ಶಿವಮೊಗ್ಗ ; ನಗರದ ಅಮೀರ್ ಅಹಮ್ಮದ್ ವೃತ್ತದಲ್ಲಿರುವ ಲಕ್ಷ್ಮೀ ವೆಂಟಕೇಶ ಸ್ವೀಟ್ ಹೌಸ್‍ನಿಂದ ಶಿವಪ್ಪ ನಾಯಕ ವೃತ್ತದವರೆಗೆ ಪೊಲೀಸರು ದ್ವಿಚಕ್ರ ವಾಹನ ನಿಲುಗಡೆ ನಿಷೇದ ಮಾಡಿ ಬ್ಯಾರಿಕೇಡ್ ಅಳವಡಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಪೊಲೀಸರ ಪ್ರಕಾರ ಜನನಿಬಿಡ ಪ್ರದೇಶ, ರಾಷ್ಟ್ರೀಯ ಹೆದ್ದಾರಿ ಆಗಿರುವುದರಿಂದ ಶಿವಪ್ಪ ನಾಯಕ ವೃತ್ತದವರೆಗೆ ಬ್ಯಾರಿಕೇಡ್ ಅಳವಡಿಸಿದ್ದೇವೆ ಎನ್ನುತ್ತಾರೆ.
ಆದರೆ ಸ್ಥಳೀಯರ ಪ್ರಕಾರ ಕಳೆದ 30 ವರ್ಷಗಳಲ್ಲಿ ಇಲ್ಲದ ಹೊಸ ಕಾನೂನು ಈಗ ಏಕೆ ? ಇಲ್ಲಿನ ವಾಣಿಜ್ಯ ಸಂಕೀರ್ಣಗಳಿಗೆ ಬರುವ ಗ್ರಾಹಕರು ಇಷ್ಟು ದಿನ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿ ತಮ್ಮ ವ್ಯವಹಾರದ ನಂತರ ವಾಹನ ತೆರುವುಗೊಳಿಸುತ್ತಿದ್ದರು.
ಈಗ ಬ್ಯಾರಿಕೇಡ್ ಹಾಕಿರುವುದರಿಂದ ಸಾರ್ವಜನಿಕರು ಮತ್ತು ಗ್ರಾಹಕರು ತಮ್ಮ ವಾಹನಗಳನ್ನು ಬ್ಯಾರಿಕೇಡ್ ಹೊರಗಡೆ ನಿಲ್ಲಿಸುತ್ತಿದ್ದಾರೆ. ಇದರಿಂದ ಸುಗಮ ಸಂಚಾರಕ್ಕೆ ಇನ್ನು ಅವ್ಯವಸ್ಥೆಯಾಗುತ್ತಿದೆ. ಆದ್ದರಿಂದ ಬ್ಯಾರಿಕೇಡ್ ತೆರವುಗೊಳಿಸಿ ಮೊದಲಿನಂತೆ ದ್ವಿಚಕ್ರ ವಾಹನ ನಿಲುಗಡೆ ಅವಕಾಶ ನೀಡಬೇಕು ಎಂದು ಸ್ಥಳೀಯರ ಹಾಗೂ ಸಾರ್ವಜನಿಕರ ಒತ್ತಾಯವಾಗಿದ್ದು, ಶಾಸಕ ಚನ್ನಬಸಪ್ಪ ಕೂಡ ಇಂದು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.