Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»Blog»ಮದುವೆಯಾಗದ ಗ್ರಾಮೀಣ ಶ್ರೀಮಂತ ಯುವಕರೇ ಟಾರ್ಗೆಟ್, ನಾಲ್ಕು ಮದುವೆಯಾದ ಮಹಿಳೆ, ಆಮೇಲೆ ಆಗಿದ್ದೇನು ಗೊತ್ತಾ?
Blog

ಮದುವೆಯಾಗದ ಗ್ರಾಮೀಣ ಶ್ರೀಮಂತ ಯುವಕರೇ ಟಾರ್ಗೆಟ್, ನಾಲ್ಕು ಮದುವೆಯಾದ ಮಹಿಳೆ, ಆಮೇಲೆ ಆಗಿದ್ದೇನು ಗೊತ್ತಾ?

ನಕಲಿ ಚಿಕ್ಕಮ್ಮ, ಚಿಕ್ಕಪ್ಪ, ಆಧಾರ್ ಕಾರ್ಡ್ ನಲ್ಲಿ ನಕಲಿ ಅಡ್ರೆಸ್, ಹಣಕ್ಕಾಗಿ ಮದುವೆಯಾಗದ ಯುವಕರೇ ಟಾರ್ಗೆಟ್
davangerevijaya.comBy davangerevijaya.com13 August 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ತುಮಕೂರು : ಹೆಣ್ಣು ಸಿಗದೇ ನರಾಳುಡುತ್ತಿರುವ ಗ್ರಾಮೀಣ ಶ್ರೀಮಂತ ಯುವಕರನ್ನೇ ಟಾರ್ಗೆಟ್ ಮಾಡಿದ ಇಲ್ಲೊಬ್ಬ ಮಹಿಳೆ ನಾಲ್ಕು ಮದುವೆ ಮಾಡಿಕೊಂಡು ಹಣ, ಚಿನ್ನಾಭರಣಗಳನ್ನು ದೋಚಿ ಪರಾರಿ ಆಗಿದ್ದು, ಗುಬ್ಬಿ ಪೊಲೀಸರು ನಕಲಿ ಮಾದುವೆ ಮಾಡಿಸುತ್ತಿದ್ದ ಗ್ಯಾಂಗ್‌ನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಅತ್ತಿಗಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗುಬ್ಬಿ ಪೊಲೀಸರು ಲಕ್ಷ್ಮೀ ಬಾಳ ಸಾಬ್ ಜನಕರ್ ಅಲಿಯಾಸ್ ಕೋಮಲ, ಸಿದ್ದಪ್ಪ , ಲಕ್ಷ್ಮೀಬಾಯಿ, ಬ್ರೋಕರ್ ಲಕ್ಷ್ಮೀಯನ್ನು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಕೋಮಲ ಮದುಮಗಳಾದರೆ, ಚಿಕ್ಕಪ್ಪ ಚಟದ ಸಿದ್ದಪ್ಪ ಮತ್ತು ಚಿಕ್ಕಮ್ಮ ಲಕ್ಷ್ಮೀಬಾಯಿ ಮದುವೆ ಮಾಡಿಕೊಡುವ ಪಾತ್ರಧಾರಿಗಳು. ಇನ್ನು ಗಂಡು ಸಿಗದವರನ್ನು ಗುರುತಿಸಿ ಹೆಣ್ಣು ತೋರಿಸುವವಳು ಈ ಬ್ರೋಕರ್ ಲಕ್ಷ್ಮೀಯಾಗಿದ್ದು, ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಕೋಮಲ ಎಂಬಾಕೆಯ ಈ ಪ್ರಕರಣದ ಕಥಾನಾಯಕಿಯಾಗಿದ್ದು, ಮೂರುವರ್ಷದಲ್ಲಿ ನಾಲ್ಕು ಜನರನ್ನು ಮದುವೆಯಾಗಿ ವಂಚಿಸಿ, ಹಣ, ಚಿನ್ನಾಭರಣಗಳನ್ನು ದೋಚಿ ಪರಾರಿ ಆಗಿದ್ದಳು.

