*💫🛕ಓಂ ಶ್ರೀ ಗಾಯಿತ್ರಿ ವಿಶ್ವಕರ್ಮ ಪರಬ್ರಹ್ಮಣಿ ನಮಃ 🛕💫*
*💫,ದ್ವಾದಶರಾಶಿಗಳುದಿನಭವಿಷ್ಯ#ತಾರೀಖು#03/04/2025 ಗುರುವಾರ💫*
*01,🪔ಮೇಷರಾಶಿ🪔*
📖,ಪ್ರತಿದಿನದಂತೆ ಈ ದಿನವೂ ಎಲ್ಲಾ ಸರಿಯಾಗಿದೆ ಎಂದುಕೊಳ್ಳತ್ತಿರುವಾಗಲೇ ಕೆಲಸಗಾರರು ಇಲ್ಲವೆ ನಿಮ್ಮ ಕೈಕೆಳಗೆ ಕೆಲಸ ಮಾಡುವವರು ದಿಢೀರನೆ ರಜಾ ಹಾಕುವುದರಿಂದ ಎಲ್ಲಾ ಕೆಲಸವೂ ಒಟ್ಟಿಗೆ ಮೈಮೇಲೆ ಬಂದಂತೆ ಆಗುವುದು. ನಿಮ್ಮ ಮಾತಿನ ಮೇಲೆ ಗಮನವಿರಲಿ, ಈ ದಿನ ಆಹಾರದ ವಿಚಾರದಲ್ಲಿ ಜಾಗ್ರತೆ ಇರಲಿ,
*02,🪔ವೃಷಭರಾಶಿ🪔*
📖,ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು. ನಿಮ್ಮ ಸ್ವ ಇಚ್ಛೆಯಿಂದ ಈ ದಿನದ ನಿಮ್ಮ ಎಲ್ಲಾ ಕೆಲಸಗಳನ್ನು ಮುಗಿಸಿ,
*03,🪔ಮಿಥುನ ರಾಶಿ🪔*
📖,ನಿಮ್ಮನ್ನು ಸುಮ್ಮನೆ ಒತ್ತಡದಲ್ಲಿರಿಸುವ ಕಾರ್ಯತಂತ್ರವನ್ನು ರೂಪಿಸುವ ಗೆಳೆಯರಿಂದ ದೂರವಿರಿ. ಸಂಗಾತಿಯ ಸಕಾಲಿಕ ಎಚ್ಚರಿಕೆಯಿಂದ ಅಧಿಕ ಲಾಭ ಅಥವಾ ನೆಮ್ಮದಿ ಉಂಟಾಗುವುದು. ಹೊಸ ವ್ಯವಹಾರ ಹಾಗು ಉಳಿತಾಯದ ವಿಚಾರಗಳನ್ನು ಈ ದಿನ ಮುಂದೂಡುವದು ಉತ್ತಮ,
*04,🪔ಕಟಕ ರಾಶಿ🪔*
📖,ಬಹುಮುಖ ಪ್ರತಿಭೆಯುಳ್ಳ ವ್ಯಕ್ತಿಗಳ ದರ್ಶನಕ್ಕೆ ಕಾಯುವಿರಿ. ಆದರೆ ಗ್ರಹಸ್ಥಿತಿಯು ಕೂಡಾ ನಿರಾಸೆಯನ್ನುಂಟು ಮಾಡುವುದು ಹಾಗಾಗಿ ಪ್ರಮುಖರ ಭೇಟಿಯು ರದ್ದಾಗಲಿದೆ. ನಿಮ್ಮ ವಿರುದ್ಧ ಲಿಂಗದವರಿಂದ ನಿಮಗೆ ಅನುಕೂಲವಾಗುವುದು, ಪ್ರಯಾಣದಲ್ಲಿ ವಾಹನ ನಡೆಸುವಾಗ ಜಾಗ್ರತೆ ಇರಲಿ,
*05,🪔ಸಿಂಹ ರಾಶಿ🪔*
📖,ಕಟ್ಟಡ ಮೇಲುಸ್ತುವಾರಿಕೆ ಮಾಡುವವರು ಅಥವಾ ಕಟ್ಟಡ ವಿನ್ಯಾಸಕಾರರಿಗೆ ಉತ್ತಮ ದಿನ. ಬಹು ಪ್ರಮುಖವಾದ ಮತ್ತು ಬೃಹತ್ತಾದ ಕಾರ್ಯ ನಿರ್ವಹಿಸಲು ನಿಮಗೆ ಕರೆ ಬರುವ ಸಾಧ್ಯತೆ ಇರುತ್ತದೆ. ನಿಮ್ಮ ಕಾರ್ಯ ಕ್ಷೇತ್ರದಲ್ಲಿ ನಿಮ್ಮನ್ನು ಎಲ್ಲರು ಗೌರವಿಸುವರು. ಈ ದಿನ ಎಲ್ಲರ ಜೊತೆ ಸಮಾಧಾನವಾಗಿ ಇರುವುದು ಉತ್ತಮ,
*06,🪔ಕನ್ಯಾ ರಾಶಿ🪔*
📖,ಕಾಡಿನಲ್ಲಿ ಹುಡುಕುತ್ತಿದ್ದ ಬಳ್ಳಿ ಕಾಲಿಗೆ ತೊಡರಿಕೊಂಡಂತೆ ನಿಮ್ಮ ಪ್ರಯತ್ನಕ್ಕೆ ಭಗವಂತನು ಒಲಿದು ಬರುವನು. ಮನೆ ಬಾಗಿಲಿಗೆ ನಿಮ್ಮ ಕಾರ್ಯಗಳ ಸಫಲತೆಯ ಬಗ್ಗೆ ವಾರ್ತೆ ಬರುವುದು. ದೂರು ಪ್ರಯಾಣ ಅಥವಾ ವಿದೇಶ ಪ್ರವಾಸಕ್ಕೆ ಸಂಬಂದಿಸಿದ ಶುಭ ಸುದ್ದಿಯನ್ನು ಕೇಳುವಿರಿ,
*07,🪔ತುಲಾ ರಾಶಿ🪔*
