ದಾವಣಗೆರೆ : ಕೇಂದ್ರ BJPಗೆ ಕನ್ನಡಿಗರನ್ನ ಕಂಡ್ರೆ ಯಾಕಿಷ್ಟು ದ್ವೇಷ? ಒಲ್ಲದ ಮನಸ್ಸಿಂದ, ಕೋರ್ಟ್ ಒತ್ತಾಯಕ್ಕೆ ಸ್ವಲ್ಪ ಬರ ಪರಿಹಾರದ ಹಣ ಬಿಡುಗಡೆ ಮಾಡಿದ್ರಾ ಅನ್ನೋ ಅನುಮಾನ ಇದೀಗ ಎಲ್ರನ್ನೂ ಕಾಡ್ತಾಯಿದೆ. ಹಾಗಾದ್ರೆ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ರಾಮಯ್ಯ ಸಿಡಿದೆದ್ದಿದ್ದೇಕೆ?
ಕಳೆದ ವರ್ಷ ಮುಂಗಾರು ವಿಫಲವಾಗಿ ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿತ್ತು. ಬರದಿಂದ ರಾಜ್ಯದ ಜನತೆ ರೋಸಿ ಹೋಗಿದ್ರು. ಹೀಗಾಗಿ ಬರ ಪರಿಹಾರ ವಿಚಾರದಲ್ಲಿ ಕರ್ನಾಟಕ ಸರ್ಕಾರ ನಿರಂತರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಹೌದು ವೀಕ್ಷಕರೇ, ಕರ್ನಾಟಕ ಸರ್ಕಾರ ಬರ ಪರಿಹಾರದ ವಿಚಾರವಾಗಿ ಸಾಕಷ್ಟು ಬಾರೀ ಕೇಂದ್ರದ ಕದ ತಟ್ಟಿತ್ತು. ಇದೀಗ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಬಳಿಕ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ.
ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ 18,174 ಕೋಟಿ ಬರ ಪರಿಹಾರಕ್ಕಾಗಿ ಕೇಂದ್ರದ ಮುಂದೆ ಬೇಡಿಕೆ ಇಟ್ಟಿತ್ತು. ಇದಾದ ಬಳಿಕ ಕೇಂದ್ರದ ತಂಡವೂ ಬಂದು ಬರ ಅಧ್ಯಯನ ನಡೆಸಿ ತೆರಳಿತ್ತು. ಆದರೆ, ಪರಿಹಾರ ಮಾತ್ರ ಬಿಡುಗಡೆಯಾಗಿದ್ದಿಲ್ಲ. ಹೀಗಾಗಿ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರ ವಿಳಂಬ ಧೋರಣೆ ಅನುಸರಿಸಿದ್ದರಿಂದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಕೇಂದ್ರ ಸರ್ಕಾರ ಸೋಮವಾರದೊಳಗೆ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರೀಂಕೋರ್ಟ್ನಲ್ಲಿ ಒಪ್ಪಿಕೊಂಡಿತ್ತು. ಅದರಂತೆ ಇದೀಗ ಕೇಂದ್ರ ಸರ್ಕಾರ ಬರ ಪರಿಹಾರ ಘೋಷಣೆ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿ ರಿಯಾಕ್ಟ್ ಮಾಡಿರೋ ಸಿಎಂ ಸಿದ್ರಾಮಯ್ಯ, ಬರಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ. ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ ನಮ್ಮಲ್ಲಿನ ಬರಸ್ಥಿತಿಯನ್ನು ಮನವರಿಕೆ ಮಾಡಿ ಕೊಟ್ಟಿದ್ದೆವು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ಗೆ ರಾಜಕೀಯ ದುರುದ್ದೇಶದಿಂದ ಕೇಂದ್ರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ ಅಂತೇಳಿದ್ದಾರೆ.
