ಶಿವಮೊಗ್ಗ : ಮೈಸೂರಿನಲ್ಲಿ ಗುರುವಾರ ಬೆಳಗ್ಗೆ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಹೆಸರಾಂತ ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ ಪ್ರಾದೇಶಿಕ ಆಯುಕ್ತರ ಕಛೇರಿಯಲ್ಲಿ ಪ್ರಾದೇಶೀಕ ಆಯುಕ್ತರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಶಿವಮೊಗ್ಗ ಜನಪ್ರಿಯ ಸಂಸದರಾದ ಬಿ.ವೈ.ರಾಘವೇಂದ್ರ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹಾಜರಿದ್ದರು. ಇದಕ್ಕೂ ಮುನ್ನ ತಾಯಿ ರೇಣುಕಮ್ಮ , ಪತ್ನಿ ಸಮಿತಾ ಸರ್ಜಿ ಅವರೊಂದಿಗೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ್ರು, ಬಿಜೆಪಿ ಹಿರಿಯ ಮುಖಂಡರಾದ ಎನ್.ಜೆ.ರಾಜಶೇಖರ್ ( ಸುಭಾಷ್) ಸೇರಿದಂತೆ ಕುಟುಂಬದ ಸದಸ್ಯರು, ಬಂಧುಗಳು, ಹಿತೈಷಿಗಳು ಭಾಗಿಯಾಗಿದ್ದರು, ಅಲ್ಲದೇ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ದಾವಣಗೆರೆ (ಚನ್ನಗಿರಿ, ನ್ಯಾಮತಿ, ಹೊನ್ನಾಳಿ) ಜಿಲ್ಲೆಗಳ ನೂರಾರು ಕಾರ್ಯಕರ್ತರು ಭಾಗವಹಿಸಿದ್ದ