ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಡಿಸೆಂಬರ್ 27, 2024 ರಂದು ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಿದೆ.
ಈ ಸಂದರ್ಭದಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ಕಾಲೇಜುಗಳು ಮುಚ್ಚಲಿವೆ. ಎಲ್ಲಾ ಧ್ವಜಗಳನ್ನು ಅರ್ಧಕ್ಕೆ ಇಳಿಸಲಾಗುತ್ತದೆ. ಇನ್ನು ರಾಜಕೀಯ ನಾಯಕರಿಂದ ಶ್ರದ್ಧಾಂಜಲಿ ಸಭೆಗಳನ್ನು ಆಯೋಜಿಸಲಾಗುತ್ತಿದೆ.
ಅಂತಿಮ ವಿಧಿವಿಧಾನಗಳು ದೆಹಲಿಯಲ್ಲಿ ನಡೆಯಲಿದ್ದು, ರಾಜ್ಯದ ಪ್ರಮುಖ ನಾಯಕರು ಹಾಗೂ ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ. ಡಾ. ಮನಮೋಹನ್ ಸಿಂಗ್ ಅವರ ಸ್ಮರಣಾರ್ಥ ದೇಶಾದ್ಯಂತ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