
ಭದ್ರಾವತಿ: ತಾಲೂಕು ಕಚೇರಿ ಸಭಾಂಗಣ ದಲ್ಲಿ ತಾಲೂಕು ಆಡಳಿತ, ತಾ.ಪಂ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಶ್ರೀ ಮಾಚಿದೇವ ಮಡಿವಾಳ ಸಂಘದ ಸಹಯೋಗದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಬಾಲಾಜಿರಾಜ್ ಶ್ರೀ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರೇಡ್ -2 ತಹಸೀಲ್ದಾರ್ ರಂಗಮ್ಮ, ಉಪ ತಹಸೀಲ್ದಾರ್ ಮಂಜಾನಾಯ್ಕ್, ಕಂದಾಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

