ಶಿವಮೊಗ್ಗ : ಕೊಲೆ ಪ್ರಕರಣದ ಆರೋಪಿಯೋರ್ವನ ಕಾಲಿಗೆ ಪೋಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಸೋಮವಾರ ಬೆಳಗ್ಗೆ ಶಿವಮೊಗ್ಗ ಹೊರವಲಯ ಗ್ರಾಮಾಂತರ ಪೋಲೀಸ್ ಠಾಣೆ ವ್ಯಾಪ್ತಿಯ ಬೀರನಕೆರೆ ಗ್ರಾಮದ ಬಳಿ ನಡೆದಿದೆ.
ಶೋಯೆಬ್ ಅಲಿಯಾಸ್ ಅಂಡಾ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಪೋಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಯತ್ನಿಸಿದ್ದ. ಆ ಸಂದರ್ಭದಲ್ಲಿ ಪೆÇಲೀಸರು ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದರು. ಗುಂಡೇಟಿನಿಂದ ಗಾಯಗೊಂಡಿರುವ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿಯು ಬೀರನಕೆರೆ ಗ್ರಾಮದಲ್ಲಿರುವ ಮಾಹಿತಿ ಮೇರೆಗೆ ಸಬ್ ಇನ್ಸ್ಪೆಕ್ಟರ್ ಕುಮಾರ್ ಹಾಗೂ ಹೆಡ್ ಕಾನ್ಸ್ಟೇಬಲ್ ಅಣ್ಣಪ್ಪ ಅವರು ಸ್ಥಳಕ್ಕೆ ತೆರಳಿ ಬಂಧನಕ್ಕೆ ಮುಂದಾಗಿದ್ದರು. ಈ ವೇಳೆ ಆರೋಪಿಯು ಆಯುಧವೊಂದರಿಂದ ಪೆÇಲೀಸರ ಮೇಲೆ ದಾಳಿ ನಡೆಸಲು ಮುಂದಾಗಿದ್ದ. ತಕ್ಷಣವೇ ಪಿಎಎಸ್ ಐ
ಕುಮಾರ್ ಆರೋಪಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಕೋಟೆ ಪೋಲೀಸ್ ಠಾಣೆ ವ್ಯಾಪ್ತಿಯ ಲಷ್ಕರ್ ಮೊಹಲ್ಲಾದಲ್ಲಿ, ಆದಿಲ್ ಹಾಗೂ ಯಾಸಿನ್ ಖುರೇಷಿ ರೌಡಿ ತಂಡಗಳ ನಡುವೆ ನಡೆದಿದ್ದ ಗ್ಯಾಂಗ್ ವಾರ್ ನಲ್ಲಿ ಮೂವರು ಕೊಲೆಗೀಡಾಗಿದ್ದರು. ಆರೋಪಿ ಶೋಯೆಬ್ ಅಲಿಯಾಸ್ ಅಂಡಾನು ರೌಡಿ ಆದಿಲ್ ಸಹಚರನಾಗಿದ್ದ. ಘಟನೆಯ ನಂತರ ಈತ ತಲೆಮರೆಸಿಕೊಂಡಿದ್ದ.
ಆರೋಪಿಯ ವಿರುದ್ದ 5 ಪ್ರಕರಣಗಳಿದ್ದವು. ಕಳೆದ ಎರಡು ತಿಂಗಳ ಹಿಂದೆಯೇ ರೌಡಿಸಂ ಚಟುವಟಿಕೆಯಲ್ಲಿ ತೊಡಗದಂತೆ ಪೋಲೀಸರು ಆರೋಪಿಗೆ ಎಚ್ಚರಿಕೆ ಕೂಡ ನೀಡಿದ್ದರು ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ತಿಳಿಸಿದ್ದಾರೆ