ದಾವಣಗೆರೆ: ದಾವಣಗೆರೆಯಲ್ಲಿ ಸಿದ್ದೇಶಪ್ಪ ಬೆಳೆಯಬಾರದು, ಸಿದ್ದೇಶಪ್ಪನನ್ನು ತೆಗೆಯಬೇಕು ಅಂತಾ ಹಲವರು ಕಾಯುತ್ತಿದ್ದಾರೆ. ಆದ್ದರಿಂದ ನನ್ನ ಕಾಲು ಕಡಿಯಬೇಕು ಅಂತಾರೆ. ಪಾಯಿಸನ್ ಹಾಕಬೇಕು ಅಂತಾರೆ. ಹಾಗಾಗಿ ಬಹಳ ಹುಷಾರಾಗಿದ್ದೇನೆ ಎಂದು ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನನ್ನು ಇಲ್ಲಿಂದ ತೆಗೆಯಬೇಕು ಎಂದು ಕೆಲವರು ಕಾಯುತ್ತಿದ್ದಾರೆ.ಕಾಲು ತೆಗೆಯಬೇಕು, ವಿಷ ಹಾಕಿ ಸಾಯಿಸಬೇಕು ಎಂದು ಹೊಂಚು ಹಾಕುತ್ತಿದ್ದಾರೆ. ಆದ್ದರಿಂದ ನಾನು ಎಲ್ಲೇ ಹೋದರೂ ಎಚ್ಚರಿಕೆಯಿಂದ ಇರುತ್ತೇನೆ. ಯಾರು ಏನೇ ಕೊಟ್ಟರೂ ತಿನ್ನುವುದಿಲ್ಲ.

ದಾವಣಗೆರೆಯಿಂದ ಸಿದ್ದೇಶಪ್ಪನನ್ನು ತೆಗೆಯಬೇಕು ಎಂದು ಹೊಂಚು ಹಾಕಿದ್ದಾರೆ.ನನ್ನ ಸ್ನೇಹ ಬಳಗದಲ್ಲೇ ಈ ರೀತಿಯಾಗಿ ಹೊಂಚು ಹಾಕುತ್ತಿದ್ದಾರೆ. ರಾಜಕೀಯ ದ್ವೇಷ ಬಿಟ್ಟರೇ ಎಂದ ಸಂಸದ ಜಿ.ಎಂ ಸಿದ್ದೇಶ್ವರ್ ಈ ರೀತಿ ಹೇಳಿದರು.

ಲೋಕಸಭೆ ಟಿಕೆಟ್ ತಪ್ಪಿಸಬೇಕೆಂದಿದ್ದಾರೆ‌

ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ತಪ್ಪಿಸಬೇಕು ಎಂದುಕೊಂಡಿದ್ದಾರೆ. ನನಗೇನೂ ಜೀವ ಬೆದರಿಕೆ ಇಲ್ಲ.. ಜೀವ ಭಯದಲ್ಲಿದೆ ಅಷ್ಟೇ. ಇದು ರಾಜಕೀಯ ದ್ವೇಷ. ನಾನು ಯಾರಿಗೂ ಜಗ್ಗಲ್ಲ, ಬಗ್ಗಲ್ಲ. ಬಿಜೆಪಿ ಟಿಕೆಟ್ ಘೋಷಿಸುವವರೆಗೂ ನಾನೇ ಅಭ್ಯರ್ಥಿ ಎಂದುಕೊಂಡಿದ್ದೇನೆ. ಹೈಕಮಾಂಡ್ ಯಾರಿಗೆ ಟಿಕೆಟ್ ಕೊಡುತ್ತೆ ಎಂಬುದು ಚುನಾವಣಾ ಸಮಯದಲ್ಲಿ ಗೊತ್ತಾಗುತ್ತದೆ. ಅಲ್ಲಿಯವರೆಗೆ ನಾನೇ ಅಭ್ಯರ್ಥಿ ಎಂದುಕೊಂಡಿದ್ದೇನೆ ಎಂದು ಹೇಳಿದರು.

ಏಳು ಬಾರಿ ಪಕ್ಷ ಟಿಕೆಟ್ ನೀಡಿದೆ

ಬಿಜೆಪಿ ಹೈಕಮಾಂಡ್ ನಮ್ಮ ಕುಟುಂಬಕ್ಕೆ ಏಳು ಬಾರಿ  ಟಿಕೆಟ್ ನೀಡಿದೆ. ಹಾಗಾಗಿ, ಬೇರೆ ಪಕ್ಷಕ್ಕೆ ಹೋಗುವ ಚಿಂತನೆ ಮಾಡಿಲ್ಲ.ನನ್ನ ಉಸಿರು ಇರುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ. ಒಂದು ವೇಳೆ ಬಿಜೆಪಿ ಬೇರೆಯವರೆಗೆ ದಾವಣಗೆರೆ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ಟಿಕೆಟ್ ನೀಡಿದರೆ ತನು, ಮನ, ಧನದೊಂದಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ರಾಜಕೀಯ ದ್ವೇಷದಿಂದ ನನ್ನ  ಮೇಲೆ ಆರೋಪ ಮಾಡುತ್ತಿದ್ದಾರೆ. ಯಾರೂ ನಂಬಲು ಹೋಗಬೇಡಿ. ನಾನು ಸೇವೆ ಮಾಡಲು ಅಷ್ಟೇ ಬಂದಿರುವುದು ಎಂದು ಸಂಸದರು ಹೇಳಿದರು.