ಏನಿದು ಪ್ರಕರಣ

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಅತ್ತಿಗಟ್ಟೆ ಗ್ರಾಮದಲ್ಲಿ ಮದುವೆ ನಡೆದಿತ್ತು. ಪಾಲಾಕ್ಷ ಎಂಬುವರ ಮಗ ದಯಾನಂದಮೂರ್ತಿ (೩೪)ಗೆ ಮದುವೆ ಮಾಡಲು ಹರಸಾಹಸಪಟ್ಟಿದ್ದರು. ಅಲ್ಲದೇ ವಯಸ್ಸು ಮೀರುತ್ತಿದ್ದರೂ ಹೆಣ್ಣು ಸಿಗದೆ ನೊಂದಿದ್ದರು. ನೂರಾರು ಹೆಣ್ಣು ಹುಡುಕಿದ್ರೂ ಕಂಕಣ ಭಾಗ್ಯ ಕೂಡಿ ಬಂದಿರಲಿಲ್ಲ. ಹತ್ತಾರು ಮದುವೆ ಬ್ರೋಕರ್ ಮೂಲಕ ಹೆಣ್ಣು ಹುಡುಕಿಸಿದ್ದರೂ ಮದುವೆ ಸೆಟ್ ಆಗಿರಲಿಲ್ಲ. ಬಳಿಕ ಕುಷ್ಟಗಿ ಮೂಲದ ಬಸವರಾಜು ಎನ್ನುವವರ ಮೂಲಕ ಬ್ರೋಕರ್ ಲಕ್ಷ್ಮಿ ಎಂಬಾಕೆಯ ಪರಿಚಯ ಮಾಡಿಕೊಂಡು ಕರೆ ಮಾಡಿದ್ದಾರೆ. ಬಳಿಕ ಆಕೆ

ಮನೆಯ ಎಲ್ಲ ಪರಿಸ್ಥಿತಿ ತಿಳಿದುಕೊಂಡಿದ್ದಾಳೆ. ನಂತರ, ನಿಮ್ಮ ಮಗನಿಗೆ ನಾನು ಹೆಣ್ಣು ತೋರಿಸಿ ಮದುವೆ ಮಾಡಿಸುತ್ತೇವೆ ಎಂದು ಭರವಸೆ ನೀಡಿದ್ದಾಳೆ. ಇದಾದ ಕೆಲವು ದಿನಗಳಲ್ಲಿ ಹುಬ್ಬಳ್ಳಿಯಲ್ಲಿ ಒಬ್ಬ ಒಳ್ಳೆ ಹುಡುಗಿ ಇದ್ದಾಳೆ. ಆಕೆಗೆ ತಂದೆ-ತಾಯಿ ಇಲ್ಲ. ನೀವೆ ಮದುವೆ ಮಾಡಿಕೊಳ್ಳಬೇಕೆಂದು ಸುಳ್ಳು ಹೇಳಿದ್ದಾಳೆ. ಆಗ ಬ್ರೋಕರ್ ಲಕ್ಷ್ಮೀ ಈ ಕೋಮಲ ಎಂಬ ಹೆಸರಿನಲ್ಲಿ ಯುವತಿಯ ಪೋಟೋ ತೋರಿಸಿದ್ದಾಳೆ. ಇನ್ನು ಹುಡುಗನ ಮನೆ ನೋಡಲು ಅತ್ತಿಕಟ್ಟೆ ಗ್ರಾಮಕ್ಕೆ ಕೋಮಲ ಹಾಗೂ ಆಕೆಯ ಚಿಕ್ಕಮ್ಮ-ಚಿಕ್ಕಪ್ಪ ಕಳೆದ ವರ್ಷ ನವೆಂಬರ್ ೧೧ರಂದು ಬಂದಿದ್ದರು. ಈ ವೇಳೆ ಮದುವೆ ಮಾತುಕತೆಯನ್ನೂ ಮುಗಿಸಿದ್ದರು. ನಂತರ, ಹುಡುಗ ಒಪ್ಪಿಗೆ ಇದ್ದಾನೆ, ನಿಮಗೂ ಹುಡುಗಿ ಒಪ್ಪಿಗೆ ಇದ್ದರೆ ನಾಳೆಯೇ ನಿಮ್ಮೂರಿನ ದೇವಸ್ಥಾನದಲ್ಲಿ ಸಿಂಪಲ್ಲಾಗಿ ಮದುವೆ ಮಾಡಿಬಿಡೋಣ ಎಂದು ಹೇಳಿದ್ದಾರೆ.

