ದಾವಣಗೆರೆ: ನಗರದ ಪಿ.ಜೆ.ಬಡಾವಣೆಯ ಕೆಲ ಭಾಗವನ್ನು ವಕ್ಫ್ ಮಂಡಳಿ ಹೆಸರಿಗೆ ಮಾಡಿರುವ ನೋಂದಣಿಯನ್ನು ಕೂಡಲೇ ರದ್ದುಪಡಿಸಬೇಕು. ಇಲ್ಲವಾದರೆ ದೊಡ್ಡ ಮಟ್ಟದ ಹೋರಾಟ ನಡೆಸಲಾಗುವುದು ಎಂದು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಕೆ.ಪ್ರಸನ್ನಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, “ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಈ ದಾಖಲೆ ತಿದ್ದುಪಡಿಯಾಗಿದೆ. 2015ರ ಮಾರ್ಚ್ನಲ್ಲಿ ಪಹಣಿಯಲ್ಲಿ ವಕ್ಫ್ ಹೆಸರು ಸೇರ್ಪಡೆಯಾಗಿದೆ. ಅಂದಿನ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳಿಗೆ ಇದ್ದ ಒತ್ತಡ ಏನು ಎಂಬುದು ಬಹಿರಂಗವಾಗ ಬೇಕು. ಸ್ಥಳ ಪರಿಶೀಲನೆ ಮಾಡದೇ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಮೈಸೂರು ಅರಸ ಜಯಚಾಮರಾ ಜೇಂದ್ರ ಒಡೆಯರ್ ಹೆಸರಿನಲ್ಲಿ ನಿರ್ಮಾಣವಾದ ಬಡಾವಣೆಯಲ್ಲಿ 80 ವರ್ಷಗಳಿಂದ ಜನರು ವಾಸವಾಗಿದ್ದಾರೆ. ಮೂರು ತಲೆಮಾರುಗಳು ಈ ಸ್ಥಳದಲ್ಲಿ ನೆಲೆಸಿವೆ. ಏಕಾಏಕಿ ಇದು ವಕ್ಫ್ ಆಸ್ತಿಯಾಗಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ. ‘ಈ ಬಡಾವಣೆಯನ್ನು ನಗರ ಸ್ಥಳೀಯ ಸಂಸ್ಥೆ ಅಭಿವೃದ್ಧಿಪಡಿಸಿ ಸಾರ್ವಜನಿಕ ರಿಗೆ ಹಂಚಿಕೆ ಮಾಡಿದೆ. ಮಧ್ಯಮ ವರ್ಗದ ಕುಟುಂಬಗಳ ವಾಸಕ್ಕೆ ಅನುಕೂಲ ಮಾಡಿಕೊಟ್ಟಿದೆ. ಬಡಾವಣೆಯ ನಿವೇಶನ ಹಾಗೂ ಮನೆಗಳು ಮಾಲೀಕರ ಹೆಸರಿನಲ್ಲಿ ನೋಂದಣಿಯಾಗಿವೆ. ಪಹಣಿಯನ್ನು ವಕ್ಫ್ ಮಂಡಳಿ ಹೆಸರಿಗೆ ಸೃಷ್ಟಿಸಿರುವುದರ ಹಿಂದೆ ಅನುಮಾನಗಳಿವೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.‘
ಆಸ್ತಿ ಮಾಲೀಕರ ಗಮನಕ್ಕೆ ಬರದೇ ಅಕ್ರಮ ಪರಭಾರೆ ನಡೆಯುತ್ತಿದೆ. ಈ ಬಗ್ಗೆ ಸಾರ್ವಜನಿಕರು ಆತಂಕಗೊAಡಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳ ಖಾತೆ ಬದಲಾವಣೆಗೆ ಸಂಬAಧಿಸಿದAತೆ ತನಿಖೆ ನಡೆಸಬೇಕು. ಇಂತಹ ಅಕ್ರಮ ನಡೆದಿದ್ದರೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಸಾರ್ವಜನಿಕರ ಪರವಾಗಿ ಬಿಜೆಪಿ ಹೋರಾಟ ನಡೆಸಲಿದೆ’ ಎಂದು ಹೇಳಿದರು. ಪಾಲಿಕೆ ಸದಸ್ಯ ಆರ್.ಶಿವಾನಂದ್, ಬಿಜೆಪಿ ಮುಖಂಡರಾದ ಸುರೇಶ್, ಮಂಜುನಾಥ್, ಜಯಪ್ರಕಾಶ್, ಯೋಗೇಶ್ ಹೆಗಪ್ಪ ಇದ್ದರು.