


ದಾವಣಗೆರೆ: ಕೆಎಸ್ ಆರ್ ಟಿಸಿ ಬಸ್ ಕಾರು ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಪರಿಣಾಮ ಅಪಘಾತದಲ್ಲಿ ಕ್ರೈಸ್ತ ಫಾದರ್ ರೊಬ್ಬರು ಮೃತಪಟ್ಟಿದ್ದಾರೆ
ಜು.23ರ ಮಂಗಳವಾರ ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಸವಳಂಗ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಕ್ರೈಸ್ತ ಧರ್ಮಗುರು ಅಂಥೋಣಿ (51) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಥೋಣಿ ಪೀಟರ್ ಶಿಕಾರಿಪುರದಲ್ಲಿ ಫಾದರ್ ಆಗಿದ್ದರು.

ಅವರೊಂದಿಗೆ ಪ್ರಯಾಣಿಸುತ್ತಿದ್ದ ಸ್ಟೀಫನ್ ಎಂಬವರು ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಂಥೋಣಿ ಪೀಟರ್ ಶಿಕಾರಿಪುರ ಕಿರಿಯ ಪುಷ್ಪ ಸಂತ ತೆರೆಸಾ ಚರ್ಚ್ ಧರ್ಮ ಗುರುಗಳಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಅವರು ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