ನ್ಯಾಯಾಲಯ ವಿಚಾರಣೆ ವೇಳೆ ಚಾಟಿ ಬೀಸಿದ ನಂತರ ವಾರದ ಅವಧಿಯೊಳಗೆ ಬರ ಪರಿಹಾರ ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್ ಗೆ ವಚನ ನೀಡಿತ್ತು. ಅದನ್ನು ಪಾಲಿಸಲಿಕ್ಕಾಗಿ ಒಲ್ಲದ ಮನಸ್ಸಿನಿಂದ ಈ ಪರಿಹಾರ ನೀಡಿದೆ. ಇದರಲ್ಲಿ ಕರ್ನಾಟಕ ಬಿಜೆಪಿ ನಾಯಕರದ್ದಾಗಲಿ, ಕೇಂದ್ರ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಇದು ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಸುಪ್ರೀಂಕೋರ್ಟ್ ಇಟ್ಟುಕೊಂಡಿರುವ ಕಾಳಜಿಯ ಫಲ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಸ್ವಲ್ಪವಾದರೂ ಪರಿಹಾರವನ್ನು ನೀಡದೆ ಇದ್ದರೆ ರೊಚ್ಚಿಗೆದ್ದಿರುವ ಕರ್ನಾಟಕದ ಜನ ಚುನಾವಣಾ ಪ್ರಚಾರಕ್ಕಾಗಿ ತಮ್ಮನ್ನು ರಾಜ್ಯಕ್ಕೆ ಕಾಲಿಡಲು ಬಿಡಲಾರರು ಎಂಬ ಭಯವೂ ಈ ಪರಿಹಾರ ಘೋಷಿಸಲು ಕಾರಣವಾಗಿದೆ. ಈ ಅಲ್ಪ ಪರಿಹಾರವನ್ನು ತಮ್ಮ ಸಾಧನೆ ಎಂದು ರಾಜ್ಯದ ಬಿಜೆಪಿ ನಾಯಕರು ಬಿಂಬಿಸಲು ಹೊರಟರೆ ರಾಜ್ಯದ ಜನ ಅವರಿಗೆ ತಕ್ಕ ಉತ್ತರ ನೀಡಬೇಕೆಂದು ಮನವಿ ಮಾಡುತ್ತೇನೆ ಅಂತೇಳಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಈ ಬರ ಪರಿಹಾರ ಬಿಡುಗಡೆಯ ಹಿಂದಿನ ಕಾರಣಗಳೇನೇ ಇರಲಿ, ನೀಡಿರುವ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಸಾಧ್ಯವಾದಷ್ಟು ಶೀಘ್ರ ಬಾಕಿ ಪರಿಹಾರದ ಹಣವನ್ನು ಬಿಡುಗಡೆಗೊಳಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತಿದ್ದೇನೆ. ಇದೇ ರೀತಿ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯವನ್ನು ಕೂಡಾ ಕೇಂದ್ರ ಸರ್ಕಾರ ಸರಿಪಡಿಸಬೇಕೆಂದು ಆಗ್ರಹಿಸುತ್ತೇನೆ ಅಂತೇಳಿದ್ದಾರೆ..
ಇತ್ತ ರಾಜ್ಯ ಬಿಜೆಪಿ ನಾಯಕರು ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ಮುಂದೆ ಪಟ್ಟು ಹಿಡಿಯಲು ಮುಂದಾಗಿರ್ಲಿಲ್ಲ. ಆದ್ರೀಗ ಸಿಕ್ಕಿರೋ ಅಲ್ಪ ಪ್ರಮಾಣದ ಪರಿಹಾರವನ್ನೇ ಮಹಾ ಪ್ರಸಾದ ಎಂಬಂತೆ ಬಿಂಬಿಸುತ್ತಿದ್ದಾರೆ. ಚುನಾವಣಾ ಆಯೋಗದ ಅನುಮತಿ ಪಡೆದು ಸಂಕಷ್ಟ ಕಾಲದಲ್ಲೂ ಕರ್ನಾಟಕದ ಜನರ ಪರವಾಗಿ ತೀರ್ಮಾನ ತೆಗೆದುಕೊಂಡಿರುವುದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ಕಳಕಳಿ ತೋರಿಸುತ್ತೆ ಅಂತೇಳಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮತ್ತೊಂದು ಕಡೆ ವಿಪಕ್ಷ ನಾಯಕ ಆರ್. ಅಶೋಕ್ ಕೂಡ ರಿಯಾಕ್ಟ್ ಮಾಡಿದ್ದು, ಕೇಂದ್ರ ಸರ್ಕಾರವೇ ಕ್ರಮ ವಹಿಸಿ ಪರಿಹಾರ ನೀಡಿದೆ. ಇದರಲ್ಲಿ ಕಾಂಗ್ರೆಸ್ನ ಶ್ರಮ ಏನೂ ಇಲ್ಲ ಎಂದಿದ್ದಾರೆ.. ಹೀಗೆ ಹೇಳೋಕೆ ಆರ್ ಅಶೋಕ್ ಅವರಿಗೆ ನಾಚಿಕೆ ಆಗೋದಿಲ್ವೇ ಅಂತೇಳಿ ರಾಜ್ಯದ ಜನ ಪ್ರಶ್ನೆ ಮಾಡ್ತಿದ್ದಾರೆ.. ಬರ ಪರಿಹಾರದ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರವನ್ನ ಪ್ರಶ್ನೆ ಮಾಡೋ ಧಮ್ಮು ತಾಕತ್ತು ಇಲ್ಲದ ರಾಜ್ಯ ಬಿಜೆಪಿ ನಾಯಕರು, ಈಗ ಕಾಂಗ್ರೆಸ್ ನಾಯಕರ ನಿರಂತರ ಹೋರಾಟದ ನಂತರ ಅಷ್ಟೋ ಇಷ್ಟೋ ಪರಿಹಾರದ ಹಣವನ್ನ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಇದ್ರಲ್ಲಿ ಕಾಂಗ್ರೆಸ್ ನಾಯಕರ ಪಾತ್ರ ಏನೇನೂ ಇಲ್ಲ ಅಂತೇಳಿದ್ರೆ ರಾಜ್ಯದ ಜನ ಅದ್ಹೇಗೆ ನಂಬ್ತಾರೆ.? ಕರ್ನಾಟಕದ ಜನರನ್ನ ಬಿಜೆಪಿ ನಾಯಕರು ದಡ್ಡರು ಅಂತ ಭಾವಿಸಿದ್ದಾರಾ.? ರಾಜ್ಯ ಬಿಜೆಪಿ ನಾಯಕರ ಈ ಮಾತುಗಳ ಬಗ್ಗೆ ನೀವೇನಂತಿರಾ?