ದಾವಣಗೆರೆ : ದಾವಣಗೆರೆಯಲ್ಲಿ ನಡೆಯಲಿರುವ 24 ನೇ ಅಧಿವೇಶನದಲ್ಲಿ ಸರ್ಕಾರಕ್ಕೆ ಯಾವ ಮನವಿ ಕೊಡಬೇಕು ಎನ್ನುವ ಕುರಿತು ಸರ್ವಾನುಮತದಿಂದ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಸಕ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.
ನಗರದ ಎಂಬಿಎ ಕಾಲೇಜಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯವಾಗಿ ವೀರಶೈವ ಸಮಾಜದ ಎಲ್ಲ ಒಳಪಂಗಡಗಳಿಗೆ ಒಬಿಸಿ ಮೀಸಲಾತಿ ನೀಡಬೇಕು. ಜಾತಿ ಗಣತಿ ವರದಿ ಬಿಡುಗಡೆ ಮಾಡಬಾರದು ಎನ್ನುವುದು ಮಹಾಸಭಾದ ಎರಡು ಪ್ರಮುಖ ಒತ್ತಾಯವಾಗಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಡಾ.ಶಾಮನೂರು ಶಿವಶಂಕರಪ್ಪ ಉತ್ತರಿಸಿದರು.