ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರಣ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳುವಿನಲ್ಲಿ ನಡೆದಿದೆ.
ಈ ಬಸ್ ಸಾಗರದಿಂದ ಬೆಳ್ತಂಗಡಿಗೆ ತೆರಳುತ್ತಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ
ಧಾರಾಕಾರವಾಗಿ ಸುರಿದ ಮಳೆಯ ಕಾರಣದಿಂದ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಗೊಂಡ ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರನ್ನು ಸಾಗರ, ಆನಂದಪುರ ಹಾಗೂ ಶಿವಮೊಗ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share.
Leave A Reply

Exit mobile version