ದಾವಣಗೆರೆ : ದಾವಣಗೆರೆ ಗಣಪನ ಗಲಾಟೆ ಸಂಬಂಧ ಖಾಕಿ ಪಡೆ ಸುಮಾರು 18 ಜನರನ್ನು ಬಂಧಿಸಿದ್ದು, ಪರಿಸ್ಥಿತಿ ಶಾಂತವಾಗಿದೆ.

ಬೇತೂರು ರಸ್ತೆಯಲ್ಲಿ ಗಣಪತಿ ವಿಸರ್ಜನೆ ವೇಳೆ ಎರಡು ಕೋಮಿನ ನಡುವೆ ಘೋಷಣೆ ವಿಚಾರಕ್ಕೆ ಸಬಂಧಪಟ್ಟಂತೆ ಕಲ್ಲು ತೂರಾಟ ನಡೆದಿತ್ತು. ಬಳಿಕ ಹಗಲು, ರಾತ್ರಿ ಕಾರ್ಯಾಚರಣೆ ನಡೆಸಿದ ಖಾಕಿ ಪಡೆ
ಎರಡು ಕೋಮಿನ ಒಟ್ಟು 18 ಜನ ಆರೋಪಿಗಳ ನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದೆ.
ಬಿಗಿ ಪೊಲೀಸ್ ಭದ್ರತೆಯಲ್ಲಿ ಅರೋಪಿಗಳನ್ನು ನ್ಯಾಯಾಧೀಶರ ಮನೆಗೆ ಪೊಲೀಸರು ಕರೆತಂದಿದ್ದಾರೆ.
ಎಂಸಿಸಿ ‘ಎ’ ಬ್ಲಾಕ್ ನಲ್ಲಿರುವ ನ್ಯಾಯಾಧೀಶರಾದ ಪ್ರಶಾಂತ್ ರ ನಿವಾಸಕ್ಕೆ ಕರೆ ತಂದ ಪೊಲೀಸರು ವಿಚಾರಣೆ ನಡೆಸಿದರು. ಬಳಿಕ 10 ಜನರಿಗೆ 14 ದಿನಗಳ ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ. ಅಲ್ಲದೇ ಇದರಲ್ಲಿ ಎಂಟು ಜನ ಗಣೇಶ ಸಮಿತಿಯವರನ್ನು ಅರೆಸ್ಟ್ ಮಾಡಲಾಗಿದೆ.

ಪೊಲೀಸರಿಗೆ ಚಿಕಿತ್ಸೆ

ಮೆರವಣಿಗೆ ವೇಳೆ ಕಲ್ಲು ತೂರಾಟದಲ್ಲಿ ಗಾಯಗೊಂಡಿರುವ ಪೊಲೀಸರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾಹಿತಿ ನೀಡಿ, ”ಗಣೇಶನ ಮೆರವಣಿಗೆಯು ನಗರದ ಅರಳಿಮರ ಸರ್ಕಲ್ ದಾಟಿ ಚಾಮರಾಜಪೇಟೆ ಸರ್ಕಲ್​ ಬಳಿ ಹೋಗುವಾಗ ಕಲ್ಲು ತೂರಾಟ ನಡೆದಿದೆ. ಸದ್ಯ ಪರಿಸ್ಥಿತಿಯನ್ನು ನಿಯಂತ್ರಿಸಲಾಗಿದೆ. ಗಣಪತಿ ನಿಮಜ್ಜನಕ್ಕೆ ಮೆರವಣಿಗೆಯು ಮುಂದೆ ತೆರಳಿದೆ”
ನಿನ್ನೆ ನಡೆದ ಪ್ರಚೋದನಾತ್ಮಕ ಭಾಷಣವೇ ಘಟನೆಗೆ ಕಾರಣವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದವರ ಮೇಲೆಯೂ ಕ್ರಮ ಜರುಗಿಸಲಾಗಿದೆ. ಪ್ರಚೋದನಾತ್ಮಕ ಭಾಷಣಗಳ ಕುರಿತಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಅಂಗಡಿ‌ ಮುಗ್ಗಟ್ಟು ಬಂದ್

ಬಿಗುವಿನ ವಾತಾವರಣ ನಿರ್ಮಾಣ ಆಗಿದ್ದರಿಂದ ಬೇತೂರ್ ವೃತ್ತ, ಅರಳಿಮರ ವೃತ್ತ, ಎನ್ಆರ್ ರಸ್ತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಪೋಲಿಸರು ಅಂಗಡಿ‌ ಮುಗ್ಗಟ್ಟುಗಳನ್ನು ಮುಚ್ಚಿಸಿದ್ದಾರೆ‌. ಎಸ್​​ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಬಂದೋಬಸ್ತ್ ಕಲ್ಪಿಸಲಾಗಿದೆ.

Share.
Leave A Reply

Exit mobile version