Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಕ್ರೈಂ ಸುದ್ದಿ»ಇಬ್ಬರು ಮಕ್ಕಳಿಗೆ ವಿಷ ನೀಡಿ, ನೇಣುಹಾಕಿಕೊಂಡ ಸಾಫ್ಟವೇರ್ ದಂಪತಿ..ಅಷ್ಟಕ್ಕೂ ಅಸಲಿ ಕಾರಣವೇನು?
ಕ್ರೈಂ ಸುದ್ದಿ

ಇಬ್ಬರು ಮಕ್ಕಳಿಗೆ ವಿಷ ನೀಡಿ, ನೇಣುಹಾಕಿಕೊಂಡ ಸಾಫ್ಟವೇರ್ ದಂಪತಿ..ಅಷ್ಟಕ್ಕೂ ಅಸಲಿ ಕಾರಣವೇನು?

ಬೆಂಗಳೂರಿನ ಆರ್‌ಎಂವಿ ಎರಡನೇ ಹಂತದಲ್ಲಿರುವ ಮನೆಯೊಂದರಲ್ಲಿ ಸಾಫ್ಟವೇರ್ ಉದ್ಯೋಗಿಗಳಾದ ಪೋಷಕರು ಇಬ್ಬರು ಮಕ್ಕಳನ್ನು ಕೊಂದ ಬಳಿಕ ಅವರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
davangerevijaya.comBy davangerevijaya.com7 January 2025Updated:7 January 2025No Comments2 Mins Read
Facebook WhatsApp Twitter
Share
WhatsApp Facebook Twitter Telegram

ಬೆಂಗಳೂರು: ಏನು ಅರಿಯದ ಆ ಮುದ್ದು ಮಕ್ಕಳು ತನ್ನ ಹೆತ್ತವರಿಂದಲೇ ಕೊಲೆಯಾಗಿದ್ದಾರೆ ಎನ್ನುವುದನ್ನ ನಂಬಲಸಾಧ್ಯವಾದರು ನಂಬಲೇಬೇಕು..ಮಕ್ಕಳ ಬದುಕು ರೂಪಿಸಬೇಕಾದ ಪೋಷಕರೇ ಮಕ್ಕಳ ಜೀವನವನ್ನೇ ಮುಗಿಸಿಬಿಟ್ಟಿದ್ದಾರೆ.

ಹೌದು..ಬೆಂಗಳೂರಿನ ಆರ್‌ಎಂವಿ ಎರಡನೇ ಹಂತದಲ್ಲಿರುವ ಮನೆಯೊಂದರಲ್ಲಿ ಸಾಫ್ಟವೇರ್ ಉದ್ಯೋಗಿಗಳಾದ ಪೋಷಕರು ಇಬ್ಬರು ಮಕ್ಕಳನ್ನು ಕೊಂದ ಬಳಿಕ ಅವರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಅನೂಪ್ (38), ಅವರ ಪತ್ನಿ ರಾಖಿ (35), ಮತ್ತು ಐದು ಹಾಗೂ ಎರಡು ವರ್ಷ ವಯಸ್ಸಿನ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ.

ಮಕ್ಕಳಿಬ್ಬರಿಗೂ ವಿಷ ನೀಡಿ ಕೊಂದ ಬಳಿಕ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಸದಾಶಿವ ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಅಲಹಾಬಾದ್‌ನ ಅನೂಪ್, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕೆಲ ವರ್ಷಗಳಿಂದ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅನೂಪ್ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಕನ್ಸಲ್ಟೆಂಟ್ ಆಗಿದ್ದರು. ಆರ್ಥಿಕ ನಷ್ಟದಿಂದ ಬೇಸತ್ತು ದಂಪತಿ ಆತ್ಮಹತ್ಯೆಗೆ ನಿರ್ಧರಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತ ಪಡಿಸಿದ್ದಾರೆ.‘

ಬೆಳಿಗ್ಗೆ ಮನೆಗೆಲಸದಾಕೆ ಬಂದಾಗ ಘಟನೆ ಬಗ್ಗೆ ಗೊತ್ತಾಗಿದೆ. ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಅವರು ನಗರಕ್ಕೆ ಬಂದ ಬಳಿಕ ನಿಖರ ಕಾರಣ ಗೊತ್ತಾಗಲಿದೆ. ಘಟನಾ ಸ್ಥಳದಲ್ಲಿ ಮರಣಪತ್ರ ಪತ್ತೆಯಾಗಿಲ್ಲ’ ಎಂದು ಕೇಂದ್ರ ವಿಭಾಗದ ಡಿಸಿಪಿ ಎಚ್.ಟಿ. ಶೇಖರ್ ಮಾಹಿತಿ ನೀಡಿದ್ದಾರೆ.

