ಸಾಗರ: ಮಳಲಿಮಠದ ಶ್ರೀ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳವರು ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರು ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಹೊಂಬುಜ ಮಠದ ಶ್ರೀ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು ಹೊಸನಗರ ತಾಲೂಕಿನ ಹುಂಚ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಮೂಲೆಗದ್ದೆ ಮಠದ ಅಭಿನವ ಶ್ರೀ ಚೆನ್ನಬಸವ ಸ್ವಾಮೀಜಿ ಹೊಸನಗರ ತಾಲೂಕಿನ ಬ್ರಹ್ಮೇಶ್ವರ ಸರ್ಕಾರಿ ಶಾಲೆ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಕೋಣಂದೂರಿನ ಶ್ರೀಪತಿ ಪಂಡಿತರಾದ್ಯಶ್ರೀಗಳು ಕೋಣಂದೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.