ಶಿವಮೊಗ್ಗ;
ಸುಬ್ರಹ್ಮಣ್ಯ ಷಷ್ಠಿ. ಹಾಗೂ ಅಗಣಿತ ದೀಪೋತ್ಸವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸಿಗೆ ಶಾಂತಿ ನೆಮ್ಮದಿಯ ಜೊತೆಗೆ ಸಕಲ ಇಷ್ಟಾರ್ಥಗಳು ನೆರವೇರುತ್ತವೆ ಎಂದು ಗೋಪಾಲಗೌಡ ಬಡಾವಣೆಯ ನಾಗಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾದ ಸಂದೇಶ್ ಉಪಾಧ್ಯ ನುಡಿದರು.
ಅವರು ನಾಗಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥಕವಾಗಿ. ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ದೀಪೋತ್ಸವ ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮದಲ್ಲಿ ಮಾತನಾಡಿದರು ಇಂತಹ ದೇವತಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಧಾರ್ಮಿಕ ನಂಬಿಕೆ ಹೆಚ್ಚಾಗುವುದರ ಜೊತೆಗೆ ದೇವರ ಕೃಪೆಗೆ ನಾವು ಪಾತ್ರರಾಗುತ್ತೇವೆ ಮತ್ತು ನಮ್ಮ ಹಿಂದೂ ಧರ್ಮದ ಆಚರಣೆಗಳಲ್ಲಿ ಹಬ್ಬ ಹರಿ ದಿನಗಳಿಗೆ ಹಾಗೂ ಧಾರ್ಮಿಕ ಆಚರಣೆಗಳಿಗೆ ಅತಿ ಹೆಚ್ಚು ಒತ್ತನ್ನು ನೀಡಲಾಗಿದೆ ನಾಗಸುಬ್ರಹ್ಮಣ್ಯ ದೇವಸ್ಥಾನದ ಸುಬ್ರಹ್ಮಣ್ಯ ಷಷ್ಠಿಯಲ್ಲಿ ಪಾಲ್ಗೊಳ್ಳುವುದರಿಂದ ನಾಗದೋಷ ಪರಿಹಾರವಾಗುತ್ತದೆ ಇದಕ್ಕೆ ಭಕ್ತಿ ಶೃದ್ದೇ ಧಾರ್ಮಿಕ ನಂಬಿಕೆ ಬಹಳ ಮುಖ್ಯ ಎಂದು ನುಡಿದರು.
ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ ವಿಜಯಕುಮಾರ್ ಅವರು ಪಾಲ್ಗೊಂಡು ಮಾತನಾಡುತ್ತಾ ಶಿವಮೊಗ್ಗ ನಗರದಲ್ಲಿ ಅತ್ಯಂತ ವಿಶೇಷವಾದ ನಾಗಸುಬ್ರಹ್ಮಣ್ಯ ದೇವಸ್ಥಾನ ಎಲ್ಲಾ ಕಾರ್ಯಕ್ರಮಗಳನ್ನು ತುಂಬಾ ವ್ಯವಸ್ಥಿತವಾಗಿ ಅಚ್ಚುಕಟ್ಟಾಗಿ ಶ್ರದ್ಧೆಯಿಂದ ನೆರವೇರಿಸಿಕೊಳ್ಳುತ್ತಾ ಬಂದಿದೆ ದೇವಸ್ಥಾನಕ್ಕೆ ಬರುವುದರಿಂದ ನಮಗೆ ಮನಶಾಂತಿ ದೊರಕುತ್ತದೆ ಇದೇ ಸಂದರ್ಭದಲ್ಲಿ ಭಕ್ತರಿಂದ ಸಾವಿರಾರು ದೀಪಗಳ ಅಗಣಿತ ದೀಪೋತ್ಸವ ಕಾರ್ಯಕ್ರಮ ನೆರವೇರಿತು ಭರತನಾಟ್ಯ ಹಾಗೂ ಶಾಸ್ತ್ರೀಯ ಸಂಗೀತ ಕಲಾವಿದರಿಂದ ಕಲಾ ಸೇವೆ ನೆರವೇರಿತು.
ಕಾರ್ಯಕ್ರಮದಲ್ಲಿ ಹೆಚ್ಚು ಭಕ್ತರ ದಂಡು ಆಗಮಿಸಿರುವುದು ತುಂಬಾ ವಿಶೇಷವಾಗಿತ್ತು ಎಲ್ಲಾ ಭಕ್ತರು ಸರತಿ ಸಾಲಿನಲ್ಲಿ ಬಂದು ದೇವರ ಕೃಪೆಗೆ ಪಾತ್ರರಾದರು