ಶಿವಮೊಗ್ಗ: ವಿಧಾನ ಪರಿಷತ್ ನ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಪ್ರಬುದ್ಧರನ್ನು ಆಯ್ಕೆ ಮಾಡಿ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಅವರು ಇಂದು ಶಿಕಾರಿಪುರದ ಮಂಗಳ ಭವನದಲ್ಲಿ ಬಿಜೆಪಿ ಶಿಕಾರಿಪುರ ಮಂಡಲ ಆಯೋಜಿಸಿದ್ದ ಪ್ರಮುಖ ಕಾರ್ಯಕರ್ತರ ವಿಶೇಷ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಚುನಾವಣೆಯ ದೃಷ್ಟಿಯಿಂದ ಹಲವಾರು ಸಂಘಟನಾತ್ಮಕ ವಿಚಾರಗಳ ಕುರಿತು ಚರ್ಚೆ ನಡೆಸಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ಶ್ರಮ ವಹಿಸುವಂತೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಬಿಜೆಪಿ ಪಕ್ಷದೊಂದಿಗೆ ಜೆಡಿಎಸ್ ಪಕ್ಷವು ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದು, ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಹೊಂದಾಣಿಕೆ ಮಾಡಿಕೊಂಡು ಈಗಾಗಲೇ ನೋಂದಣಿ ಮಾಡಿಕೊಂಡಿರುವ ಪದವೀಧರರನ್ನು ಹಾಗೂ ಶಿಕ್ಷಕರನ್ನು ಪಕ್ಷದ ಕಾರ್ಯಕರ್ತರು ಖುದ್ದು ಭೇಟಿ ಮಾಡಿ ಪಕ್ಷದತ್ತ ಹೆಚ್ಚಿನ ಒಲವು ತೋರುವಂತೆ ಮನವೊಲಿಸುವ ಪ್ರಾಮಾಣಿಕ ಪ್ರಯತ್ನ ನಡೆಸಬೇಕು.ಈ ಮೂಲಕ ನಮ್ಮ ಅಭ್ಯರ್ಥಿಗಳ ದಿಗ್ವಿಜಯಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಹನುಮಂತಪ್ಪ, ಹರಿಕೃಷ್ಣ, ರೇವಣಪ್ಪ, ವೀರೇಂದ್ರ ಪಾಟೀಲ್, ಸಿದ್ದಲಿಂಗ, ಭೂಕಾಂತ್, ಮೋಹನ್, ಮಹೇಶ್ ಉಪಸ್ಥಿತರಿದ್ದರು.
- ಪ್ರಮುಖ ಸುದ್ದಿ
- ದಾವಣಗೆರೆ ವಿಶೇಷ
- ಕ್ರೈಂ ಸುದ್ದಿ
- ರಾಜಕೀಯ ಸುದ್ದಿ
- ರೈತಮಿತ್ರ
- ಅಡಕೆ ಧಾರಣೆ
- ಚಿನ್ನ, ಬೆಳ್ಳಿ ಧಾರಣೆ
- Blog
Subscribe to Updates
Get the latest creative news from FooBar about art, design and business.
ಶಿವಮೊಗ್ಗ: ಪ್ರಬುದ್ಧರನ್ನು ಆಯ್ಕೆ ಮಾಡಿ, ಸಂಸದ ಬಿ.ವೈ. ರಾಘವೇಂದ್ರ
ಚುನಾವಣೆಯ ದೃಷ್ಟಿಯಿಂದ ಹಲವಾರು ಸಂಘಟನಾತ್ಮಕ ವಿಚಾರಗಳ ಕುರಿತು ಚರ್ಚೆ