
ಪಾವಗಡ: ತಾಲ್ಲೂಕಿನ ಗುಮ್ಮಘಟ್ಟ ಗ್ರಾಮದ ವ್ಯಾಪ್ತಿಯಲ್ಲಿ ಬರುವ ವ್ಯವಸಾಯ ಸೇವಾ ಸಹಕಾರಿ ಸಂಘ ದ ಅಧ್ಯಕ್ಷರಾಗಿ ಗುಮ್ಮಘಟ್ಟ ಗ್ರಾಮದ ಪ್ರಮುಖ ಕಾಂಗ್ರೆಸ್ ಮುಖಂಡರಾದ ಕೆ. ಶ್ರೀನಿವಾಸುಲು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಆಡಳಿತ ಮಂಡಳಿಯ ಚುನಾವಣೆ ಇತ್ತೀಚೆಗೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸುಲು ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರು.ಹೀಗಾಗಿ, ಅವರನ್ನು ಅವಿರೋಧವಾಗಿ ಅಧ್ಯಕ್ಷರೆಂದು ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
ಕೆ. ಶ್ರೀನಿವಾಸುಲು ಅವರು ಗ್ರಾಮದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದು, ರೈತರ ಹಾಗೂ ಗ್ರಾಮದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ಅವಿರೋಧ ಆಯ್ಕೆಯು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಕೆ. ಶ್ರೀನಿವಾಸುಲು ಅವರು, ತಮ್ಮ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿರುವ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಮುಂಬರುವ ದಿನಗಳಲ್ಲಿ ಸಂಘದ ಸದಸ್ಯರ ಹಿತ ಕಾಪಾಡುವುದು ಮತ್ತು ರೈತರ ಅಭಿವೃದ್ಧಿಗೆ ಶ್ರಮಿಸುವುದಾಗಿ ಅವರು ಭರವಸೆ ನೀಡಿದರು.


ಅವರ ಆಯ್ಕೆಗೆ ಗ್ರಾಮದ ಮುಖಂಡರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಸಂಘದ ಸದಸ್ಯರು ಶುಭ ಹಾರೈಸಿದ್ದಾರೆ.ಈ ಸಂದರ್ಭದಲ್ಲಿ ಮುಖಂಡರುಗಳಾದ ಸಂಜೀವರಾಯಪ್ಪ ,ಲಕ್ಷ್ಮಿ ನಾರಾಯಣಪ್ಪ, ಆದಿ ನಾರಾಯಣಪ್ಪ, ಡಿ ಎನ್ ವಿಶ್ವೇಶ್ವರಯ್ಯ, ಈಶ್ವರ್, ಸೋಮಶೇಖರ್, ಬಸವರಾಜು, ಕೃಷ್ಣರೆಡ್ಡಿ, ಹನುಮಂತರಾಯಪ್ಪ, ನಾಗೇಗೌಡ, ಕೃಷ್ಣವೇಣಿ ಆದಿ ನಾರಾಯಣಪ್ಪ, ಹನುಮಂತಪ್ಪ ಸೇರಿ ಇನ್ನೂ ಅನೇಕ ಕಾಂಗ್ರೆಸ್ ಮುಖಂಡರು ಇದ್ದರು..