ದಾವಣಗೆರೆ: ಗಣಪತಿ ವಿಸರ್ಜನೆ ವೇಳೆ ಎರಡು ಕೋಮುಗಳ ನಡುವೆ ಗಲಾಟೆ ನಡೆದಿದ್ದು, ಕ್ಷಣಾರ್ಧದಲ್ಲಿ ಎಸ್ಪಿ ಉಮಪ್ರಶಾಂತ್ ಪರಿಸ್ಥಿತಿ ಶಾಂತಗೊಳಿಸಿದ್ದಾರೆ. ಆದರೆ ಈ ಘಟನೆಯಲ್ಲಿ ಇಬ್ಬರು ಕಾನ್ಸ್ಟೇಬಲ್ಗೆ ಗಾಯಗಳಾಗಿವೆ.
ನಗರದ ವೆಂಕಟೇಶ್ವರ ವೃತ್ತದಲ್ಲಿ ಈ ಘಟನೆ ನಡೆದಿದ್ದು, ಬೇತೂರು ರಸ್ತೆ ಕ್ರಾಸ್ ಬಳಿಯ ಗಣೇಶ ವಿಸರ್ಜನೆ ಮೆರವಣಿಗೆ ಹೊರಟ್ಟಿತ್ತು, ಈ ವೇಳೆ ವೆಂಕಟೇಶ್ವರ ವೃತ್ತಕ್ಕೆ ಮೆರವಣಿಗೆ ಬಂದಾಗ ಅನ್ಯ ಕೋಮಿನ ಜನರು ಘೋಷಣೆ ಕೂಗಿದ್ದಾರೆ. ಇದಕ್ಕೆ ಪ್ರತಿಯಾಗಿ ಮತ್ತೊಂದು ಕೋಮಿನ ಜನರು ಘೋಷಣೆ ಕೂಗಿದ್ದಾರೆ ಎಂದು ಹೇಳಲಾಗಿದೆ. ಈ ವೇಳೆ ವಾಗ್ವಾದ ಉಂಟಾದ ಹಿನ್ನಲೆ ಅನ್ಯ ಕೋಮಿನವರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದ್ದು, ಇಬ್ಬರು ಪೊಲೀಸ್ ಪೇದೆಗಳು ಸೇರಿದಂತೆ ನಾಲ್ಕೈದು ಮಂದಿ ಗಾಯಗೊಂಡಿದ್ದಾರೆ, ಪೊಲೀಸ್ ಪೇದೆಗಳಾದ ರಘು, ಅನ್ನಪೂರ್ಣಗೆ ತಲೆಗೆ ಪೆಟ್ಟಾಗಿದ್ದು, ಗಾಯಗೊಂಡು ಆಸ್ಪತ್ರೆಗೆ ತೆರಳಿದ್ದಾರೆ.
ಇನ್ನೂ ಮೆರವಣಿಗೆ ಉದ್ದಕ್ಕೂ ಕ್ರಾಸ್ ಬಳಿ ನಿಂತು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದ್ದು, ಈ ಹಿನ್ನಲೆ ಉದ್ವಿಗ್ನ ವಾತಾವರಣ ನಿರ್ಮಾಣ ಆಗಿದೆ. ಸ್ವತಃ ಎಸ್ಪಿ ಉಮಾ ಪ್ರಶಾಂತ್ ಲಾಠಿ ಹಿಡಿದು ಜನರನ್ನೂ ಚದುರಿಸಿಲು ಮುಂದಾಗಿದ್ದರು. ಪರಿಸ್ಥಿತಿ ಈಗ ಶಾಂತವಾಗಿದೆ. ಕಲ್ಲು ತೂರಿದ ಕಿಡಿಗೇಡಿಗಳನ್ನೂ ಬಂಧಿಸಿ ಎಂದು ಹಿಂದೂ ಪರ ಕಾರ್ಯಕರ್ತರು ಪಟ್ಟು ಹಿಡಿದು ಕೂತಿದ್ದಾರೆ..