ಬೆಂಗಳೂರು: ಆಡಳಿತದಲ್ಲಿ ಚುರುಕುಗೊಳಿಸಲು ರಾಜ್ಯ ಸತಕಾರ ಏಳು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿ ಕ್ರೈಸ್ ಕಾರ್ಯ ನಿರ್ವಾಹಕ ನಿರ್ದೇಶಕಿ ಕೆ.ಎಸ್. ಲತಾಕುಮಾರಿ ಅವರನ್ನು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಿಇಒ ಆಗಿ ವರ್ಗಾಯಿಸಿದ್ದು, ಅವರ ಸ್ಥಾನಕ್ಕೆ ಪಿ.ಎಸ್. ಕಾಂತರಾಜು ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.
ಅದೇ ರೀತಿ ಸ್ಥಳ ನಿರೀಕ್ಷಣೆಯಲ್ಲಿದ್ದ ಖುಷ್ಬೂ ಜಿ. ಚೌಧರಿ- ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್ಐಐಡಿಸಿ) ವ್ಯವಸ್ಥಾಪಕ ನಿರ್ದೇಶಕಿ. ಈ ಹುದ್ದೆಯಲ್ಲಿದ್ದ ಡಾ.ಬಿ.ಸಿ. ಸತೀಶ ಅವರನ್ನು ಬಿಬಿಎಂಪಿ ವಿಶೇಷ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.ಹಟ್ಟಿ ಚಿನ್ನದ ಗಣಿ ಕಂಪೆನಿ ಎಂಡಿ ಎಸ್.ಬಿ. ಶೆಟ್ಟೆಣ್ಣವರ್ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾಯಿಸಿದ್ದು, ಈ ಹುದ್ದೆಯಲ್ಲಿದ್ದ ಜಿ. ಸತ್ಯವತಿ ಅವರಿಗೆ ಯಾವುದೇ ಸ್ಥಳ ತೋರಿಸದೆ ವರ್ಗಾಯಿಸಲಾಗಿದೆ.ಹಿಂದೂ ಧಾರ್ಮಿಕ ದತ್ತಿ ಮತ್ತು ಧರ್ಮಾದಾಯ ಇಲಾಖೆ ಆಯುಕ್ತರಾಗಿದ್ದ ಎಚ್. ಬಸವರಾಜೇಂದ್ರ ಅವರನ್ನು ತೋಟಗಾರಿಕಾ ಇಲಾಖೆ ನಿರ್ದೇಶಕರಾಗಿ ವರ್ಗಾಯಿಸಿದ್ದು, ಅವರಿದ್ದ ಹುದ್ದೆಗೆ ಸ್ಥಳ ನಿರೀಕ್ಷಣೆಯಲ್ಲಿದ್ದ ಡಾ. ಎಂ.ವಿ. ವೆಂಕಟೇಶ್ ಅವರನ್ನು ನಿಯುಕ್ತಿಗೊಳಿಸಿದೆ. ತೋಟಗಾರಿಕಾ ಇಲಾಖೆ ನಿರ್ದೇಶಕರಾಗಿದ್ದ ಡಿ.ಎಸ್. ರಮೇಶ್ ಅವರಿಗೆ ಯಾವುದೇ ಸ್ಥಳ ತೋರಿಸದೆ ವರ್ಗಾವಣೆ ಮಾಡಲಾಗಿದೆ