ಸ್ವಚ್ಛತಾ ಕಾರ್ಯ :  ದಾವಣಗೆರೆ ಹೊಂಡದ ಸರ್ಕಲ್  ಚಂದ್ರಮೌಳೇಶ್ವರ ದೇವಾಲಯದಲ್ಲಿ ದಾವಣಗೆರೆ ಜಿಲ್ಲಾ ಬಿಜೆಪಿ ಘಟಕದಿಂದ ಸ್ವಚ್ಛತಾ ಕಾರ್ಯ ಕೈಗೊಳ್ಳಾಗಿತ್ತು. ದಾವಣಗೆರೆ ಸಂಸದ ಜಿ ಎಂ ಸಿದ್ದೇಶ್ವರ್ ನೇತೃತ್ವದಲ್ಲಿ ಹಮ್ಮಿಕೊಂಡ ಸ್ವಚ್ಛಾತಾ ಕಾರ್ಯದಲ್ಲಿ ಎಂ ಎಲ್ ಸಿ ಎನ್ ರವಿಕುಮಾರ್  ಸೇರಿದಂತೆ ಜಿಲ್ಲಾ ಮುಖಂಡರು ಪಾಲ್ಗೊಂಡಿದ್ದರು. ಜೈ ಶ್ರೀರಾಮ್ ಘೋಷಣೆಯೊಂದಿಗೆ ಸತತ ಒಂದು ಗಂಟೆಗಳ ಕಾಲ‌ ಸಂಸದರು ಬಿಜೆಪಿ ಮುಖಂಡರು ಶ್ರಮದಾನ ಮಾಡಿದರು. ಪ್ರಧಾನಿ ಮೋದಿಯವರೇ ಸ್ವಚ್ಛತಾ ಅಭಿಯಾನಕ್ಕೆ ಪ್ರೇರಣೆಯ ಯಾಗಿದ್ದ ಅವರ ಒಂದು ಕರೆಗೆ ಸಾವಿರಾರು ದೇವಾಲಯಗಳು ಇಂದು ಸ್ಚಚ್ಛಗೊಂಡಿವೆ. ಆಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಗೊಳ್ಳುತ್ತಿದ್ದು ನಿಜಕ್ಕು ನಾಡಿನಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದರು.

ಹವಾಲ ಹಣ ಆರೋಪ ಸುಳ್ಳು

ಅಡಕೆಗೆ ಸಂಬಂಧಿಸಿದಂತೆ ಒಂದೂವರೆ ಕೋಟಿ ರೂಪಾಯಿ ಕಳ್ಳತನ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಈಗ ಕೇಳಿ ಬರುತ್ತಿರುವ ಆಪಾದನೆ ಸುಳ್ಳು. ಲೋಕಸಭೆ ಚುನಾವಣೆ ಬರುತ್ತಿರುವುದರಿಂದ ನನ್ನ ಮೇಲೆ ಆರೋಪ ಮಾಡಲಾಗುತ್ತಿದೆ. ಇದೆಲ್ಲಾ ಎಲೆಕ್ಷನ್ ಸ್ಟಂಟ್. ಡ್ರೈವರ್ ಯಾರು ಎಂಬುದೇ ಗೊತ್ತಿಲ್ಲ, ಮುಖವನ್ನೂ ಸಹ ನೋಡಿಲ್ಲ. ನಾನು ಮತ್ತೆ ಬಿಜೆಪಿಯಿಂದ ಸ್ಪರ್ಧಿಸಿ ಲೋಕಸಭೆ ಸದಸ್ಯನಾಗುತ್ತೇನೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂಬ ದೃಷ್ಟಿಯಿಂದ ನನ್ನನ್ನು ಸೋಲಿಸಲೇಬೇಕು ಎಂಬ ರಾಜಕೀಯ ದ್ವೇಷದಿಂದ ನನ್ನೊಬ್ಬನ ಮೇಲೆ ಆರೋಪ ಮಾಡಲಾಗುತ್ತಿದೆ ಅಷ್ಟೇ ಎಂದರು.

Share.
Leave A Reply

Exit mobile version