ದಾವಣಗೆರೆ: ಪಾಠ ಹೇಳಿಕೊಡುವ ಉಪನ್ಯಾಸಕರು ಖಾಯಂತಿಗಾಗಿ ಕಡ್ಲೇಗಿಡ ಮಾರಾಟ, ಟೀ ಮಾರಾಟ ಮಾಡುವ ಮೂಲಕ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಡಳಿತ ಭವನದ ಬಳಿ ಬಂದ ಉಪನ್ಯಾಸಕರು, ಮೊದಲು ಕಡ್ಲೇಗಿಡ, ಚಹಾ, ಸೊಪ್ಪು ಮಾರಾಟ ಮಾಡಿದರು. ಇದೇ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೋಸಗಿ ಶ್ಯಾಮಪ್ರಸಾದ್‌ ಮಾತನಾಡಿ, ಸೇವೆ ಕಾಯಂಗೆ ಒತ್ತಾಯಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಹಲವು ದಿನಗಳಿಂದ ತರಗತಿ ಬಹಿಷ್ಕರಿಸಿ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದ್ದಾರೆ.

ರಾಜ್ಯದ 430 ಸರ್ಕಾರಿ ಪದವಿ ಕಾಲೇಜುಗಳಲ್ಲಿ 11 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು 2 ದಶಕದಿಂದಲೂ ಕಡಿಮೆ ಗೌರವಧನಕ್ಕೆ ಕೆಲಸ ಮಾಡುತ್ತಿದ್ದೇವೆ. ಸೇವೆ ಕಾಯಂಗೆ ಒತ್ತಾಯಿಸಿ ರಾಜ್ಯವ್ಯಾಪಿ ವಿವಿಧ ಹಂತದ ಹೋರಾಟ ನಡೆಸಿದ್ದರೂ, ಸರ್ಕಾರ ಸ್ಪಂದಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುರೇಶ್, ಎಸ್‌.ಶುಭಾ, ಎಂ.ಜಗದೀಶ, ಎಂ.ಕೆ.ಶೀತಲ್‌, ನರೇಂದ್ರ ರಾಥೋಡ್‌, ಬಿ.ಪಿ.ರವೀಂದ್ರ, ಅನಂತಾಚಾರಿ, ಡಾ.ಸಿ.ಎಚ್.ಪ್ರವೀಣಕುಮಾರ, ಆರ್.ಸಂತೋಷಕುಮಾರ, ಎಂ.ಆರ್.ರಾಘವೇಂದ್ರ, ಬಿ.ಜಿ.ಸಿದ್ದೇಶಪ್ಪ, ಎಸ್.ವೆಂಕಟೇಶ, ಇ.ಬೋರೇಶ್, ಜಿ.ಬಿ.ಮಂಜುಳಾ, ಇ.ವಿ.ಮಾನಸ, ಎಂ.ಎಸ್.ಸ್ಮಿತಾ, ಜಿ.ಬಿ.ಅರುಣಕುಮಾರಿ, ಸಮೀನಾ ಎಂ.ರಫಿ, ಇ.ರೇಖಾ, ಟಿ.ಎಸ್‌.ಲಕ್ಷ್ಮಿದೇವಿ ಭಾಗವಹಿಸಿದ್ದರು.

Share.
Leave A Reply

Exit mobile version