
ದಾವಣಗೆರೆ: ಡಿ.23 24 ರಂದು ದಾವಣಗೆರೆಯಲ್ಲಿ ನಡೆಯಲಿರುವ ವೀರಶೈವ ಲಿಂಗಾಯತ ಮಹಾ ಅಧಿವೇಶನದಲ್ಲಿ ಸುಮಾರು 1 ಲಕ್ಷದಿಂದ 2 ಲಕ್ಷ ಜನರು ಆಗಮಿಸುವ ನಿರೀಕ್ಷೆಯಿದೆ.
ದೇಶದ ವಿವಿಧ ಭಾಗಗಳಿಂದ ಬರುವವರಿಗೆ ಈಗಾಗಲೇ ವಸತಿ ಸೇರಿದಂತೆ ಭೋಜನವ್ಯವಸ್ಥೆ ಮಾಡಲಾಗಿದೆ.ಎರಡು ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ.
ಬೆಳಗ್ಗೆ 10.30 ಕ್ಕೆ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರನ್ನು ಮೆರವಣಿಗೆ ಮೂಲಕ ವೇದಿಕೆ ಸ್ಥಳಕ್ಕೆ ಕರೆ ತರಲಾಗುವುದು ಎಂದು ಅಖಿಲಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷರಾದ ಅಣಬೇರು ರಾಜಣ್ಣ ಮಾಹಿತಿ ನೀಡಿದರು.


ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಗರದ ಪಿಬಿ ರಸ್ತೆಯಲ್ಲಿರುವ ಶ್ರೀ ಅಭಿನವ ರೇಣುಕಾಮಂದಿರದಿಂದ ಮೆರವಣಿಗೆಗೆ ಚಾಲನೆ ನೀಡಲಾಗುವುದುಎಂದರು.
ನಾಡಿನಾದ್ಯಂತದಿಂದ ಲಕ್ಷಾಂತರ ಜನರು ಆಗಮಿಸಲಿದ್ದಾರೆ ಯಾವುದೇ ರೀತಿಯ ತೊಂದರೆಗಳಾಗದಂತೆ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದೇವೆ.ವೀರಶೈವ ಮಹಾಸಭಾ ಜಿಲ್ಲಾಘಟಕದಿಂದ ಕಾರ್ಯಕ್ರಮದ ಯಶಸ್ಸಿಗಾಗಿ ಕಳೆದ 15 ದಿನಗಳಿಂದಲೂ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡುತ್ತಿದ್ದೇವೆ.ಡಿ.23 ಹಾಗೂ 24 ರಂದು ವೀರಶೈವ ಲಿಂಗಾಯತ ಸಮುದಾಯದ ಮಠಾಧೀಶರುಗಳು ಭಾಗವಹಿಸುತ್ತಿದ್ದಾರೆಂದರು.
ವಿವಿಧ ವಿಷಯಗಳ ಕುರಿತು ಗೋಷ್ಠಿ
ವಿವಿಧ ವಿಷಯಗಳ ಕುರಿತ ಗೋಷ್ಠಿಗಳು ಕೂಡ ನಡೆಯಲಿವೆ.24 ನೇ ಅಧಿವೇಶನ ಬಹಳ ದೊಡ್ಡಮಟ್ಟದಲ್ಲಿ ನಡೆಯುತ್ತಿದೆ.ಕಳೆದ 20-30 ವರ್ಷಗಳಿಂದ ಯಾವುದೇ ಪಕ್ಷವಿರಲಿ ವೀರಶೈವ ಲಿಂಗಾಯತ ಸಮಾಜ ಬಾಂಧವರಿಗೆ ಆರ್ಥಿಕ ಸೌಲಭ್ಯ ನೀಡಿಲ್ಲ.
ಒಬಿಸಿ ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯ ಮಾಡುತ್ತಿದ್ದೇವೆ ಆದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ ನಮ್ಮ ಸಮಾಜಕ್ಕೆ ಬಹಳಷ್ಟು ಅನ್ಯಾಯವಾಗುತ್ತಿದೆ ಎಂದರು.ಆದ್ದರಿಂದ ಅಧಿವೇಶನದ ಮೂಲಕ ಸರ್ಕಾರಕ್ಕೆ ನಮ್ಮ ಮನವಿ ಸಲ್ಲಿಸಲಾಗುವುದು ಎಂದರು