ಅನೂಪ್ ಅವರ ಮನೆಯಲ್ಲಿ ಮೂರು ಜನ ಕೆಲಸ ಮಾಡುತ್ತಿದ್ದರು. ಮಗಳು ಅನುಪ್ರಿಯಾಗೆ ಆರೋಗ್ಯ ಸಮಸ್ಯೆ ಇತ್ತು. ಈ ವಿಚಾರಕ್ಕೆ ದಂಪತಿ ಬಹಳ ಬೇಸರದಲ್ಲಿದ್ದು, ಖಿನ್ನತೆಗೆ ಒಳಗಾಗಿದ್ದರು. ಬೆಳಗ್ಗೆ 11 ಗಂಟೆಗೆ ಪುದುಚ್ಚೇರಿಗೆ ಹೋಗುತ್ತಿದ್ದು, ಬೇಗ ಮನೆಗೆ ಬರುವಂತೆ ಕೆಲಸದವರಿಗೆ ಹೇಳಿದ್ದರು.

ಹೀಗಾಗಿ ಕೆಲಸದವರು ಮನೆಗೆ ಬಂದಿದ್ದಾರೆ. ಭಾನುವಾರ ಸಹ ಪ್ಯಾಕಿಂಗ್ ಮಾಡಲು ಕೆಲಸದವರನ್ನು ಕರೆಸಿಕೊಂಡಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಮೂವರು ಕೆಲಸಗಾರರ ಪೈಕಿ ಇಬ್ಬರು ಅಡುಗೆಗೆ ನಿಯೋಜನೆ ಗೊಂಡಿದ್ದರೆ, ಒಬ್ಬರು ಮಗು ನೋಡಿ ಕೊಳ್ಳುತ್ತಿದ್ದರು. ಮೂವರಿಗೂ ತಿಂಗಳಿಗೆ ತಲಾ 15 ಸಾವಿರ ಸಂಬಳ ನೀಡುತ್ತಿದ್ದರು.

‘ಮೊದಲ ಮಗುವಿಗೆ ಮಾನಸಿಕ ತೊಂದರೆ ಇದ್ದ ಕಾರಣ ದಂಪತಿ ಬಹಳ ಕುಗ್ಗಿ ಹೋಗಿದ್ದರು. ಭಾನುವಾರ ರಾತ್ರಿ 10 ಗಂಟೆಯವರೆಗೂ ದಂಪತಿ ಎಂದಿನಂತೆಯೇ ಇದ್ದರು’ ಎಂದು ಕೆಲಸದವರು ತಿಳಿಸಿದ್ದಾರೆ.ಮೃತದೇಹಗಳನ್ನು ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಹಸ್ತಾಂತರಿಸಲಾಗು ತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Feature Software couple poisoned two children and hanged themselves topnews
Share. WhatsApp Facebook Twitter Telegram
davangerevijaya.com
  • Website

Related Posts

ಕಾಲ್ತುಳಿತಕ್ಕೆ 11 ಜನ ಸಾವು, ಕಮಿಷನರ್ ದಯಾನಂದ ಅಮಾನತು : ಸಿಎಂ ಸಿದ್ದರಾಮಯ್ಯ ನಡೆಗೆ ನಿವೃತ್ತ ಪೊಲೀಸ್ ಕೃಷ್ಣಪ್ಪ ಆಕ್ರೋಶ

7 June 2025

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮಂಜುನಾಥ್ ಗೌಡ ಪತ್ನಿಗೆ ಬಿಗ್ ಶಾಕ್ ನೀಡಿದ ಇಡಿ !

6 June 2025

ಶಿವಮೊಗ್ಗ : ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆಯಿತು ಈ ಘೋರ ದುರಂತ

4 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,590 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
Blog

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

By davangerevijaya.com29 June 20250

ನಂದೀಶ್ , ಭದ್ರಾವತಿ ಉಕ್ಕಿನ ನಗರಿ ಭದ್ರಾವತಿಯಲ್ಲಿ ಒಂದೊಂದೇ ಸಂತಸದ ಕ್ಷಣಗಳು ಕಾಣುತ್ತಿವೆ..ಅತ್ತ ವಿಎಸ್ಐಎಲ್ ಕಾರ್ಖಾನೆ ಓಪನ್ ಆಗಲಿದೆ ಎಂಬ…

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.