Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ಬಹುಮಾಧ್ಯಮ ಹೊಸ ಸಾಧ್ಯತೆಗಳ ಸಂಶೋಧನೆ ಅತ್ಯವಶ್ಯಕ.
ಪ್ರಮುಖ ಸುದ್ದಿ

ಬಹುಮಾಧ್ಯಮ ಹೊಸ ಸಾಧ್ಯತೆಗಳ ಸಂಶೋಧನೆ ಅತ್ಯವಶ್ಯಕ.

davangerevijaya.comBy davangerevijaya.com14 December 2024Updated:14 December 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ಜೆ.ಎನ್.ಎನ್.ಸಿ.ಇ: ಐಇಇಇ ಅಂತರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ.

ಶಿವಮೊಗ್ಗ:

ಬಹುಮಾಧ್ಯಮ (ಮಲ್ಟಿಮಿಡಿಯಾ ಪೆÇ್ರಸೆಸಿಂಗ್) ನಿರ್ವಹಣೆಯಲ್ಲಿ ಹೊಸ ಸಾಧ್ಯತೆಗಳ ಕುರಿತಾಗಿ ಮತ್ತಷ್ಟು ಸಂಶೋಧನೆಗಳ ಅವಶ್ಯಕತೆಯಿದ್ದು ಈ ಹಿನ್ನಲೆಯಲ್ಲಿ ವಿದ್ಯಾಸಂಸ್ಥೆಗಳಲ್ಲಿ ಸಂಶೋಧನಾ ಕೇಂದ್ರಗಳು ಪ್ರಾರಂಭವಾಗಲಿ ಎಂದು ಬೆಂಗಳೂರು ಐಐಎಸ್ಸಿ ಪ್ರಾಧ್ಯಾಪಕ ಟಿ.ಶ್ರೀನಿವಾಸ ಅಭಿಪ್ರಾಯಪಟ್ಟರು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ಐಇಇಇ ಬೆಂಗಳೂರು ಮತ್ತು ಮಂಗಳೂರು ವಿಭಾಗ, ಐಇಟಿಇ ಶಿವಮೊಗ್ಗ ಕೇಂದ್ರ, ಐಇಇಇ ಕಾಮ್‍ಸಾಕ್ ಬೆಂಗಳೂರು ವಿಭಾಗದ ಸಹಯೋಗದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮಲ್ಟಿಮಿಡಿಯಾ ಪೆÇ್ರಸೆಸಿಂಗ್, ಕಮ್ಯುನಿಕೇಷನ್ ಮತ್ತು ಇನ್ಫಾರ್ಮೇಷನ್ ಟೆಕ್ನಾಲಜಿ ಕುರಿತ ನಾಲ್ಕನೇ ಅಂತರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಜಗತ್ತಿನಲ್ಲಿ ನಡೆಯುತ್ತಿರುವ ವಿಷಯಗಳ ವಾಸ್ತವತೆಯನ್ನು ವಿಮರ್ಶೆ ಮಾಡುವಂತೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಬೇಕಿದೆ. ಸಂಶೋಧನೆಗಳು ಸ್ವಯಂ ಆಸಕ್ತಿಯುಳ್ಳ ಪ್ರಕ್ರಿಯೆ ಆಗಬೇಕು. ಸಂಶೋಧನೆಗಾಗಿ ಜಗತ್ತಿನಲ್ಲಿ ನಡೆಯುತ್ತಿರುವ ಆವಿಷ್ಕಾರಗಳ ಪ್ರೇರಣೆ ಪಡೆಯಿರಿ. ಹೊಸ ಸಂಶೋಧನಾ ಲೇಖನಗಳ ಅಧ್ಯಯನಶೀಲತೆ ಮತ್ತು ವಿಮರ್ಶಾತ್ಮಕ ಕೌಶಲ್ಯತೆ ನಿಮ್ಮದಾಗಲಿ ಎಂದು ಹಾರೈಸಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ಬದಲಾವಣೆ ಜಗದ ನಿಯಮ. ಇಂಜಿನಿಯರಿಂಗ್ ವಿದ್ಯಾಭ್ಯಾಸ ಈ ಮೊದಲಿನಂತಿಲ್ಲ. ಕೇವಲ ಪಠ್ಯದ ಅಧ್ಯಯನಕ್ಕೆ ಮಾತ್ರ ಸೀಮಿತವಾಗದೆ, ವಾಸ್ತವತೆಯ ಜ್ಞಾನವು ಬೇಕಿದೆ. ಭವಿಷ್ಯದ ತಾಂತ್ರಿಕ ಆವಿಷ್ಕಾರಗಳ ಅವಶ್ಯಕತೆಯ ಕುರಿತಾಗಿ ಚಿಂತನೆಗಳಿಗೆ ಇಂತಹ ಕಾರ್ಯಾಗಾರ ಪ್ರೇರಣೆಯಾಗಲಿ. ಆಧುನಿಕತೆಯ ಒಳಗೆ ಮಲ್ಟಿಮೀಡಿಯಾ ಬಹುದೊಡ್ಡ ಶಕ್ತಿಯಾಗಿದ್ದು, ಮಾಧ್ಯಮಗಳಲ್ಲಿ ಕಾಣುವ ನೇರ ಪ್ರಸಾರ, ಸುದ್ದಿ ಪ್ರಸರಣ ಎಲ್ಲವೂ ಸೇರಿದೆ. ಅಂತಹ ಪ್ರಸರಣಕ್ಕೆ ಮತ್ತಷ್ಟು ವೇಗ ಮತ್ತು ನಿಖರತೆಯ ಕುರಿತಾಗಿ ಮತ್ತಷ್ಟು ಸಂಶೋಧನೆಗಳ ಬಗ್ಗೆ ಈ ವಿಚಾರಸಂಕಿರಣದಲ್ಲಿ ಚರ್ಚೆ ನಡೆಯಲಿ ಎಂದು ಹೇಳಿದರು.

