ಶಿವಮೊಗ್ಗ : ಶಿವಮೊಗ್ಗದ ಕಾಂಗ್ರೆಸ್‌ಗೆ ಈಗ ಬಂಡಾಯವೆದಿದ್ದು, ಮೂಲ ಕಾಂಗ್ರೆಸಿಗ ಎಸ್.ಪಿ. ದಿನೇಶ್ ನೈರುತ್ಯ ಪದವೀಧರರ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ ಎಂದು ಸ್ಪಷ್ಟಪಡಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೈರುತ್ಯ ಪದವೀಧರ ಕ್ಷೇತ್ರದಿಂದ ನನಗೆ ಟಿಕೇಟ್ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷರು ಭರವಸೆ ನೀಡಿದ್ದು, ಅಲ್ಲದೆ ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಸೂಚಿಸಿದ್ದರಿಂದ ಕಳೆದ 10 ತಿಂಗಳಿನಿಂದ ತಯಾರಿ ನಡೆಸಿದ್ದೇನೆ. ಆದರೆ ಟಿಕೇಟ್ ಸಿಗದೇ ಇರುವುದರಿಂದ ಬೇಸರಗೊಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದರು.

ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ಪಕ್ಷದ ಎಲ್ಲಾ ಸಂಘಟನೆಗಳನ್ನು ಬಳಸಿಕೊಂಡು ಹತ್ತು ಸಾವಿರಕ್ಕೂ ಹೆಚ್ಚು ನೋಂದಣಿ ಮಾಡಿಸಿದ್ದೇನೆ. ಆದರೆ ಪಕ್ಷಾಂತರಿಯಾದ, ಕಾಂಗ್ರೆಸ್ ಪಕ್ಷಕ್ಕೆ ಹೀನಾಯವಾಗಿ ಹಿಯಾಳಿಸುತ್ತಿದ್ದ ಆಯನೂರು ಮಂಜುನಾಥ್ ಅವರಿಗೆ ಅಧಿಕೃತ ಅಭ್ಯರ್ಥಿ ಎಂದು ಘೋಷಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಬಗ್ಗೆ ಅಧ್ಯಕ್ಷರಿಗೆ ಕೇಳಿದರೆ ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲವೆಂದು ಹೇಳಿರುವುದು ನನಗೆ ಬೇಸರ ತಂದಿದೆ. ಈವರೆಗೂ ಅಧಿಕೃತ ಅಭ್ಯರ್ಥಿ ನನ್ನನ್ನು ಸಂಪರ್ಕಿಸಿ ಜಿಲ್ಲಾಧ್ಯಕ್ಷರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸದಂತೆ ನನಗೆ ದೂರವಾಣಿ ಕರೆ ಮಾಡಿದ್ದರು. ನಾಮ ಪತ್ರ ವಾಪಸ್ ಪಡೆಯಲು ಮೇ.20 ಕೊನೆಯ ದಿನವಾಗಿದ್ದು, ಇನ್ನೂ ಅಭ್ಯರ್ಥಿ ಬದಲಾವಣೆಗೆ ಅವಕಾಶವಿದೆ. ಬದಲಾವಣೆ ಪ್ರಯತ್ನಕ್ಕೆ ಈಗಲೂ ನಾನು ಸುತ್ತುತ್ತಿದ್ದೇನೆ. ಒಂದು ವೇಳೆ ಅಧಿಕೃತ ಅಭ್ಯರ್ಥಿ ಬದಲಾಯಿಸಿ ಪಕ್ಷನಿಷ್ಠೆ ಇರುವವರೆಗೆ ಬೇರೆ ಯಾರಿಗಾದರೂ ಕೊಟ್ಟಲ್ಲಿ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವೆ ಎಂದರು.

ಈ ಕ್ಷೇತ್ರದಲ್ಲಿ ಬಿಜೆಪಿ ಎದುರು ಕಾಂಗ್ರೆಸ್ ಕೇವಣಿ ಕಳೆದುಕೊಂಡಿತ್ತು. ನಾನು ಎರಡು ಬಾರಿ ನಿಂತಾಗಲೂ ಅಲ್ಪ ಮತಗಳ ಅಂತರದಿಂದ ಸೋತಿದ್ದೇನೆ.ನನ್ನ ಕ್ಷೇತ್ರದಲ್ಲಿ ಈ ಬಾರಿ 15 ಕಾಂಗ್ರೆಸ್ ಶಾಸಕರಿದ್ದಾರೆ. ಅವರಲ್ಲಿ 13 ಶಾಸಕರು ಮತ್ತು ಮಾಜಿ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳು ನನಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ನನಗೆ ಟಿಕೇಟ್ ಸಿಗದೇ ಇರುವುದಕ್ಕೆ ಅವರು ಕೂಡ ಬೇಸರ ವ್ಯಕ್ತಪಡಿಸಿದ್ದಾರೆ. ಪಕ್ಷದಿಂದ ಪಕ್ಷಕ್ಕೆ ಹಾರುವ ಅವಕಾಶವಾದಿ ರಾಜಕಾರಣಿಗೆ ಟಿಕೇಟ್ ನೀಡಿದರೆ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಕುಗ್ಗುತ್ತದೆ. ಆದ್ದರಿಂದ ಪಕ್ಷದ ಪೈಕಮಾಂಡ್ ಮತ್ತೊಮ್ಮೆ ಪಶೀಲನೆ ಮಾಡಿ ನನಗೆ ಅವಕಾಶ ನೀಡಬೇಕು./ಮೇ15ರಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ. ನನಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ದಿನೇಶ್ ಮನವಿ ಮಾಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಡಾ.ಹನುಮಂತಪ್ಪ ಆರ್. ಕಲ್ಮನಿ ಮಾತನಾಡಿ, ಎಸ್.ಪಿ. ದಿನೇಶ್ ಅವರು ನಮ್ಮ ಸಂಘದ ಕಾನೂನು ಸಲಹೆಗಾರರಾಗಿದ್ದು, ಅಲ್ಲದೆ ಸಂಘದ ಹೋರಾಟದಲ್ಲಿ ನಿರಂತರವಾಗಿ ಮಾರ್ಗದರ್ಶನ ನೀಡುತ್ತ ಅತಿಥಿ ಉಪನ್ಯಾಸಕರಿಗೆ ಸಿಗುತ್ತಿದ್ದ 18 ಸಾವಿರ ರೂ. ವೇತನವನ್ನು ಸರ್ಕಾರದೊಂದಿಗೆ ಮಾತುಕತೆ ನಡೆಸಿ ಈಗ ಸುಮಾರು 40 ಸಾವಿರ ರೂ. ವೇತನ ಸಿಗುವಂತೆ ಮಾಡಿದ್ದಾರೆ. ಇವರಿಗೆ ಈ ಬಾರಿ ಚುನಾವಣೆಯಲ್ಲಿ ಎಸ್.ಪಿ. ದಿನೇಶ್ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದರು.

Share.
Leave A Reply

Exit mobile version