📖,ದಿನದಿಂದ ದಿನಕ್ಕೆ ಅಭಿವೃದ್ಧಿಯನ್ನು ಹೊಂದುತ್ತಿರುವ ನಿಮ್ಮನ್ನು ಕಂಡು ಇತರರು ಅಸೂಯೆ ಪಡುವರು. ಆ ಬಗ್ಗೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ನಿಮ್ಮ ಗುಪ್ತ ವಿಚಾರಗಳ ಬಗ್ಗೆ ಗಮನವಿರಲಿ, ಕುಟುಂಬದ ವಿಚಾರಗಳಲ್ಲಿ ಮಾನಸಿಕ ಹಿಂಸೆ ಹಾಗು ತೊಂದರೆಗಳು ತಲೆದೂರಬಹುದು,
*08,🪔ವೃಶ್ಚಿಕ ರಾಶಿ🪔*
📖,ಕೇವಲ ಹಗಲುಗನಸು ಕಾಣುವುದನ್ನು ಬಿಡಿ. ನಿಮಗೆ ಮಾಡಲು ಸಾಧ್ಯವಾದುದನ್ನೆ ಆಯ್ಕೆ ಮಾಡಿಕೊಂಡು ಕೆಲಸ ಪೂರೈಸಿ. ಗೆಳೆಯರ ಒತ್ತಾಯದ ಮೇರೆಗೆ ಬಹುಪ್ರಮುಖ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗುವುದು. ಪಾಲುದಾರರು ಅಥವಾ ಸಹೋದ್ಯೋಗಿಗಳ ಕಡೆ ಗಮನವಿರಲಿ,
*09,🪔ಧನಸ್ಸು ರಾಶಿ🪔*
📖,ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆಯಿಂದ ಇರಿ. ಬ್ಯಾಂಕಿನಲ್ಲಿ ವ್ಯವಹರಿಸುವಾಗ ಬ್ಯಾಂಕಿಗೆ ಸಂಬಂಧಪಟ್ಟ ದಾಖಲೆಗಳನ್ನು ಸರಿಯಾಗಿಟ್ಟು ಕೊಳ್ಳಿ. ನಿಮ್ಮ ಗಮನವನ್ನು ಬೇರೆಡೆ ಸೆಳೆದು ಹಣ ದೋಚುವವರಿಂದ ಎಚ್ಚರದಿಂದಿರಿ, ಈ ದಿನ ಯಾವುದೇ ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುವದು ಬೇಡ, ಕುಟುಂಬದಲ್ಲಿ ಕಲಹ ಸಂಭವ,
*10,🪔ಮಕರ ರಾಶಿ🪔*
📖,ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ಜಾಗ್ರತೆ ಇರಲಿ, ಮಕ್ಕಳ ಅರೋಗ್ಯ ಹಾಗು ಅವರ ಕಡೆ ಗಮನವಿರಿಸಿ, ಹಣಕಾಸು ಉತ್ತಮವಾಗಿರುವುದು,
*11,🪔ಕುಂಭ ರಾಶಿ🪔*
📖,ಹೆಚ್ಚಿನ ವೇಗದ ಅಥವಾ ನಿರ್ಲಕ್ಷ್ಯದ ವಾಹನ ಚಾಲನೆಯು ಅಪಘಾತವನ್ನು ಉಂಟುಮಾಡುತ್ತದೆ. ಪ್ರಯಾಣದಲ್ಲಿ ರಸ್ತೆ ನಿಯಮಗಳನ್ನು ಪಾಲಿಸಿ ಮತ್ತು ಸಂಗಾತಿ ಮತ್ತು ಕುಟುಂಬದ ಜೊತೆ ವಾದವಿವಾದವನ್ನು ಮಾಡಿಕೊಳ್ಳದಿರಿ, ಭೂ ಸಂಬಂದಿತ ವ್ಯವಹಾರಗಳಲ್ಲಿ ಜಾಗ್ರತೆ ಇರಲಿ, ಈ ದಿನ ಯಾವುದೇ ವಸ್ತುಗಳನ್ನು ಖರೀದಿಸುವಾಗ ಎಚ್ಚರಿಕೆ ಇರಲಿ,
*12,🪔ಮೀನ ರಾಶಿ🪔*
📖,ಹಳೆಯ ಕಡತಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ ವಿಲೇವಾರಿ ಮಾಡಿ. ಸ್ನೇಹಿತರ ಇಲ್ಲವೆ ಬಂಧುಗಳ ಸಹಕಾರವನ್ನು ಪಡೆಯಿರಿ. ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಆಶಾದಾಯಕವಾಗಿಲ್ಲದ ಕಾರಣ ಈ ದಿನ ಹಣವನ್ನು ಮಿತವಾಗಿ ಬಳಸಿ. ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಒಂದು ಶುಭ ಸಮಾಚಾರವನ್ನು ಪಡೆಯುವ ಸಾಧ್ಯತೆ ಇದೆ,
🚩