ದಾವಣಗೆರೆ: ಚನ್ನಗಿರಿ ಮಾಜಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಲಂಚ ಪ್ರಕರಣಕ್ಕೆ ಹೈಕೋರ್ಟ್ ಕ್ಲಿನ್ ಚೀಟ್ ನೀಡಿದರೂ, ಅವರಿಗೆ ಈಗ ಸಂಕಷ್ಟ ಎದುರಾಗಿದೆ. 

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ ರಾಸಾಯನಿಕ ತೈಲ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಈ ಸಂದರ್ಭದಲ್ಲಿ ಲೋಕಾಯುಕ್ತ ಸಂಸ್ಥೆ 

ಹೈಕೋರ್ಟ್‌ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸಂಜಯ್ ಕುಮಾರ್ ಅವರ ಪೀಠವು ಮಾಡಾಳ್‌ ಅವರಿಂದ ಪ್ರತಿಕ್ರಿಯೆ ಕೇಳಿದೆ.   ಲೋಕಾಯುಕ್ತ ಪರವಾಗಿ ಹಿರಿಯ ವಕೀಲ ಬಸವಪ್ರಭು ಪಾಟೀಲ ಹಾಗೂ ಮಾಡಾಳ್‌ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಸಿದ್ಧಾರ್ಥ್ ಲೂತ್ರಾ ವಾದ ಮಂಡಿಸಿದ್ದರು. ಈ ಮೂಲಕ ಲೋಕಾಯುಕ್ತಕ್ಕೆ ಬಲ ಬಂದಿದ್ದು, ಮಾಡಾಳ್ ಪ್ರತಿಕ್ರಿಯೇ ಹೇಗಿರುತ್ತದೆ ಎಂದು ಕಾದು ನೋಡಬೇಕಿದೆ.

ಏನಿದು ಪ್ರಕರಣ

ಮಾಜಿ ಶಾಸಕ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಎಂಟು ಕೋಟಿ ರೂ. ನಗದು ಪತ್ತೆಯಾಗಿತ್ತು. ಬಳಿಕ, ಕೆಎಸ್​ಡಿಎಲ್ ಅಧ್ಯಕ್ಷರಾಗಿದ್ದ ಮಾಡಾಳ್ ಅವರನ್ನೂ ಲಂಚ ಪಡೆದ ಆರೋಪದಲ್ಲಿ ಬಂಧಿಸಲಾಗಿತ್ತು. ಈ ಹಣಕ್ಕೆ ನಮ್ಮ ಬಳಿ ದಾಖಲೆಗಳಿವೆ ಎಂದು ಮಾಜಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಹೇಳಿಕೊಂಡಿದ್ದರು. ನಂತರ ಲೋಕಾಯುಕ್ತ ತನ್ನ ಕೆಲಸ ಮುಂದುವರಿಸಿತ್ತು.

ಮಾಡಾಳ್ ಲಂಚ ಪ್ರಕರಣ ರದ್ದು ಮಾಡಲು ಹೈಕೋರ್ಟ್ ಏನೇಂದಿತ್ತು : 

ಚನ್ನಗಿರಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಮೇಲೆ ದಾಖಲಾಗಿದ್ದ 40 ಲಕ್ಷ ರೂ. ಲಂಚ ಸ್ವೀಕಾರಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಕೇಸ್ ಪರ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದರು. ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17ಎ ಅಡಿಯಲ್ಲಿ ಪೂರ್ವಾನುಮತಿ ಪಡೆಯದೇ ಪ್ರಕ್ರಿಯೆ ಮುಂದುವರಿಸಿದ್ದಾರೆ ಎಂದು ಅವರು ಹೈಕೋರ್ಟ್ ಗೆ ಮನವರಿಕೆ ಮಾಡಿಕೊಟ್ಟಿದ್ದರು. ಹಾಗಾಗಿ ಕೇಸ್ ನ್ನು ರದ್ದು ಮಾಡಲಾಗಿತ್ತು.

 

 

Share.
Leave A Reply

Exit mobile version