ಮೊದಲೇ ಮಗನಿಗೆ ಹೆಣ್ಣು ಸಿಗದೆ ಹೈರಾಣಾಗಿದ್ದ ದಯಾನಂದ ಮೂರ್ತಿ ಕುಟುಂಬಕ್ಕೆ ಲಡ್ಡು ಬಂದು ಬಾಯಿಗೆ ಬಿದ್ದಂತಾಗಿತ್ತು. ಹೆಣ್ಣು ಸಿಕ್ಕ ಖುಷಿಯಲ್ಲಿ ಹಿಂದೂ ಮುಂದು ಯೋಚಿಸದೆ ದಿಢೀರ್ ಮದುವೆಗೆ ಒಪ್ಪಿಕೊಂಡು ಗ್ರಾಮದಲ್ಲಿ ಮದುವೆ ಮಾಡಿದ್ದರು. ಈ ಮದುವೆಗೆ ಸುಮಾರು ೨೦೦ಕ್ಕೂ ಹೆಚ್ಚು ಜನರು ಸಾಕ್ಷಿಯಾಗಿದ್ದರು. ಮದುಮಗಳಿಗೆ ಚಿನ್ನದ ಸರ, ತಾಳಿ, ಕಿವಿಗೆ ಓಲೆ ಸೇರಿ ಸುಮಾರು ೨೫ ಗ್ರಾಂ ತೂಕದ ಚಿನ್ನಾಭರಣವನ್ನು ಗಂಡಿನ ಮನೆಯವರು ಮಾಡಿಸಿಕೊಟ್ಟಿದ್ದರು.

ಇನ್ನು ಬ್ರೋಕರ್ ಲಕ್ಷ್ಮೀಗೆ ಬರೋಬ್ಬರಿ ೧.೫ ಲಕ್ಷ ರೂ. ಹಣ ನೀಡಿದ್ದರು.ಮದುವೆ ಮುಗಿದ ೨ ದಿನದ ನಂತರ ತವರುಮನೆಗೆ ಯುವತಿಯನ್ನು ಕರೆದುಕೊಂಡು ಹೋಗಬೇಕೆಂದು ಆಕೆಯೊಬ್ಬಳನ್ನೇ ಹಣ-ಚಿನ್ನದ ಒಡವೆ ಸಹಿತ ಮದುಮಗಳನ್ನ ಕರೆದುಕೊಂಡು ಹೋಗಿದ್ದರು. ಆದರೆ ಒಂದು ವಾರ ಕಳೆದರೂ ಕೋಮಲ ವಾಪಸ್ ಬರಲಿಲ್ಲ. ಇದರಿಂದ ಆತಂಕಗೊಂಡ ಪಾಲಾಕ್ಷ ಹುಬ್ಬಳ್ಳಿಗೆ ಹೋಗಿ ವಿಚಾರಿಸಿದಾಗ ಸತ್ಯ ಬಯಲಾಗಿದೆ.

