ಶಿವಮೊಗ್ಗ: ಶಿವಮೊಗ್ಗ ಬಾಪೂಜಿನಗರದ ಮಹಿಳೆಯೊಬ್ಬರ ವಾಸದ ಮನೆಯಲ್ಲಿ ಬಂಗಾರದ ಆಭರಣಗಳು ಮತ್ತು ಹಣವನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಯುವಕರನ್ನು ಬಂಧಿಸಿ ಅವರಿಂದ ಕಳುವಾದ ವಸ್ತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಚಿಕ್ಕಲ್‌ನ ಮೊಹಮ್ಮದ್ ರಫೀಕ್ ಅಲಿಯಾಸ್ ಕಾಣ (24), ಬಾಪೂಜಿನಗರದ ಅತಾವುಲ್ಲಾ (29) ಮತ್ತು ರೂಮನ್ ಖುರೇಶಿ, (20) ಇವರನ್ನು ದಸ್ತಗಿರಿ ಮಾಡಿ ಆರೋಪಿತರಿಂದ ಪ್ರಕರಣಕ್ಕೆ ಸಂಬಂಧಿಸಿದ ಅಂದಾಜು ಮಾಲ್ಯ 15,40,500 ರೂಗಳ 237 ಗ್ರಾಂ ಬಂಗಾರದ ಒಡವೆಗಳು ಮತ್ತು ಕೃತ್ಯಕ್ಕೆ ಬಳಸಿದ ಅಂದಾಜು ಮೌಲ್ಯ 50,000 ರೂ ಮೌಲ್ಯದ ಬೈಕ್ ಸೇರಿ ಒಟ್ಟು 15,90,500 ರೂ ಗಳ ಮಾಲನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.
ಜೂನ್ 29ರಂದು ರಾತ್ರಿ ಈ ಕಳ್ಳತನ ನಡೆದಿತ್ತು. ಸುಮಾರು 234 ಗ್ರಾಂ ತೂಕದ ಚಿನ್ನ ಮತ್ತು ಹಣ ಕಳ್ಳತನ ಮಾಡಲಾಗಿತ್ತು. ಮಹಿಳೆಯು ನೀಡಿದ ದೂರಿನ ಮೇರೆಗೆ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸದರಿ ಪ್ರಕರಣದಲ್ಲಿ ಕಳುವಾದ ಮಾಲು ಮತ್ತು ಆರೋಪಿತರ ಪತ್ತೆಗಾಗಿ ಕೋಟೆ ಪಿಐ ಗುರುಬಸವರಾಜ್ ನೇತೃತ್ವದಲ್ಲಿ ಪಿ.ಎಸ್.ಐ ಕುಮಾರ್, ಸಿ.ಆರ್.ಕೊಪ್ಪದ್ ತಂಡ ರಚಿಸಲಾಗಿತ್ತು. ತನಿಖಾ ತಂಡವು ಆರೋಪಿತರನ್ನು ಪತ್ತೆ ಮಾಡಿ ಬಂಧಿಸಿದೆ.