ದಾವಣಗೆರೆ: ಮುಡಾ ಹಗರಣದಲ್ಲಿ ಸಿಲುಕಿಕೊಂಡಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ, ನಾನು ಕೂಡ ಸಿಎಂ ಆಗುತ್ತೇನೆ ಎಂದು ಪರೋಕ್ಷವಾಗಿ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಪ್ರಶ್ನೆ ಬಂದ್ರೆ, ನಾನೇ ಸ್ಪರ್ಧೆ ಮಾಡ್ತೀನಿ.
ರಾಜ್ಯದಲ್ಲಿ ನಡೆಯುತ್ತಿರುವ ಸಿಎಂ ಕುರ್ಚಿ ಬದಲಾವಣೆ ವಿಚಾರದ ಬಗ್ಗೆ ನಾನು ಸಚಿವರು ನಾನಾ ಹೇಳಿಕೆ ನೀಡಿದ್ದಾರೆ. ಸದ್ಯ ಸಿಎಂ ಸಿದ್ದರಾಮಯ್ಯ ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಈ ವೇಳೆ ಸಿಎಂ ಸ್ಥಾನ ಖಾಲಿ ಇಲ್ಲ. ಆದರೆ ಲಿಂಗಾಯತ ಸಿಎಂ ಆಗಬೇಕು ಎಂದು ಬಂದರೆ ಸೆಡ್ಡು ಹೊಡೆಯುತ್ತೇನೆ ಎಂದಿದ್ದಾರೆ.
ಸಿದ್ದರಾಮಯ್ಯ ಒಳ್ಳೆಯ ಅಡಳಿತ ಮಾಡುತ್ತಿದ್ದಾರೆ. ಅವರ ಅವಧಿ ಮುಗಿದ ಮೇಲೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅದಕ್ಕೂ ಮೊದಲು ನಮ್ಮ ಎಂಎಲ್‌ಎಗಳು ಯಾರನ್ನು ಆಯ್ಕೆ ಮಾಡ್ತಾರೋ ಅವರನ್ನು ಹೈಕಮಾಂಡ್ ಸಿಎಂ ಮಾಡ್ತಾರೆ. ಸಚಿವರಿಗೆ ಸಿಎಂ ಆಗಬೇಕು ಎನ್ನುವ ಆಸೆ ಜಾಸ್ತಿ ಇದೆ. ಆಸೆ ಇದ್ದವರಿಗೆ ನಿರಾಸೆ ಆಗಲಿದೆ. ಕೆಲವರು ಬಾಯಿಗೆ ಬಂದAತೆ ಮಾತಾಡಿಕೊಂಡು ಹೋಗೋದ್ರಿಂದ ಏನು ಪ್ರಯೋಜನ ಆಗಲ್ಲ. ಅವರೇ ಹಗುರ ಆಗ್ತಾರೆ ಅಷ್ಟೇ ಎಂದು ಎಚ್ಚರಿಸಿದ್ದಾರೆ.
ವಿಧಾನ ಸಭಾ ಚುನಾವಣೆಗೆ ಮುನ್ನವೂ ನಾನೇ ಸಿಎಂ ಅಂದಿದ್ದ ಶಾಮನೂರು : “ಮುಂದಿನ ಬಾರಿ ಸಿಎಂ ನಾನೇ ಆಗ್ತೇನೆ. ಅದರಲ್ಲಿ ಅದರಲ್ಲಿ ತಪ್ಪೇನಿದೆ. ಮುಂದಿನ ವಿಧಾನಸಭೆ ಚುನಾವಣೆ ಫಲಿತಾಂಶ ಬರಲಿ, ಆಗ ನಾನು ಹೇಳುತ್ತೇನೆ. ನಾನು ಸಿಎಂ ಸ್ಥಾನದ ಆಕಾಂಕ್ಷಿ, ಅದರಲ್ಲೇನಿದೆ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಈ ಹಿಂದೆ ಹೇಳಿದ್ದರು.
ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಗೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಪೈಪೋಟಿ ಇದೆ. ಯಾರಾಗ್ತಾರೆ ಸಿಎಂ ಎಂಬ ಮಾಧ್ಯಮದವರ ಪ್ರಶ್ನೆಗೆ ಶಾಮನೂರು ಶಿವಶಂಕರಪ್ಪ ಅಚ್ಚರಿ ಹೇಳಿಕೆ ನೀಡುವ ಮೂಲಕ ಕುತೂಹಲ ಮೂಡಿಸಿದ್ದರು. “ಕಾಂಗ್ರೆಸ್‌ಗೆ ಈಗ ಎಲ್ಲೆಡೆ ಒಳ್ಳೆಯ ವಾತಾವರಣ ಇದೆ. ಜನರು ಬಿಜೆಪಿ ಮೇಲೆ ಬೇಜಾರಾಗಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 140 ಸ್ಥಾನ ಗೆಲ್ಲುತ್ತೇವೆ. ವಿಧಾನಸಭೆ ಚುನಾವಣೆ ಆದ ಮೇಲೆ ಸಿದ್ದರಾಮಯ್ಯರೂ ಆಗಬಹುದು. ನಾನು ಆಗಬಹುದು. ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ. ವಿಧಾನ ಪರಿಷತ್ ಚುನಾವಣೆಯಲ್ಲೂ ಹೆಚ್ಚಿನ ಸ್ಥಾನ ಕಾಂಗ್ರೆಸ್ ಗೆಲ್ಲಲಿದೆ,” ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದರು.
ಜಮೀರ್ ಅಹಮದ್ ಖಾನ್ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲಾ ಪಕ್ಷದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಶಾಮನೂರು ಶಿವಶಂಕರಪ್ಪನವರಿಗೆ ಈಗ 93ರ ಹರೆಯ. ಆದರೂ ಎಲ್ಲಾ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸುತ್ತಾರೆ, ಚಟುವಟಿಕೆಯಿಂದ ಓಡಾಡುತ್ತಾರೆ. ಈಗ ನೀಡಿರುವ ಒಂದು ಹೇಳಿಕೆ ಈಗ ಕಾಂಗ್ರೆಸ್ ವಲಯದಲ್ಲಿ ಬಿಸಿಬಿಸಿ ಚರ್ಚೆಗೂ ಕಾರಣವಾಗಿದೆ.