ದಾವಣಗೆರೆ: ನಗರದ ಹಳೇ ಕುಂದುವಾಡ ನಿವಾಸಿ, ಜಿಲ್ಲಾ ಕುರುಬ ಸಮಾಜ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ಮಾಜಿ ಕಾರ್ಪೋರೇಟರ್, ಆಶ್ರಯ ಕಮಿಟಿ ಮಾಜಿ ಸದಸ್ಯರಾದ ಹಂಚಿನ ಮನೆ ತಿಪ್ಪಣ್ಣ(76) ಗುರುವಾರ ಬೆಳಿಗ್ಗೆ ನಿಧನರಾದರು..
ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ, ಸಹೋದರರು ಸೇರಿದಂತೆ ಅಪಾರ ಬಂಧು ಬಳಗ ಅಗಲಿರುವ ಮೃತರ ಅಂತ್ಯಕ್ರಿಯೆ ಶುಕ್ರವಾರ ಬೆಳಿಗ್ಗೆ 10ಗಂಟೆಗೆ ಹಳೇ ಕುಂದುವಾಡ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ..
ಸಂತಾಪ
ದಾವಣಗೆರೆ ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಹಳೇ ಕುಂದುವಾಡದ ಹೆಚ್ ತಿಪ್ಪಣ್ಣ ಅವರ ನಿಧನ ಹಿನ್ನಲೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್, ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಮಹಾನಗರ ಪಾಲಿಕೆ ಹಾಲಿ, ಮಾಜಿ ಸದಸ್ಯರುಗಳು, ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ಜಿಲ್ಲಾ ಕುರುಬ ಸಮಾಜದ ಮುಖಂಡರುಗಳು, ಹಳೇ ಕುಂದುವಾಡ ಹಾಗೂ 44ನೇ ವಾರ್ಡ್ ನಾಗರೀಕರು ಸಂತಾಪ ಸೂಚಿಸಿದ್ದಾರೆ..