ಶಿವಮೊಗ್ಗ: ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಆಶಯ ಹಾಗು ಸರ್ಕಾರದ ಆಶಯ ಎರಡೂ ಒಂದೇ ಆಗಿರುವುದರಿಂದ ಇಬ್ಬರ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಸ್.ಪಿ. ಶೇಷಾದ್ರಿ ಹೇಳಿದ್ದಾರೆ.

ಇಬ್ಬರ ಪರವಾಗಿಯೂ ಕ್ಷೇತ್ರದಲ್ಲಿ ಪ್ರಚಾರ ಬಿರುಸುಗೊಂಡಿದೆ. ಮತದಾರರ ಮನೆಗಳಿಗೆ ಹೋಗಿ ಪ್ರಚಾರ ಮಾಡಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡುತ್ತಿದ್ದೇವೆ. ಹಾಗೆಯೇ ಕ್ಷೇತ್ರದಲ್ಲಿ ಪಕ್ಷದ ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಉಸ್ತುವಾರಿ ಸಚಿವರಾಗಿರುವ ಮಧು ಬಂಗಾರಪ್ಪ ಅವರು ಶಿಕ್ಷಣ ಸಚಿವರಾಗಿರುವುದರಿಂದ ಈ ಇಬ್ಬರ ಗೆಲುವಿಗೆ ಸಹಕಾರವಾಗುತ್ತದೆ ಎಂದಿದ್ದಾರೆ.

ಆಯನೂರು ಮಂಜುನಾಥ್ ಅವರು ಈಗಾಗಲೇ ಒಂದು ಸುತ್ತು ಕ್ಷೇತ್ರದ ತುಂಬಾ ಪ್ರಚಾರ ಮಾಡಿ ಬಂದಿದ್ದಾರೆ. ಮತದಾರರ ಭೇಟಿಯಾಗುತ್ತಲೇ ಇದ್ದಾರೆ. ಅವರ ಬಗ್ಗೆ ಮತದಾರರಿಗೆ ಅತ್ಯಂತ ವಿಶ್ವಾಸವಿದೆ. ನಾಲ್ಕೂ ಮನೆಗಳಲ್ಲಿ ಕೆಲಸ ಮಾಡಿದ ಅನುಭವ ಅವರಿಗಿದೆ. ಪದವೀಧರರ ಸಮಸ್ಯೆಗಳ ಬಗ್ಗೆ ಅರಿವಿದೆ. ಹಾಗಾಗಿ ಅವರು ಗೆದ್ದೇ ಗೆಲ್ಲುತ್ತಾರೆ ಮತ್ತು ಶಿಕ್ಷಕ ಕ್ಷೇತ್ರದ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕೂಡ ಶಿಕ್ಷಕರ ಸಮಸ್ಯೆಗಳ ಬಗ್ಗೆ ತಿಳಿದುಕೊಂಡಿದ್ದಾರೆ. ಅವರೂ ಕೂಡ ಪ್ರಚಾರದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಪದವೀಧರರ ಮತ್ತು ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿದೆ. ಈಗಾಗಲೇ ಪದವೀಧರರಿಗೆ ಯುವನಿಧಿ ಯೋಜನೆ ಜಾರಿಗೊಳಿಸಲಾಗಿದೆ ಹಾಗಾಗಿ ಇಬ್ಬರನ್ನು ಅಧಿಕ ಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.

ಸಹಕಾರಿ ಕ್ಷೇತ್ರದಲ್ಲಿ ಬಹಳಷ್ಟು ಮತದಾರರಿದ್ದಾರೆ ನಗರದ ಎಲ್ಲಾ ಕೋ ಆಪರೇಟಿವ್ ಸೊಸೈಟಿ ಗಳಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿನಿಧಿಗಳು ಇದ್ದಾರೆ ಅದು ಕೂಡ ಅವರ ಗೆಲುವಿಗೆ ಸಹಕಾರವಾಗುತ್ತದೆ.

ಒಟ್ಟಾರೆ ಇಬ್ಬರೂ ಅಭ್ಯರ್ಥಿಗಳು ಗೆದ್ದು ಹೊಸ ಇತಿಹಾಸ ಬರೆಯಲಿದ್ದಾರೆ ಎಂದು ಶೇಶಾದ್ರಿ ತಿಳಿಸಿದ್ದಾರೆ.

Share.
Leave A Reply

Exit mobile version