ಆಸ್ಟ್ರೇಲಿಯಾ ಡಿಕಿನ್ ವಿಶ್ವವಿದ್ಯಾಲಯದ ಡಾ.ಗ್ಯಾಂಗ್ ಲಿ ಮಾತನಾಡಿ, ಕೃತಕ ಬುದ್ದಿಮತ್ತೆ ಎಂಬುದು ಸಾಮಾನ್ಯ ಜನರ ಜೀವನಕ್ಕೆ ಬಹಳ ಹತ್ತಿರವಾಗಿದೆ. ಮಲ್ಟಿಮಿಡಿಯಾ ಕ್ಷೇತ್ರದಲ್ಲಿ ಎಐ ತಂತ್ರಜ್ಞಾನವು ಅದ್ಭುತ ನಿಖರತೆಯನ್ನು ನೀಡುತ್ತಿದೆ. ಈ ನಡುವೆ ತಂತ್ರಜ್ಞಾನ ಬೆಳೆದಂತೆಲ್ಲ, ಮನುಷ್ಯನಲ್ಲಿರುವ ನೈತಿಕತೆ ಮತ್ತು ವೃತ್ತಿಪರತೆ ಎಂಬುದು ಕಡಿಮೆಯಾಗುತ್ತಿರುವುದು ವಿಷಾದನೀಯ ಎಂದು ಹೇಳಿದರು.

ಎನ್‍ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಎಮೊಷನಲ್ ಎಐ ಮೂಲಕ ತಂತ್ರಜ್ಞಾನ ದೈನಂದಿನ ಕೆಲಸ ಕಾರ್ಯಗಳ ಜೊತೆಯಲ್ಲಿ ಭಾವನಾತ್ಮಕವಾಗಿಯು ಸ್ಪಂದಿಸಲು ಪ್ರಾರಂಭಿಸುತ್ತಿದೆ. ಅನೇಕ ಸೃಜನಶೀಲ ಚಿಂತನೆಗಳನ್ನು ತಂತ್ರಜ್ಞಾನವೇ ಶಿಫಾರಸ್ಸು ಮಾಡುವ ಕಾಲ ಸನಿಹವಾಗಿದೆ. ಇದರಿಂದ ಜನರ ಸಮೂಹದಿಂದಲೇ ದೂರಾಗಿ ಯಾಂತ್ರಿಕರಣದ ಗುಲಾಮರಾಗುವ ಆತಂಕ ಎದುರಾಗುತ್ತಿದೆ ಎಂದು ಹೇಳಿದರು.

ಐಇಇಇ ಮಂಗಳೂರು ಉಪ ವಿಭಾಗದ ಮುಖ್ಯಸ್ಥ ಡಾ.ವಾಸುದೇವ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್‍ಇಎಸ್ ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶ್ರೇಷ್ಟಿ, ಹೆಚ್.ಸಿ.ಶಿವಕುಮಾರ್, ಆಜೀವ ಸದಸ್ಯರಾದ ಕಿಶೋರ್ ಶೀರನಾಳಿ, ಗುರುಪ್ರಸಾದ್, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ, ಕಾರ್ಯಕ್ರಮ ಸಂಯೋಜಕರಾದ ಡಾ.ಶೀಲಾ, ಡಾ.ಪ್ರಮೋದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ವಿಚಾರಸಂಕಿರಣದ ಸ್ಮರಣ ಸಂಚಿಕೆಯನ್ನು ಅತಿಥಿಗಳು ಬಿಡುಗಡೆಗೊಳಿಸಿದರು.

feachare Top News
Share. WhatsApp Facebook Twitter Telegram
davangerevijaya.com
  • Website

Related Posts

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,321 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,083 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,321 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,083 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.