ದಾವಣಗೆರೆ : ಹಿಂದುಳಿದ ಆಯೋಗದ ಅಧ್ಯಕ್ಷ ಎಚ್.ಕಾಂತರಾಜ್ ವರದಿ ವಿರುದ್ಧ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಬೆಂಗಳೂರಿನ ಏಟ್ರಿಯಾ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಪಂಚ ನಿರ್ಣಯ ತೆಗೆದುಕೊಳ್ಳಲಾಯಿತು.

ಈ ನಿರ್ಣಯಗಳನ್ನು ಓದಿದ ರಾಜ್ಯಾಧ್ಯಕ್ಷ ಶಂಕರ ಬಿದಿರೆ, ಅಖಿಲ ಭಾರತ ವೀರಶೈವ/ಲಿಂಗಾಯಿತ ಮಹಾಸಭೆಯು ಬಸವಾದಿ ತತ್ವಗಳನ್ನು ಪ್ರತಿಪಾದಿಸುತ್ತಿದ್ದು, ಸರ್ದರಿಗೂ ಲೇಸನ್ನೆ ಬಯಸುವ ಸಮತಮಾಜವನ್ನು ನಿರ್ಮಾಣ ಮಾಡಬೇಕೆಂಬ ಶರಣರ ತತ್ವದ ಆಧಾರದ ಮೇಲೆ ನಡೆಯುತ್ತಿರುವ ಸಂಸ್ಥೆಯಾಗಿದೆ.

ನಾವು ಜಾತಿಗಣತಿಯ ವಿರೋಧಿಗಳಲ್ಲ ಎಂಬುದನ್ನು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಲು ಇಚ್ಛಿಸುತ್ತೇವೆ. ಆದರೆ ಕಳೆದ 10 ವರ್ಷಗಳ ಹಿಂದೆ ನಡೆಸಲಾದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯು ಹಲವು ವೈರುದ್ಯ ಮತ್ತು ಲೋಹಗಳಿಂದ ಕೂಡಿದ್ದು, ಇದನ್ನು ಸರಿಪಡಿಸುವ ಅಗತ್ಯವಿದೆ. ಹೀಗಾಗಿ ಹೊಸದಾಗಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕೆಂದು ಮಹಾಸಭೆ ಆಗ್ರಹಿಸುತ್ತದೆ.

02. ರಾಜ್ಯ ಸರ್ಕಾರದ ಪರಿಗಣನೆಯಲ್ಲಿರುವ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸ್ಸುಗಳು, ಶ್ರೀ ಕಾಂತರಾಜು ಅಧ್ಯಕ್ಷತೆಯಲ್ಲಿ ನಡೆಸಿದ ಸಮೀಕ್ಷಾ ವರದಿಯಾಗಿದ್ದು, ಈ ವರದಿಯು ಆವೈಜ್ಞಾನಿಕ ಮತ್ತು ಆಸಂವಿಧಾನಿಕವಾದುದ್ದರಿAದ ಸ್ವೀಕಾರಕ್ಕೆ ಆರ್ಹವಲ್ಲವೆಂದು ಮಹಾಸಭೆಯು ಸ್ಪಷ್ಟವಾಗಿ ಅಭಿಪ್ರಾಯಿಸುತ್ತದೆ. ಆದ್ದರಿಂದ ಮುಖ್ಯಮಂತ್ರಿಗಳು ಈ ಕುರಿತಾದ ಯಾವುದೇ ಉದ್ದೇಶಿತ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಮಹಾಸಭೆಯು ಆಗ್ರಹಿಸುತ್ತದೆ.

3) ರಾಜ್ಯ ಹಿಂದುಳಿದ ವರ್ಗಗಳ (ಓ.ಬಿ.ಸಿ) ಪಟ್ಟಿಯಲ್ಲಿ ವಿವಿಧ ವರ್ಗಗಳ ಅಡಿಯಲ್ಲಿ ಹಲವಾರು ಲಿಂಗಾಯಿತ ಉಪಪಂಗಡಗಳ ಹೆಸರಿನ ಜೊತೆಯಲ್ಲಿ ಲಿಂಗಾಯಿತ ಪದವಿಲ್ಲದೇ ಕೇವಲ ಉಪ ಪಂಗಡಗಳ ಹೆಸರನ್ನು ಮಾತ್ರ ನಮೂದಿಸಲಾಗಿರುತ್ತದೆ. ಆದುದರಿಂದ ಉಚ್ಚ ಹಾಗೂ ಸರ್ವೋಚ್ಚ ನ್ಯಾಯಾಲಯ ಸಿವಿಲ್ ಆಫೀಲ್ ನಂ. 7241/2021 ಪ್ರಕರಣದಲ್ಲಿ ನೀಡಿರುವ ತೀರ್ಪನ್ನು ಆಧಾರವಾಗಿರಿಸಿಕೊಂಡು ಎಲ್ಲ ಲಿಂಗಾಯಿತ ಉಪಪಂಗಡಗಳ ಜೊತೆಯಲ್ಲಿ”ಲಿಂಗಾಯತ” ಎಂದು ನಮೂದಿಸಿದ ಆಯ್ಕೆಯನ್ನು ಈಗಿರುವ ಪಟ್ಟಿಯಲ್ಲಿ ಉಪಪಂಗಡಗಳಿರುವ ವರ್ಗಗಳನ್ನು ಬದಲಾಯಿಸದೇ ಸರ್ಕಾರದ ಆದೇಶಕ್ಕೆ ಸೂಕ್ತ ತಿದ್ದುಪಡಿ ತರಲು ರಾಜ್ಯ ಸರ್ಕಾರಕ್ಕೆ ಮಹಾಸಭಾ ಮನವಿ ಮಾಡಿತು.

