ಯ ಉತ್ತರ ಪ್ರದೇಶದಲ್ಲಿ ಚುನಾವಣೆಗೆ ನಿಂತಿದ್ದಾರೆಯೇ? ಹಿಂದಿಯನ್ನು ಹೊತ್ತು ಮೆರೆಸುವ ತೇಜಸ್ವಿ ಸೂರ್ಯನಿಂದ ಕನ್ನಡಿಗರು ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವೇ? ಇಂತಹ ಅನರ್ಹ ವ್ಯಕ್ತಿಯನ್ನು ಕನ್ನಡಿಗರು ಎಮರ್ಜೆನ್ಸಿ ಎಕ್ಸಿಟ್ ನಲ್ಲಿ ಹೊರ ಕಳಿಸುವುದು ನಿಶ್ಚಿತ ಅಂತೇಳಿ ಟ್ವೀಟ್ ಮಾಡಿ ಕುಟುಕಿದೆ.
ಹಾಗಾದ್ರೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ರಾಜ್ಯ ಕಾಂಗ್ರೆಸ್ ಮಾಡಿರೋ ಈ ‘Exit Door’ ತಿರುಗೇಟಿನ ಬಗ್ಗೆ ನೀವೇನಂತಿರಾ?