ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ, ಹೆಚ್ಚು ಬಳಸುವ ಮೂಲಕ ಉಳಿಸಿ ಬೆಳೆಸಬೇಕು.
ಶಿವಮೊಗ್ಗ; ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಲು ನಿರಂತರ ಪರಿಶ್ರಮದ ಜತೆಯಲ್ಲಿ ಆತ್ಮವಿಶ್ವಾಸ ಮುಖ್ಯ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.
ನಗರದ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಹೋಟೆಲ್ ರಜತ ಮಹೋತ್ಸವ ಸಮಾರಂಭ ಹಾಗೂ ಕನ್ನಡ ರಾಜ್ಯೋತ್ಸವ ನಿರಂತರ ಗಾಯನ, ದಂಪತಿಗಳ ಗಾಯನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಇದ್ದು, ಕನ್ನಡ ಭಾಷೆಯನ್ನು ಹೆಚ್ಚು ಬಳಸುವ ಮೂಲಕ ಉಳಿಸಿ ಬೆಳೆಸಬೇಕು. ಭಾವಗಾನ ಸಂಸ್ಥೆ 8ನೇ ವಾರ್ಷಿಕೋತ್ಸವ ಆಚರಿಸುತ್ತಿರುವುದು ತುಂಬಾ ಸಂತೋಷದ ಸಂಗತಿ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಭಾವಗಾನ ಸಂಸ್ಥೆಯಲ್ಲಿ 160ಕ್ಕೂ ಹೆಚ್ಚು ಜನ ಕಲಾವಿದರಿದ್ದು, ಉತ್ತಮ ವೇದಿಕೆ ಒದಗಿಸುವ ಕೆಲಸವನ್ನು ಸಂಸ್ಥೆ ವತಿಯಿಂದ ಮಾಡಲಾಗುತ್ತಿದೆ. ಭದ್ರಾವತಿ ವಾಸು ಅವರ ಸಾಧನೆ ಅನನ್ಯ. ಇವರಿಂದ ಎಷ್ಟೋ ಜನ ಕಲಾವಿದರು ಚೆನ್ನಾಗಿ ಹಾಡು ಕಲಿತಿರುವುದು ತುಂಬಾ ವಿಶೇಷ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಭಾವಗಾನ ಸಂಸ್ಥೆಯ ಭದ್ರಾವತಿ ವಾಸು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಥುರಾ ರಜತ ಮಹೋತ್ಸವ ಅಂಗವಾಗಿ ಅನೇಕ ಸಾಂಸ್ಕೃತಿಕ, ಪರಿಸರ ಹಾಗೂ ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಿವೆ. ಸಂಸ್ಥೆಯು ನಿರಂತರ ಗಾಯನ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಧನಲಕ್ಷ್ಮೀ ಗಿರೀಶ್, ವಿಜಯಾ ಸತೀಶ್, ಬುಜಂಗಪ್ಪ, ಪ್ರಮೋದ್, ಪ್ರಶಾಂತ್, ಹೇಮಂತ್, ಚಂದ್ರಶೇಖರ ಭಟ್, ಸುಮಾ, ಶಶಿರೇಖಾ, ಆದ್ಯಾ, ರವಿ, ಬಸವರಾಜ್, ರವಿ ಚವ್ಹಾಣ್ ಹಾಗೂ ಕಲಾವಿದರು ಉಪಸ್ಥಿತರಿದ್ದರು.