4) ವೀರಶೈವ ಲಿಂಗಾಯಿತ ಎಲ್ಲ ಉಪಪಂಗಡಗಳನ್ನು ಕೇಂದ್ರ ಹಿಂದುಳಿದ ವರ್ಗಗಳ (ಓಬಿಸಿ) ಪಟ್ಟಿಯಲ್ಲಿ ಸೇರಿಸಬೇಕೆಂದು ಸಿಎಂ ಶಿಫಾರಸು ಮಾಡಬೇಕು ಎಂದು ಮಹಾಸಭಾ ಒತ್ತಾಯ ಮಾಡಿತು.

5) ಸಾಮಾಜಿಕ ಅಸಮಾನತೆಯ ನಿರಾಕರಣೆ ಮತ್ತು ಸಾಮಾಜಿಕ ನ್ಯಾಯ ಕುರಿತಾದ ಸರಕಾರದ ಎಲ್ಲ ಸೈದ್ದಾಂತಿಕ, ಆಡಳಿತಾತ್ಮಕ ಮತ್ತು ಕಾನೂನಾತ್ಮಕ ಪ್ರಕ್ರಿಯೆಗಳಲ್ಲಿ ವೀರಶೈವ ಲಿಂಗಾಯಿತ ಸಮುದಾಯ ಮುಂಚೂಣಿಯಲ್ಲಿ ನಿಂತು ಬೆಂಬಲಿಸುತ್ತದೆ ಎಂದು ರಾಜ್ಯಾಧ್ಯಕ್ಷ ಶಂಕರ್ ಬಿದರೆ ಮಂಡಿಸಿದ ನಿರ್ಣಯಕ್ಕೆ ಸರ್ವಾನುಮತದಿಂದ ಸಭೆ ಅಂಗೀಕರಿಸಿತು.

ಈ ಸಂದರ್ಭದಲ್ಲಿ ಡಾ. ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ , ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಜಗದೀಶ್ ಶೆಟ್ಟರ್ ಬಸವರಾಜ್ ಬೊಮ್ಮಾಯಿ ಮಂತ್ರಿಗಳಾದ ಈಶ್ವರ್ ಖಂಡ್ರೆ. ಎಂ ಬಿ ಪಾಟೀಲ್. ಶರಣಬಸಪ್ಪ ದರ್ಶನಪುರ್. ಶಿವಾನಂದ ಪಾಟೀಲ್ ಮುಖ್ಯಮಂತ್ರಿಗಳ ಸಲಹೆಗಾರರಾದ ಬಿ ಆರ್ ಪಾಟೀಲ್ ಸಂಸದರಾದ ಗದ್ದಿಗೌಡರ್ ಮತ್ತು ಸಾಗರ್ ಖಂಡ್ರೆ ಅಲ್ಲಂ ವೀರಭದ್ರಪ್ಪ ಎಂ ವೈ ಪಾಟೀಲ್ ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್, ಹಂಪನಗೌಡ ಬಾದರ್ಲಿ, ಸಿ ಎಸ್ ನಾಡಗೌಡ, ಮಾಜಿ ಶಾಸಕ ರೇಣುಕಾಚಾರ್ಯ, ಎಂಎಲ್‌ಸಿಗಳಾದ ಧನಂಜಯಸರ್ಜಿ, ನವೀನ್ ಸೇರಿದಂತೆ 55ಕ್ಕೂ ಹೆಚ್ಚು ಶಾಸಕರು ಮತ್ತು ಮಾಜಿ ಶಾಸಕರುಗಳು ಮಾಜಿ ಶಾಸಕರುಗಳು ಭಾಗವಹಿಸಿದ್ದರು. ಖಾಸಗಿ ರಾಜ್ಯ ಘಟಕದ ಅಧ್ಯಕ್ಷ ಶಂಕರ್ ಮಹಾದೇವ ಬಿದರಿ ಸ್ವಾಗತ ಮಾಡಿದರು.

ಕೋಟ್
ವೀರಶೈವ ಮಹಾಸಭಾ ಪಂಚ ನಿರ್ಣಯಗಳನ್ನು ತೆಗೆದುಕೊಂಡಿದ್ದು, ಅದಕ್ಕೆ ಬೇಕಾದ ಸಿದ್ದತೆಗಳು ನಮ್ಮ ನಾಯಕರ ನೇತೃತ್ವದಲ್ಲಿ ನಡೆಯಲಿದೆ. ಮರು ಜಾತಿಗಣತಿ, ಓಬಿಸಿಗೆ ಕೇಂದ್ರಕ್ಕೆ ಶಿಫಾರಸು ಹೀಗೆ ಹತ್ತಾರು ಬೇಡಿಕೆಗಳನ್ನು ಸರಕಾರದ ಮುಂದೂಡಿಲಾಗಿದೆ.
-ರೇಣುಕಾಪ್ರಸನ್ನ, ವೀರಶೈವಮಹಾಸಭಾದ ಮುಖಂಡ

Share.
Leave A Reply

Exit mobile version