ನಕಲಿ ಮದುವೆಗೆ ಬಂದವರು ಕೂಡ ದೋಖಾ ಗಿರಾಕಿಗಳು ಎಂಬ ಸತ್ಯ ಬಯಲಾಗಿದೆ. ಆಗ ಪುನಃ ತಮ್ಮೂರಿಗೆ ವಾಪಸ್ ಬಂದು ಗುಬ್ಬಿ ಠಾಣೆಗೆ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಗುಬ್ಬಿ ಪೊಲೀಸರು ನಿರಂತರ ತನಿಖೆ ನಡೆಸುತ್ತಿದ್ದರು. ಆದರೆ, ಇದೇ ರೀತಿ ಈ ಗ್ಯಾಂಗ್ ಪುನಃ ಮಹಾರಾಷ್ಟ್ರದಲ್ಲಿ ಮದುವೆ ಮಾಡಿಕೊಂಡು ಸೆಟೆಲ್ ಆಗಿದ್ದರು. ಆಗ ಮದುವೆ ಫೋಟೋ ಹಾಗೂ ವಿಡಿಯೋ ಆಧರಿಸಿ ವಂಚನೆ ಮಾಡಿದ ಗ್ಯಾಂಗ್‌ನ ಎಲ್ಲರನ್ನೂ ಬಂಧಿಸಿದ್ದಾರೆ. ಒಟ್ಟಾರೆ ಈ ಗ್ಯಾಂಗ್ ಕರ್ನಾಟಕ ಹಾಗೂ ಮಹಾರಾಷ್ಟ್ರ ಸೇರಿದಂತೆ ಒಟ್ಟು ನಾಲ್ಕೈದು ಮದುವೆಗಳನ್ನು ಮಾಡಿಕೊಂಡು ವಂಚನೆ ಮಾಡುವುದನ್ನೇ ವೃತ್ತಿ ಮಾಡಿಕೊಂಡಿದ್ದರು. ಇದಕ್ಕಾಗಿ ನಕಲಿ ಅಡ್ರೆಸ್‌ನಲ್ಲಿ ಆಧಾರ್ ಕಾರ್ಡ್ ಸೃಷ್ಟಿಸಿಕೊಳ್ಳುತ್ತಿದ್ದರು. ಆಧಾರ್ ಕಾರ್ಡ್ ತೋರಿಸಿ ಗಂಡಿನ ಮನೆಯವರನ್ನ ನಂಬಿಸುತ್ತಿದ್ದರು. ನಂತರ ವಂಚನೆ ಮಾಡಿ ಹೋಗುತ್ತಿದ್ದು, ಅಮಾಯಕ ಇತ್ತ ಹೆಣ್ಣಿನ ಜತೆ ಕೈಯಲ್ಲಿದ್ದ ಕಾಸು ಕಳೆದುಕೊಂಡು ಚಿಂತೆಗೀಡಾಗಿದ್ದಾನೆ.

do you know what happened? Featured four married women The target is unmarried rich rural youth Top News
Share. WhatsApp Facebook Twitter Telegram
davangerevijaya.com
  • Website

Related Posts

ಎಸ್ಸೆಸ್ಸೆಲ್ಸಿ : ಕ್ಯಾನ್ಸರ್‌ ಗೆದ್ದ ಯುವತಿ ಸರಕಾರಿ ಶಾಲೆಗೆ ಫಸ್ಟ್, ಹಾಗಾದ್ರೆ ಆ ಶಾಲೆ ಯಾವುದು?

3 May 2025

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪೊಲೀಸರಿಗೆ ಇಲ್ಲಿ ರಕ್ಷಣೆ ಇಲ್ಲ : ಮಾಜಿ ಸಚಿವ ರೇಣುಕಾಚಾರ್ಯ

2 May 2025

ಜನಗಣತಿಯ ಜೊತೆಗೆ ಜಾತಿಗಣತಿಯನ್ನು ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ : ಬಿಜೆಪಿ ನಾಯಕ

2 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.